NEWSನಮ್ಮಜಿಲ್ಲೆಸಂಸ್ಕೃತಿ

ಗಣೇಶ ಮೂರ್ತಿ ಪ್ರತಿಷ್ಠಾಪನೆ ಅರ್ಜಿಗಳಿಗೆ ತ್ವರಿತ ಅನುಮತಿ ನೀಡಿ: ತುಷಾರ್ ಗಿರಿನಾಥ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಬರುವ ಅರ್ಜಿಗಳನ್ನು ಪರಿಶೀಲಿಸಿ ತ್ವರಿತವಾಗಿ ಅನುಮತಿ ನೀಡಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗಣೇಶ ಚತುರ್ಥಿ ಆಚರಣೆ ಸಂಬಂಧ ಇಂದು ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗಣೇಶೋತ್ಸವ ಆಚರಣೆಗೆ ಅನುಕೂಲವಾಗುವ ದೃಷ್ಟಿಯಿಂದ ಬಿಬಿಎಂಪಿ, ಬೆಸ್ಕಾಂ, ಪೊಲೀಸ್ ಹಾಗೂ ಅಗ್ನಿಶಾಮಕ ಇಲಾಖೆಯನ್ನೊಳಗೊಂಡ ಅಧಿಕಾರಿಗಳು 63 ಉಪ ವಿಭಾಗಗಳಲ್ಲಿ ಏಕಗವಾಕ್ಷಿ ಪದ್ದತಿಯಲ್ಲಿ ಅನುಮತಿ ನೀಡುವ ವ್ಯವಸ್ಥೆ ಕಲ್ಪಿಸಿದ್ದು, ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಬಂದಂತಹ ಅರ್ಜಿಗಳನ್ನು ಪರಿಶೀಲಿಸಿ ತ್ವರಿತವಾಗಿ ಅನುಮತಿ ನೀಡಲು ಸೂಚಿಸಿದರು.

ನಗರದಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಪ್ರಮುಖ ಕಲ್ಯಾಣಿಗಳಾದ ಹಲಸೂರು, ಯಡಿಯೂರು, ಸ್ಯಾಂಕಿ, ಹೆಬ್ಬಾಳ ಸೇರಿದಂತೆ ಇನ್ನಿತರೆ ಪ್ರಮುಖ ಕಲ್ಯಾಣಿಗಳನ್ನು ಸ್ವಚ್ಛತೆ ಮಾಡಿ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು.

ಕಲ್ಯಾಣಿಗಳ ಬಳಿ ಪ್ರತ್ಯೇಕ ತಂಡಗಳನ್ನು ನಿಯೋಜಿಸಿಕೊಳ್ಳಿ ಹಾಗೂ ನುರಿತ ಈಜುಗಾರರಿರಬೇಕು. ಮುಂಜಾಗ್ರತಾ ಕ್ರಮವಾಗಿ SDRF ಹಾಗೂ Fire Department ಇಲಾಖೆಗೆ ಅಗ್ನಿಶಾಮಕ ವಾಹನ ಹಾಗೂ ಅಗತ್ಯ ಸಿಬ್ಬಂದಿಯ ವ್ಯವಸ್ಥೆ ಕಲ್ಪಿಸಲು ಕೂಡಲೆ ಪತ್ರ ಬರೆಯಬೇಕು ಎಂದು ಯೋಜನಾ ವಿಭಾಗದ ವಿಶೇಷ ಆಯುಕ್ತರಿಗೆ ಸೂಚನೆ ನೀಡಿದರು.

ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವ ವೇಳೆ ಗಣೇಶ ಮೂರ್ತಿಗಳಿಗೆ ಯಾವುದೇ ರೀತಿಯ ವಿಘ್ನ/ ಲೋಪವಾಗದಂತೆ ವಿಸರ್ಜಿಸಲು ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜನೆ ಮಾಡಿಕೊಳ್ಳಿ.

ವಿಸರ್ಜನಾ ಸ್ಥಳದಲ್ಲಿ ಭದ್ರತಾ ದೃಷ್ಟಿಯಿಂದ ಪಾಲಿಕೆ ಅಧಿಕಾರಿಗಳು/ ಮಾರ್ಷಲ್‌ಗಳ ನಿಯೋಜನೆ, ಬ್ಯಾರಿಕೇಡಿಂಗ್, ದೀಪಗಳ ಅಳವಡಿಕೆ, ಸಿಸಿ ಟಿವಿ, ಕ್ರೇನ್ ಸೇರಿದಂತೆ ಇನ್ನಿತರೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಂಡು ಯಾವುದೇ ರೀತಿಯ ಸಮಸ್ಯೆ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.

ಕಲ್ಯಾಣಿಗಳ ವ್ಯವಸ್ಥೆ ಇಲ್ಲದಿರುವ ಕಡೆ ಹೆಚ್ಚುವರಿಯಾಗಿ ತಾತ್ಕಾಲಿಕ ಮೊಬೈಲ್ ಟ್ಯಾಂಕರ್ ಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು ತೆರಳುವ ಮಾರ್ಗದಲ್ಲಿ ವಿದ್ಯುತ್ ದೀಪಗಳು ಸರಿಯಾಗಿರುವಂತೆ ನೋಡಿಕೊಳ್ಳಬೇಕು.

ವಿಸರ್ಜನಾ ಸ್ಥಳದಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ಘನತ್ಯಾಜ್ಯ ವಿಭಾಗದಿಂದ ತ್ವರಿತವಾಗಿ ವಿಲೇವಾರಿ ಮಾಡಲು ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿಲು 63 ಉಪ ವಿಭಾಗಗಳಲ್ಲಿ ಏಕಗವಾಕ್ಷಿ ಕೇಂದ್ರಗಳು ಹಾಗೂ ಗಣೇಶ ಮೂರ್ತಿ ವಿಸರ್ಜನೆ ಮಾಡುವ ಸಲುವಾಗಿ 421 ತಾತ್ಕಾಲಿಕ ಮೊಬೈಲ್ ಟ್ಯಾಂಕ್ ಮತ್ತು 37 ತಾತ್ಕಾಲಿಕ ಕಲ್ಯಾಣಿಗಳ ವ್ಯವಸ್ಥೆ ಮಾಡಲಾಗಿರುತ್ತದೆ. ಸದರಿ ಮಾಹಿತಿಗಳ ವಿವರಗಳ ಪಟ್ಟಿಗಳ ಪ್ರತಿಯನ್ನು ಲಗತ್ತಿಸಿದೆ.

ಸಭೆಯಲ್ಲಿ ಎಲ್ಲ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು, ಆಡಳಿತದ ವಿಭಾಗದ ಉಪ ಆಯುಕ್ತರು, ಮುಖ್ಯ ಅಭಿಯಂತರರು ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ