NEWSಕೃಷಿಸಂಸ್ಕೃತಿ

ಉತ್ತರ ಭಾರತದ ಕಲಾವಿದರಿಗೆ ಹೆಚ್ಚಿನ ಹಣ ನೀಡುವ ಬದಲು ನಮ್ಮ ನಾಡಿನ ಕಲಾವಿದರಿಗೆ ಅವಕಾಶ ನೀಡಿ : ಕುರುಬೂರು ಶಾಂತಕುಮಾರ್‌ 

ವಿಜಯಪಥ ಸಮಗ್ರ ಸುದ್ದಿ

ಮೈಸೂರು : ಮೈಸೂರಿನಲ್ಲಿ ನಡೆಯುವ ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಸಾಂಪ್ರದಾಯಿಕವಾಗಿ ನಡೆಸಲಿ ಎಂದು ಕಬ್ಬುಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ಹೇಳಿದ್ದಾರೆ.

ಕಳೆದ 2ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಸರಳ ಹಾಗೂ ಸಾಂಪ್ರದಾಯಿಕವಾಗಿ ನಡೆದ ದಸರಾ ಈ ಬಾರಿ ಸರಳಕ್ಕಿಂತ ಸಾಂಪ್ರದಾಯಿಕವಾಗಿ ನಡೆದು ಇಲ್ಲಿನ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವಂತಾಗಲಿ ಇದರಿಂದ ಇಲ್ಲಿನ ವ್ಯಾಪಾರಿಗಳಿಗೆ ಉದ್ಯಮಿಗಳಿಗೆ ಹೋಟೆಲ್ ನವರಿಗೆ ಹಾಗೂ ರಸ್ತೆ ಬದಿಯ ವ್ಯಾಪಾರಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಇನ್ನು ರಾಜ್ಯದಲ್ಲಿ ಅತಿವೃಷ್ಟಿ ಮಳೆ ಹಾನಿಯಿಂದ ನೂರಾರು ಜನರು ಸಾವಿಗೀಡಾಗಿದ್ದಾರೆ, ಸಹಸ್ರಾರು ಜನ ಮನೆ ಮಠ ಕಳೆದುಕೊಂಡಿದ್ದಾರೆ ಲಕ್ಷಾಂತರ ಎಕರೆ ಬೆಳೆ ಹಾನಿಯಾಗಿದೆ, ಇಂತಹ ವೇಳೆ ನೊಂದ ಜನರ ರಕ್ಷಣೆಗೆ ಸರ್ಕಾರ ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ನಡೆಸುವಂತಾಗಬೇಕು. ಅದ್ದೂರಿ ದಸರಾ ಹೆಸರಿನಲ್ಲಿ ಹಣ ಪೋಲಾಗುವುದನ್ನು ತಡೆಯುವುದು ಸರಕಾರ ಹಾಗೂ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸಲಹೆ ನೀಡಿದರು.

ಒಂದು ತಿಂಗಳ ಮಳೆ ಹಾನಿಯಿಂದ ನೊಂದಿರುವ ಜನರ ನೋವಿಗೆ ಸ್ಪಂದಿಸುವುದು ನಮ್ಮೆಲ್ಲರ ಕರ್ತವ್ಯವೂ ಆಗಿದೆ. ಈ ಬಾರಿ ದಸರಾವನ್ನು ಸರಕಾರವೇ ಸಂಪ್ರದಾಯಿಕವಾಗಿ ನಡೆಸಲಿ, ಖಾಸಗಿ ಪ್ರಯೋಜಕತ್ವದಲ್ಲಿ ದಸರಾ ನಡೆದರೆ ಎಲ್ಲ ಕಡೆಗಳಲ್ಲೂ ದಸರಾ ಮಹೋತ್ಸವಕ್ಕಿಂತ ಖಾಸಗಿ ಪ್ರಾಯೋಜಕತ್ವದ ಜಾಹೀರಾತುಗಳು ರಾರಾಜಿಸುತ್ತವೆ. ಇದು ಜನ ಜನಸಾಮಾನ್ಯರ ದಸರಾ ಮಹೋತ್ಸವವಾಗಿ ಉಳಿಯುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರವೆ ಪೂರ್ಣ ಪ್ರಮಾಣದಲ್ಲಿ ಸಾಂಪ್ರದಾಯಿಕವಾಗಿ ದಸರಾ ಮಹೋತ್ಸವ ನಡೆಸಬೇಖು. ಯುವ ದಸರಾ ಹೆಸರಿನಲ್ಲಿ ಉತ್ತರ ಭಾರತದ ಕಲಾವಿದರಿಗೆ ಹೆಚ್ಚಿನ ಹಣ ನೀಡುವ ಬದಲು ನಮ್ಮ ನಾಡಿನ ಕಲಾವಿದರಿಗೆ ಅವಕಾಶ ನೀಡಿ, ಅವರಿಗೆ ಹೆಚ್ಚಿನ ಗೌರವಧನ ನೀಡಬೇಖು. ಕರ್ನಾಟಕದ ಗ್ರಾಮೀಣ ಭಾಗದ ಬಹುತೇಕ ರೈತಾಪಿ ವರ್ಗದ ಕಲಾವಿದರಿಗೆ ಹೆಚ್ಚಿನ ಅವಕಾಶ ನೀಡಬೇಕೆಂದು ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ