Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನಿವೃತ್ತ ನೌಕರರಿಗೆ ಫ್ರೀ ಪಾಸ್‌ ಕೊಡಿ: ಹಣ ಕಟ್ಟಿದ ಮೇಲೆ ಪಾಸ್‌ ನೀಡುವುದು ಸಲ್ಲ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜಕಾರಣಿಗಳಿಗೆ ಹಾಗೂ ಸ್ವತಂತ್ರ್ಯ ಹೋರಾಟಗಾರರು ಸೇರಿದಂತೆ ಹಲವಾರು ಜನರಿಗೆ ಈಗಲೂ ಸಹ ಸಾರಿಗೆ ಸಂಸ್ಥೆ ಫ್ರೀ ಪಾಸ್‌ಗಳನ್ನು ನೀಡಿದೆ.

ಆದರೆ ಸಂಸ್ಥೆಯಲ್ಲಿ (30) ಮೂವತ್ತಕ್ಕೂ ಹೆಚ್ಚು ವರ್ಷಗಳು ದುಡಿದು ನಿವೃತ್ತರಾದಂತಹ ನೌಕರರಿಗೆ ಪ್ರತಿ ವರ್ಷ 500 ಅವರ ಪತ್ನಿಗೆ 500 ಒಟ್ಟಿಗೆ ರೂ.1000 ವರ್ಷಕ್ಕೆ ಕಟ್ಟಿಸಿಕೊಂಡು ಪಾಸನ್ನು ನೀಡುತ್ತಿದ್ದಾರೆ ಇದು ಸರಿಯಲ್ಲ.

ಸರ್ಕಾರ ಹಾಗೂ ಆಡಳಿತ ಮಂಗಳಿಗಳು ಮಾಡುತ್ತಿರುವ ಈ ತಾರತಮ್ಯತೆಯನ್ನು ಸಾರಿಗೆ ನಿವೃತ್ತ ನೌಕರರು ಈಗಲೂ ಸಹ ಸಹಿಸಿಕೊಂಡು ಹೋಗುತ್ತಿದ್ದಾರೆ.

ಆದರೆ ಇನ್ನು ಮುಂದಾದರೂ ಹಾಲಿ ನೌಕರರು ಸಂಬಂಧಪಟ್ಟವರನ್ನು ಒತ್ತಾಯಿಸಿ ಈ ಕ್ರಮ ಸರಿ ಇಲ್ಲವೆಂದು ಸರ್ಕಾರ ಹಾಗೂ ಸಾರಿಗೆ ಅಧಿಕಾರಿಗಳ ಮೇಲೆ ಒತ್ತಡ ತರುವ ಬಗ್ಗೆ ಯೋಚನೆ ಮಾಡಬೇಕಿದೆ.

ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನೀವು ಸಹ ನೀವೇ ದುಡಿದಂತ ಈ ಸಂಸ್ಥೆಗಳಲ್ಲಿ ಹಣ ಕೊಟ್ಟು ಓಡಾಡುವ ಕಾಲ ದೂರವೇನು ಇಲ್ಲ. ಆದ್ದರಿಂದ ಸಂಘಟನೆಯ ನಾಯಕರು ಇದನ್ನು ಲಘುವಾಗಿ ತೆಗೆದು ಕೊಳ್ಳದೆ ನಿಮ್ಮ ನಿಮ್ಮ ಅಜೆಂಡಾಗಳಲ್ಲಿ ಮುಖ್ಯವಾಗಿ ಈ ವಿಷಯವನ್ನು ಸೇರಿಸಬೇಕು ಹಾಗೂ ಇದರ ವಿರುದ್ಧವು ಸಹ ತಾವು ಧ್ವನಿ ಎತ್ತಬೇಕೆಂದು ನೌಕರರು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್‌ KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್‌ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್‌ ಬಂಧನ KKRTC ರಾಯಚೂರು: ಲಿಂಗಸುಗೂರು ಘಟಕ ವ್ಯವಸ್ಥಾಪಕ, ಡಿಸಿ ಅಮಾನತಿಗೆ ಕರವೇ ಆಗ್ರಹ ಮೈಸೂರು: ಸಾಲದ ಸುಳಿಗೆ ಸಿಲುಕಿದ KSRTC ಕಂಡಕ್ಟ‌ರ್: ನಾಲೆಗೆ ಹಾರಿ ಆತ್ಮಹತ್ಯೆ ಎಸ್‌.ಎಂ.ಕೃಷ್ಣ ಇನ್ನಿಲ್ಲ- ಪ್ರೇಮ ಕೃಷ್ಣಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮುಶೋಕ ಸಂದೇಶ ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನಕ್ಕೆ ಸಿಎಂ, ಮಾಜಿ ಸಿಎಂಗಳು ಸೇರಿ ಅನೇಕ ಗಣ್ಯರ ಸಂತಾಪ ಮಾಜಿ ಸಿಎಂ SMK ನಿಧನ: ನಾಳೆ ಶಾಲಾ- ಕಾಲೇಜು, ಕಚೇರಿಗಳಿಗೆ ರಜೆ ಘೋಷಣೆ ಅಕ್ರಮ ಪಡಿತರ ವಿರುದ್ಧ ವಿಶೇಷ ಕಾರ್ಯಾಚರಣೆ: ಆಹಾರ ಸಚಿವ ಮುನಿಯಪ್ಪ KSRTC ನಿವೃತ್ತ ನೌಕರರಿಗೆ ಫ್ರೀ ಪಾಸ್‌ ಕೊಡಿ: ಹಣ ಕಟ್ಟಿದ ಮೇಲೆ ಪಾಸ್‌ ನೀಡುವುದು ಸಲ್ಲ BMTC- ಅನ್ಯ ಭಾಷೆ ಆಧಾರ್‌ಕಾರ್ಡ್‌ ವಿಳಾಸ ಕರ್ನಾಟಕದಾಗಿದ್ದಲ್ಲಿ ಮಾನ್ಯ ಮಾಡಿ: ಸಿಟಿಎಂ ಆದೇಶ