
ಹುಬ್ಬಳ್ಳಿ: ಸರ್ಕಾರಿ ನೌಕರರಂತೆ ಸಾರಿಗೆ ನೌಕರರಿಗೂ ಸಮಾನ ವೇತನ ಮತ್ತು ಸೌಲಭ್ಯಗಳನ್ನು ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸಾರಿಗೆ ನಿಗಮಗಳ ನೌಕರರ ಕೂಟದ ಗೌರವಾಧ್ಯಕ್ಷ ಪಿ.ಎಚ್. ನೀರಲಕೇರಿ ಆಗ್ರಹಿಸಿದ್ದಾರೆ.
ಸಾರಿಗೆ ಸಂಸ್ಥೆಯ ನೌಕರರ ಬೇಡಿಕೆಗಳನ್ನು ಈಡೇರಿಸುವುದಾಗಿ ಕಾಂಗ್ರೆಸ್ ಚುನಾವಣೆ ಪೂರ್ವದಲ್ಲಿ ಭರವಸೆ ನೀಡಿದೆ. ಈಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಗಳಾಗುತ್ತಾ ಬಂದರೂ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಸೋಮವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
ಇನ್ನೂ ಕೂಡ 2024 ಜನವರಿ 1ರಿಂದ ಆಗಬೇಕಿರುವ ಸಾರಿಗೆ ನೌಕರರ ವೇತನ ಪರಿಷ್ಕರಣೆ ಆಗಿಲ್ಲ. ಜತೆಗೆ 2020ರ ಜನವರಿ 1ರಿಂದ ಅನ್ವಯವಾಗುವಂತೆ ಆಗಿರುವ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ, ನಿವೃತ್ತ ನೌಕರರಿಗೆ ಶೀಘ್ರದಲ್ಲೇ ಪಿಂಚಣಿ ನೀಡಬೇಕು ಎಂದು ಒತ್ತಾಯಿಸಿದರು.
ಇನ್ನು ಸಾರಿಗೆ ನಿಗಮಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿಲ್ಲ. 22 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಆದರೆ ಸರ್ಕಾರ ನಾವು 9 ಸಾವಿರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದ್ದೇವೆ ಎಂದು ಹೇಳಿದೆ. ಆದರೆ ಅದು ಸಮರ್ಪಕವಾಗಿ ಆಗಿಲ್ಲ. ಇನ್ನು 22 ಸಾವಿರದಲ್ಲಿ 9 ಸಾವಿರ ಹುದ್ದೆಗಳ ಭರ್ತಿಯಾದರೆ ಉಳಿದ್ದನ್ನು ಯಾರು ಮಾಡುತ್ತಾರೆ ಎಂದರು.
ಸಾರಿಗೆ ನಿಗಮಗಳ ಅಧಿಕಾರಿಗಳೂ/ನೌಕರರ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರ ಪ್ರಸ್ತುತ ಬಜೆಟ್‌ನಲ್ಲಿ 10 ಸಾವಿರ ಕೋಟಿ ರೂ.ಗಳನ್ನು ಮೀಸಲಿಡಬೇಕು. ಸರ್ಕಾರ ಬೇಡಿಕೆಗಳನ್ನು ಈಡೇರಿಸಿದರೆ ಸಾರಿಗೆ ನೌಕರರ ಒಕ್ಕೂಟಗಳನ್ನು ರದ್ದುಪಡಿಸಲು ಬದ್ಧ ಎಂದು ಇದೇ ವೇಳೆ ಹೇಳಿದರು.
ಇನ್ನು ಸಾರಿಗೆ ನಿಗಮಗಳಲ್ಲಿ ವಿದ್ಯುತ್ ಚಾಲಿತ ಬಸ್‌ಗಳ ನಿರ್ವಹಣೆಯನ್ನು ಖಾಸಗಿ ಗುತ್ತಿಗೆದಾರರಿಗೆ ನೀಡುವ ಪದ್ಧತಿ ಕೈಬಿಟ್ಟು, ಸಂಸ್ಥೆಯ ನೌಕರರು, ಸಿಬ್ಬಂದಿಯಿಂದ ನಿರ್ವಹಣೆ ಮಾಡಿಸಬೇಕು. ಹೊರಗುತ್ತಿಗೆ ಆಧಾರದ ಮೇಲೆ ಚಾಲಕ, ತಾಂತ್ರಿಕ, ಭದ್ರತಾ ಸಿಬ್ಬಂದಿಯನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಿ, ನೇರ ನೇಮಕಾತಿ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
ವಾಯವ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರು ತಮ್ಮ ವ್ಯಾಪ್ತಿಯ ಘಟಕಗಳಿಗೆ ಭೇಟಿ ನೀಡಿ ಸಿಬ್ಬಂದಿಯ ಕುಂದುಕೊರತೆ ಆಲಿಸಿ, ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಬೇಕು. ಕಾರಣ ನೌಕರರ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಭಾರಿ ಒತ್ತಡದಲ್ಲಿ ಡ್ಯೂಟಿ ಮಾಡುತ್ತಿದ್ದಾರೆ ಎಂದು ಹೇಳಿದರು.
ಒಕ್ಕೂಟದ ಪದಾಧಿಕಾರಿಗಳಾದ ಸಿದ್ದಣ್ಣ ಕುಂಬಾರ, ವಿ.ಪ್ರಸಾದ್, ವಿರುಪಾಕ್ಷಪ್ಪ, ಸುಲೋಚನಾ ರಾಜಣ್ಣ ಇದ್ದರು.
Send me my emil