ವಿಶ್ವ ವಿಖ್ಯಾತ ಬೆಂಗಳೂರು “ಕರಗ ಶಕ್ತ್ಯೋತ್ಸವ” ಸಿದ್ದತೆ ಮಾಡಿಕೊಳ್ಳಿ: ಅವಿನಾಶ್ ಮೆನನ್ ರಾಜೇಂದ್ರನ್

ಬೆಂಗಳೂರು: ವಿಶ್ವ ವಿಖ್ಯಾತ ಬೆಂಗಳೂರು “ಕರಗ ಶಕ್ತ್ಯೋತ್ಸವ” ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಬಿಬಿಎಂಪಿ ಆಡಳಿತ ವಿಭಾಗದ ವಿಶೇಷ ಆಯುಕ್ತ ಅವಿನಾಶ್ ಮೆನನ್ ರಾಜೇಂದ್ರನ್ ಸೂಚನೆ ನೀಡಿದ್ದಾರೆ.
ಕರಗ ಮಹೋತ್ಸವ ಆಚರಣೆಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಚೇರಿಯ ಸಭಾಂಗಣ-01ರಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಕರಗ ನಡೆಯುವ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನದ ಹತ್ತಿರದ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದ್ದು, ಬಾಕಿ ಇರುವ ಕಾಮಗಾರಿಯನ್ನು ತಿಂಗಳಾಂತ್ಯದಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ತಿಳಿಸಿದರು.
ಬೆಂಗಳೂರು ನಗರ ಜಿಲ್ಲಾಧಿಕಾರಿಯಾದ ಜಗದೀಶ್ ಮಾತನಾಡಿ, ಕರಗ ಶಕ್ತ್ಯೋತ್ಸವ ಹೊರಡುವ ಮಾರ್ಗದ ರಸ್ತೆಗಳು ಹಾಗೂ ಪಾದಚಾರಿ ಮಾರ್ಗಗಳ ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕು. ಕರಗ ಉತ್ಸವ ನಡೆಯುವ ರಸ್ತೆಗಳಲ್ಲಿನ ಬೀದಿ ದೀಪಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ, ಎಲ್ಲಾ ಕಡೆ ವಿದ್ಯುತ್ ದೀಪಗಳ ಅಳವಡಿಕೆ ವ್ಯವಸ್ಥೆ ಮಾಡಬೇಕು. ವಿದ್ಯುತ್ ಸಂಪರ್ಕ ಕಡಿತಾಗೊಳ್ಳದಂತೆ ಬೆಸ್ಕಾಂ ವತಿಯಿಂದ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದರು.
ಕರಗ ಮಹೋತ್ಸವವು 4ನೇ ಏಪ್ರಿಲ್ 2025 ರಿಂದ 14ನೇ ಏಪ್ರಿಲ್ 2025 ರವರೆಗೆ ನಡೆಯಲಿದ್ದು, ಈ ವೇಳೆ ಸ್ವಚ್ಛತಾ ನಿರ್ವಹಣೆ ದೃಷ್ಟಿಯಿಂದ ಘನತ್ಯಾಜ್ಯ ವಿಭಾಗದ ಅಧಿಕಾರಿ ಹಾಗೂ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಬೇಕೆಂದು ಸೂಚಿಸಿದರು.
ಭಕ್ತಾದಿಗಳು ಹಾಗೂ ಸಾರ್ವಜನಿಕರಿಗಾಗಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಶೌಚಾಲಯಗಳ ವ್ಯವಸ್ಥೆ ಮಾಡಬೇಕು. ಜಲಮಂಡಳಿ ವತಿಯಿಂದ ಒಳಚರಂಡಿಗಳನ್ನು ಸ್ವಚ್ಛಗೊಳಿಸಿ, ಎಲ್ಲೂ ಕೊಳಚೆ ನೀರು ಹೊರಬಾರದಂತೆ ಅಗತ್ಯ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪೊಲೀಸ್ ಇಲಾಖೆಯಿಂದ ಬಂದೋಬಸ್ತ್ ವ್ಯವಸ್ಥೆ: ಸಂಚಾರ ಪೊಲೀಸ್ ವಿಭಾಗವು ಧರ್ಮರಾಯ ಸ್ವಾಮಿ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಟ್ಟಣೆಯಾಗದಂತೆ ಮಾರ್ಗ ಬದಲಾವಣೆ ಹಾಗೂ ವಾಹನಗಳ ನಿಲುಗಡೆಗೆ ಸ್ಥಳ ನಿಗದಿಪಡಿಸಬೇಕು. ಎಲ್ಲೆಂದರಲ್ಲಿ ವಾಹನಗಳ ನಿಲುಗಡೆ ಅವಕಾಶ ನೀಡದಂತೆ ಹಾಗೂ ಭಕ್ತಾದಿಗಳು ಹಾಗೂ ಸಾರ್ವಜನಿಕರ ಭದ್ರತೆಯ ಹಿತದೃಷ್ಟಿಯಿಂದ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳುವುದು.
ಸಿಸಿ ಕ್ಯಾಮೆರಾ ಅಳವಡಿಕೆ: ಕರಗ ಮಹೋತ್ಸವ ನಡೆಯುವ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು. ಬ್ಯಾರಿಕೇಡಿಂಗ್ ವ್ಯವಸ್ಥೆ ಹಾಗೂ ಅಗ್ನಿ ಅವಘಡಗಳು ಸಂಭವಿಸದಂತೆ ಅಗ್ನಿ ಶಾಮಕ ವ್ಯವಸ್ಥೆಯನ್ನು ಕೈಗೊಳ್ಳಬೇಕು.
ಆರೋಗ್ಯ ಸಿಬ್ಬಂದಿ ನಿಯೋಜನೆ: ಕರಗ ನಡೆಯುವ ದಿನಗಳಲ್ಲಿ ಕರಗ ವೀಕ್ಷಿಸಲು ಬರುವವರಿಗೆ ಆರೋಗ್ಯದಲ್ಲಿ ಏರುಪೇರಾದಲ್ಲಿ ಅವರಿಗೆ ಕೂಡಲೆ ಚಿಕಿತ್ಸೆ ನೀಡುವ ಸಲುವಾಗಿ ಪಾಲಿಕೆ ಆರೋಗ್ಯ ವಿಭಾಗದಿಂದ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಯ ನಿಯೋಜನೆ ಮಾಡಬೇಕು. ಜೊತೆಗೆ ತುರ್ತು ಚಿಕಿತ್ಸೆಗಾಗಿ ಆಂಬುಲೆನ್ಸ್ ವ್ಯವಸ್ಥೆ ಕೂಡಾ ಮಾಡಿಕೊಂಡಿರಲು ಸೂಚಿಸಿದರು.
ಕರಗ ಮಹೋತ್ವವದ ವಿವರ: * 4ನೇ ಏಪ್ರಿಲ್ 2025 ರಂದು ಶುಕ್ರವಾರ ರಾತ್ರಿ 10 ಗಂಟೆ ಹಾಗೂ ಮುಂಜಾನೆ 3 ಗಂಟೆಗೆ ‘ರಥೋತ್ಸವ ಧ್ವಜಾರೋಹಣ’ ನಡೆಯಲಿದೆ.
* 5 ರಿಂದ 8ನೇ ಏಪ್ರಿಲ್ 2025 ರವೆಗೆ ಶನಿವಾರದಿಂದ ಮಂಗಳವಾರದವರೆಗೆ ರಾತ್ರಿ 7.30ಕ್ಕೆ ‘ಪ್ರತಿದಿನ ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ’ ನಡೆಯಲಿದೆ.
* 9ನೇ ಏಪ್ರಿಲ್ 2025 ರಂದು ಬುಧವಾರ ಮುಂಜಾನೆ 3 ಗಂಟೆಗೆ ‘ಆರತಿ ದೀಪಗಳು’ ನಡೆಯಲಿದೆ.
* 10ನೇ ಏಪ್ರಿಲ್ 2025 ರಂದು ಗುರುವಾರ ಮುಂಜಾನೆ 3 ಗಂಟೆಗೆ ಸಂಪಂಗಿಕೆರೆ ಅಂಗಳದ ಶಕ್ತಿ ಪೀಠದಲ್ಲಿ “ಹಸಿ ಕರಗ” ನಡೆಯಲಿದೆ.
* 12ನೇ ಏಪ್ರಿಲ್ 2025 ರಂದು ಶನಿವಾರ ರಾತ್ರಿ 12.30ಕ್ಕೆ “ಕರಗ ಶಕ್ತ್ಯೋತ್ಸವ ಮತ್ತು ಶ್ರೀ ಧರ್ಮರಾಯ ಸ್ವಾಮಿ ಮಹೋತ್ಸವ” ನಡೆಯಲಿದೆ.
* 13ನೇ ಏಪ್ರಿಲ್ 2025 ರಂದು ಭಾನುವಾರ ರಾತ್ರಿ 2.00 ಹಾಗೂ ಮುಂಜಾನೆ 4 ಗಂಟೆಗೆ ‘ಪುರಾಣ ಪ್ರವಚನ ಹಾಗೂ ದೇವಸ್ಥಾನದಲ್ಲಿ ಗಾವು ಶಾಂತಿ’ ನಡೆಯಲಿದೆ.
* 14ನೇ ಏಪ್ರಿಲ್ 2025 ರಂದು ಸೋಮವಾರ ಸಂಜೆ 4.00 ಹಾಗೂ ರಾತ್ರಿ 12.00 ಗಂಟೆಗೆ ‘ವಸಂತೋತ್ಸವ ಧ್ವಜಾರೋಹಣ’ದ ಮೂಲಕ ಕರಗವು ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಈ ವೇಳೆ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಉದಯ್ ಬಿ. ಗರುಡಾ ಚಾರ್, ವಲಯ ಆಯುಕ್ತರಾದ ಅರ್ಚನಾ, ದಿಗ್ವಿಜಯ್ ಬೋಡ್ಕೆ, ಉಪ ಆಯುಕ್ತರಾದ ಮಂಜುನಾಥ ಸ್ವಾಮಿ, ಬಿಬಿಎಂಪಿ, ಮುಜರಾಯಿ ಇಲಾಖೆಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ದೇವಸ್ಥಾನ ವ್ಯವಸ್ಥಾಪನಾ ಸಮಿತಿಯವರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
Related


You Might Also Like
ಬೀದರ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಹಕಾರ ಸಂಘದ ವಾರ್ಷಿಕೋತ್ಸವ
ಬೀದರ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಹಕಾರ ಸಂಘವು ತನ್ನ 30ನೇ ಸಾಮಾನ್ಯ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ರಂಗಮಂದಿರದಲ್ಲಿ ಭವ್ಯವಾಗಿ ಆಚರಿಸಿತು....
ಇತ್ತೀಚಿಗೆ ಆಹಾರ ಉತ್ಪಾದನಾ ಪ್ರಮಾಣ ಕಡಿಮೆ ಆಗಿದೆ: ಸಿಎಂ ಸಿದ್ದರಾಮಯ್ಯ ಆತಂಕ
ಧಾರವಾಡ: ಸ್ವಾತಂತ್ರ್ಯದ ಹೊಸ್ತಿಲಲ್ಲಿ ಆಹಾರ ಉತ್ಪಾದನೆಯಲ್ಲಿ ಹಿಂದೆ ಇದ್ದೆವು. ಬಳಿಕ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಬೆಳೆಸಿಕೊಂಡು ರಫ್ತು ಮಾಡುವುದರಲ್ಲೂ ಮುಂದೆ ಬಂದೆವು. ಆದರೆ, ಇತ್ತೀಚಿಗೆ ಫಲವತ್ತತೆ ಕಡಿಮೆ...
ಉಪೇಂದ್ರ ದಂಪತಿಗೆ ಸೈಬರ್ ವಂಚಕರಿಂದ ಸಂಕಷ್ಟ: 1,65,000 ರೂ. ಎಗರಿಸಿದ ಹ್ಯಾಕರ್
ಬೆಂಗಳೂರು: ನಟ ಉಪೇಂದ್ರ ಹಾಗೂ ನಟಿ ಪ್ರಿಯಾಂಕ ಉಪೇಂದ್ರ ದಂಪತಿಗೆ ಸೈಬರ್ ವಂಚಕರಿಂದ ಸಂಕಷ್ಟ ಎದುರಾಗಿದೆ. ಪ್ರಿಯಾಂಕ ಉಪೇಂದ್ರ ಅವರು ಆನ್ಲೈನ್ ವಸ್ತುಗಳನ್ನು ಆರ್ಡರ್ ಮಾಡಿದ್ದಾರೆ. ಇದನ್ನೇ...
ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ ಈ ಕರ್ತವ್ಯ ತಪ್ಪದೇ ಎಲ್ಲರೂ ನಿರ್ವಹಿಸಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ. ದೇಶದಲ್ಲಿ ವಿವಿಧ ಜಾತಿ,...
ಅವನನ್ನ ಮೂರ್ಖ ಅಂತ ಕರೆಯಬೇಕು: ಪ್ರತಾಪ್ ಸಿಂಹ ಹೆಸರು ಹೇಳದೆ ಸಿಎಂ ವಾಗ್ದಾಳಿ
ಬೆಂಗಳೂರು: ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ಮಾಡಬಾರದು ಎಂಬ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ....
KSRTC: ಎಂ.ಆರ್. ಶ್ರೀನಿವಾಸಮೂರ್ತಿ ನೇತೃತ್ವದ ಏಕ ಸದಸ್ಯ ಸಮಿತಿ ಕೂಡ 38 ತಿಂಗಳ ಹಿಂಬಾಕಿ ಸರ್ಕಾರ ಕೊಟ್ಟರೆ ನೌಕರರು ಖುಷಿಯಾಗುತ್ತಾರೆ ಎಂದೇ ಶಿಫಾರಸು ಮಾಡಿದೆ
ಬೆಂಗಳೂರು: ಸಾರಿಗೆ ನೌಕರರಿಗೆ 2020 ಜನವರಿ 1ರಿಂದ ಜಾರಿಗೆ ಬಂದಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಕೊಡುವುದಕ್ಕೆ ತಾವು ಈಗಾಗಲೇ 14 ತಿಂಗಳ ಹಿಂಬಾಕಿಯಷ್ಟೇ...
ಬೆಳ್ಳಂಬೆಳಗ್ಗೆ ನಡು ರಸ್ತೆಯಲ್ಲೇ ಧಗಧಗಿಸಿದ ಬಿಎಂಟಿಸಿ ಬಸ್- ಸದ್ಯ 75 ಪ್ರಯಾಣಿಕರು ಸೇಫ್
ಬೆಂಗಳೂರು: ಚಲಿಸುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಕ್ಷಣಾರ್ಧದಲ್ಲೆ ಹೊತ್ತು ಉರಿದು ಸಂರ್ಪೂಣ ಸುಟ್ಟು ಕರಕಲಾದ ಘಟನೆ ನಗರದ ಎಚ್ಎಎಲ್ ಮುಖ್ಯದ್ವಾರದ...
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...