ಬೆಂಗಳೂರು ಮಾ.22: ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಅಳವಡಿಸಿದ್ದ ಫ್ಲೆಕ್ಸ್ ಮತ್ತು ಬ್ಯಾನರ್‌ಗಳನ್ನು ತೆರವುಗೊಳಿಸಲಾಗಿದೆ ಎಂದು ಆಯುಕ್ತ ರಾಜೇಂದ್ರ ಚೋಳನ್ ತಿಳಿಸಿದ್ದಾರೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಬೆಳಗ್ಗೆಯಿಂದ ನಮ್ಮ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ ತೆರವುಗೊಳಿಸುವ ಕಾರ್ಯ ನಿರ್ವಹಿಸುವ ಮೂಲಕ ತಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡಿದ್ದಾರೆ ಎಂದು ಶ್ಲಾಘಿಸಿದರು.
ಅನಧಿಕೃತವಾಗಿ ಫ್ಲೆಕ್ಸ್ ಮತ್ತು ಬ್ಯಾನರ್ ಅಳವಡಿಸುವುದರಿಂದ ನಗರದ ಸೌಂದರ್ಯಕ್ಕೆ ಧಕ್ಕೆಯುಂಟಾಗುತ್ತದೆ. ರಸ್ತೆಯಲ್ಲಿ ಅಡ್ಡಲಾಗಿ ಹಾಕುವುದು ಅಲ್ಲದೆ ಮರಗಳು ಹಾಗೂ ಕಂಬಗಳಿಗೆ ಹಾಕುವುದರಿಂದ ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗುವುದರ ಜತೆಗೆ ಜೋರಾದ ಮಳೆ, ಗಾಳಿ ಬಂದ ಸಂದರ್ಭದಲ್ಲಿ ಬಿದ್ದು ಸಾರ್ವಜನಿಕರಿಗೆ ಸಮಸ್ಯೆಯಾಗಲಿದೆ ಎಂಬ ಕಾರಣಕ್ಕೆ ಕೂಡಲೇ ತೆರವುಗೊಳಿಸಲು ಸೂಚನೆ ನೀಡಿದ್ದೆವು.
ಅದರಂತೆ ಆಯಾ ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ಗಳು, ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗಳು, ಸ್ವಚ್ಛತಾ ಸಿಬ್ಬಂದಿಗಳು ಸೇರಿ ಫ್ಲೆಕ್ಸ್ ಮತ್ತು ಬ್ಯಾನರ್ ತೆರವುಗೊಳಿಸಿದ್ದಾರೆ ಎಂದು ತಿಳಿಸಿದರು.
Related










