Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ಅವಲಂಬಿತರಿಗೆ ಆರ್ಥಿಕ ಬಲ ತುಂಬುವ ಕೆಲಸ: ಸಚಿವ ರಾಮಲಿಂಗಾರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮನೆಗೆ ಆಧಾರವಾಗಿದ್ದ ಸದಸ್ಯನನ್ನು ಕಳೆದುಕೊಂಡ ಕುಟುಂಬಕ್ಕೆ ಯಾವ ರೀತಿಯಿಂದಲೂ ನಷ್ಟ ಭರಿಸಲು ಸಾಧ್ಯವಿಲ್ಲ. ಆದರೆ ಆರ್ಥಿಕವಾಗಿ ಆ ಕುಟುಂಬಕ್ಕೆ ಶಕ್ತಿ ಮತ್ತು ಭದ್ರತೆ ಒದಗಿಸುವ ಜವಾಬ್ದಾರಿಯನ್ನು ನಾವು ನಿಭಾಯಿಸುವಂಥ ಕೆಲಸವನ್ನು ಮಾಡುತ್ತಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಸೋಮವಾರ ಹೊಸ ವರ್ಷದ ಅಂಗವಾಗಿ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಪಘಾತದಿಂದ ಮೃತಪಟ್ಟ ಕೆಎಸ್‌ಆರ್‌ಟಿಸಿ ನೌಕರರ ಕುಟುಂಬದ ಸದಸ್ಯರನ್ನು ಗೌರವಿಸಿ ಮಾತನಾಡಿದರು.

ಒಂದು ಕೋಟಿ ರೂ. ಹಣದಿಂದ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ, ಮನೆ ಮಾಡಿಕೊಂಡು ಯಾರನ್ನು ಅವಲಂಬಿಸದೆ ಬದುಕು ನಡೆಸಬಹುದಾಗಿದೆ. ಈ ಹಿಂದೆ ಅಪಘಾತ ಸೇರಿದಂತೆ ಇತರ ಕಾರಣಗಳಿಂದ ಮೃತಪಟ್ಟ ಕುಟುಂಬದವರಿಗೆ 3 ಲಕ್ಷ ರೂ.ಗಳನ್ನು ಮಾತ್ರ ನೀಡಲಾಗುತ್ತಿತ್ತು.

ಆದರೆ, ಈಗ ಸಾರಿಗೆ ಸುರಕ್ಷಾ ಅಪಘಾತ ವಿಮಾ ಪರಿಹಾರ ಯೋಜನೆಯಿಂದ ನಿಗಮದಲ್ಲಿ ಸೇವೆಯಲ್ಲಿರುವಾಗ ಸಿಬ್ಬಂದಿ ಖಾಸಗಿ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟಲ್ಲಿ, ಅಂಗನ್ಯೂನತೆಗೆ ಒಳಗಾದಲ್ಲಿ ಸಿಬ್ಬಂದಿಗೆ ಹೆಚ್ಚಿನ ಮೊತ್ತದ ಆರ್ಥಿಕ ಪರಿಹಾರ ಒದಗಿಸುವ ಮೂಲಕ ಅವರ ಜೀವನಕ್ಕೆ ಭದ್ರತೆ ಒದಗಿಸುವ ಉದ್ದೇಶದಿಂದ 50 ಲಕ್ಷ ರೂ. (ಯುನೈಟೆಡ್ ಇಂಡಿಯಾ ಇನ್ಸುರೆನ್ಸ್) ಹಾಗೂ ಎಸ್‌ಬಿಐ ಇನ್ಸುರೆನ್ಸ್ ಅಡಿಯಲ್ಲಿ 50 ಲಕ್ಷ ರೂ. ನೀಡಲಾಗುತ್ತಿದೆ.

ಈಗಾಗಲೇ ಈ ಯೋಜನೆಗಳಡಿಯಲ್ಲಿ ಕರ್ತವ್ಯ ನಿರತ ಸಿಬ್ಬಂದಿ ಅಪಘಾತದಲ್ಲಿ ಮೃತಪಟ್ಟರೆ ಅವರ ಕುಟುಂಬಗಳಿಗೆ ಒಂದು ಕೋಟಿ ರೂಪಾಯಿ ಅಪಘಾತ ವಿಮಾ ಮೊತ್ತವನ್ನು ನೀಡಲಾಗುತ್ತಿದೆ. ಇದು ನಿಗಮದ ನೌಕರರು ಇಲ್ಲದೆ ಹೋದ ಸಮಯದಲ್ಲಿ ಅವರ ಕುಟುಂಬಕ್ಕೆ ಬಹುದೊಡ್ಡ ಆಸರೆಯಾಗಿದೆ ಎಂದು ತಿಳಿಸಿದರು.

12 ಸಿಬ್ಬಂದಿಗೆ ತಲಾ ಒಂದು ಕೋಟಿ ರೂ. ವಿತರಣೆ: ಇದೇ ವೇಳೆ ಅಪಘಾತದಲ್ಲಿ ಮೃತಪಟ್ಟ ಮೂವರು ಸಿಬ್ಬಂದಿಯ ಅವಲಂಬಿತ ಕುಟುಂಬಕ್ಕೆ ತಲಾ ಒಂದು ಕೋಟಿ ರೂ. ಪರಿಹಾರ ವಿತರಣೆ ಮಾಡಿದರು. ಕಳೆದ ಒಂದು ವರ್ಷದಲ್ಲಿ ಅಪಘಾತದಲ್ಲಿ ಮೃತಪಟ್ಟಿದ್ದ ಒಟ್ಟು 12 ಸಿಬ್ಬಂದಿಯ ಅವಲಂಬಿತರಿಗೆ ತಲಾ ಒಂದೊಂದು ಕೋಟಿ ರೂ. ಪರಿಹಾರದ ಮೊತ್ತವನ್ನು ಪಾವತಿಸಲಾಗಿದೆ ಎಂದು ತಿಳಿಸಿದರು.

ಇನ್ನು ಇದೇ ಕಾರ್ಯಕ್ರಮದಲ್ಲಿ ಮೃತ ನೌಕರರ ಕುಟುಂಬದ ಸದಸ್ಯರಿಗೆ ಸೀರೆ ಮತ್ತು ಸಿಹಿಯನ್ನು ನೀಡಿ ಗೌರವಿಸಲಾಯಿತು. ಈ ವೇಳೆ ನಿಗಮದ ವ್ಯವಸ್ಥಾಪಕ ನಿದೇರ್ಶಶಕ ವಿ.ಅನ್ಬುಕುಮಾರ್ ಸೇರಿದಂತೆ ಮತ್ತಿತರರು ಅಧಿಕಾರಿಗಳು ಹಾಗೂ ಮೃತ ನೌಕರರ ಕುಟುಂಬದವರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ