NEWSನಮ್ಮಜಿಲ್ಲೆನಮ್ಮರಾಜ್ಯ

ಗೋವಾ ಮಾದರಿ ಗುಡ್ಡ ಕಡಿತ ನಿಷೇಧಿಸಿ: ಎಎಪಿಯ ಜಗದೀಶ್‌ ವಿ. ಸದಂ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅಭಿವೃದ್ಧಿ ಹೆಸರಿನಲ್ಲಿ ಹೆದ್ದಾರಿಗಳ ನಿರ್ಮಾಣಕ್ಕಾಗಿ ಗುಡ್ಡಗಳನ್ನು ಅವ್ಯಾಹತವಾಗಿ ಕಡಿಯುವುದನ್ನು ನಿಷೇಧಿಸಿ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ. ಸದಂ ಒತ್ತಾಯಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ನಡೆದ ಗುಡ್ಡ ಕುಸಿತ ದುರಂತಕ್ಕೆ ಸಂಬಂಧಿಸಿ ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಜಗದೀಶ್‌ ವಿ. ಸದಂ, ಅವೈಜ್ಞಾನಿಕವಾಗಿ ಗುಡ್ಡಗಳನ್ನು ಕಡಿದು ಹೆದ್ದಾರಿ ನಿರ್ಮಿಸಿರುವುದೇ ಅನಾಹುತಕ್ಕೆ ಕಾರಣವಾಗಿದೆ. ಇದಕ್ಕೆ ಐಆರ್‌ಬಿ ಗುತ್ತಿಗೆದಾರ ಕಂಪನಿ ನೇರ ಹೊಣೆಯಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಗುತ್ತಿಗೆದಾರ ಕಂಪನಿಯು ದುರ್ಮರಣಕ್ಕೀಡಾದವರ ಕುಟುಂಬಕ್ಕೆ ಕೂಡಲೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಗುತ್ತಿಗೆದಾರ ಕಂಪನಿಯಲ್ಲಿ ಕೇಂದ್ರದ ಪ್ರಭಾವಿ ಸಚಿವರೊಬ್ಬರ ಪಾಲುದಾರಿಕೆ ಇದೆ ಎನ್ನಲಾಗಿದೆ. ಸಂಸದ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಅವರ ಮೌನ ಇದನ್ನು ಪುಷ್ಠೀಕರಿಸುತ್ತಿದೆ. ಉತ್ತರ ಕನ್ನಡ ಜಿಲ್ಲೆಯು ಪರಿಸರ ಸೂಕ್ಷ್ಮ ಪ್ರದೇಶವಾಗಿದೆ. ಪರಿಸರ ಸಂವೇದಿ ಪ್ರದೇಶದಲ್ಲಿ ಯಾವುದೇ ಯೋಜನೆಗಳನ್ನು ಕೈಗೊಳ್ಳುವ ಮೊದಲು ಪರಿಸರಕ್ಕೆ ಹಾನಿಯಾಗದಂತೆ ಮುಂಜಾಗ್ರತೆ ವಹಿಸಿ ಕೆಲಸ ಮಾಡಬೇಕು ಎಂದರು.

ಇನ್ನು ಮುಂದಾಗುವ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು. ಗೋವಾ ರಾಜ್ಯದಲ್ಲಿ ಈಗಾಗಲೇ ಗುಡ್ಡ ಕಡಿಯುವುದನ್ನು ನಿರ್ಬಂಧಿಸಲಾಗಿದೆ. ಅದೇ ಮಾದಿಯಲ್ಲಿ ನಮ್ಮ ರಾಜ್ಯದಲ್ಲೂ ಗುಡ್ಡ ಕಡಿಯುವುದನ್ನು ನಿರ್ಬಂಧಿಸಬೇಕು. ಬಾಂಬೆ-ಪುಣೆ ಮಾದರಿಯಲ್ಲಿ ಕಾಮಗಾರಿ ಕೈಗೊಳ್ಳಬೇಕು ಎಂದು ಜಗದೀಶ್‌ ಸದಂ ಮನವಿ ಮಾಡಿದರು.

ಗುಡ್ಡದ ಮಧ್ಯೆ ರಸ್ತೆಗಳನ್ನು ನಿರ್ಮಿಸುವಾಗ ಬ್ರಿಟಿಷರ ಮಾದರಿಯ ತಡೆಗೋಡೆಗಳನ್ನು ಕಟ್ಟಬೇಕು. ದೇಶದಾದ್ಯಂತ ಬೆಟ್ಟಗುಡ್ಡಗಳ ನಡುವೆ ಬ್ರಿಟಿಷರು ನೂರಾರು ರೈಲ್ವೆ ಹಳಿಗಳನ್ನು ನಿರ್ಮಿಸಿದ್ದಾರೆ. ಬೃಹತ್‌ ಬೆಟ್ಟಗಳನ್ನು ಕೊರೆದಿದ್ದಾರೆ, ಸುರಂಗಗಳನ್ನು ನಿರ್ಮಿಸಿದ್ದಾರೆ. ಆದರೆ ಅವುಗಳಿಂದ ಗುಡ್ಡ ಕುಸಿತದಂತಹ ಅವಘಡಗಳು ಸಂಭವಿಸಿರುವ ಉದಾಹರಣೆಗಳು ಬಹಳ ಕಡಿಮೆ.

ಆದರೆ ಈಗೀಗ ನಿರ್ಮಾಣಗೊಳ್ಳುತ್ತಿರುವ ಪ್ರತಿ ಕಾಮಗಾರಿಗಳಲ್ಲೂ ಏನಾದರೊಂದು ಅನಾಹುತಗಳು ಸಂಭವಿಸುತ್ತಿವೆ. ಜನರ ತೆರಿಗೆ ಹಣದಲ್ಲಿ ಕೋಟ್ಯಂತರ ವ್ಯಯಿಸಿ ನಿರ್ಮಾಣಗೊಳ್ಳುತ್ತಿರುವ ಇಂತಹ ಯೋಜನೆಗಳು ದುರಂತಗಳಿಗೆ ದಾರಿಯಾಗುತ್ತಿರುವುದು ಬೇಸರದ ಸಂಗತಿ. ಭ್ರಷ್ಟಾಚಾರ ನಿರ್ಮೂಲನೆಯಾಗದ ಹೊರತು ಸದೃಢ ಕಾಮಗಾರಿ ಅಸಾಧ್ಯ ಎಂದು ಬೇಸರ ವ್ಯಕ್ತಪಡಿಸಿದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?