NEWSಕೃಷಿನಮ್ಮರಾಜ್ಯ

ರಾಜ್ಯದ ಹಿತಾಶಕ್ತಿಗಾಗಿ ಮೇಕೆದಾಟು ಯೋಜನೆ ತುರ್ತಾಗಿ ನಡೆಸಿ : ಕುರುಬೂರ್ ಶಾಂತಕುಮಾರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾವೇರಿ ಅಂತಿಮ ತೀರ್ಪಿನಲ್ಲಿ ಸೂಚಿಸಿರುವ ತಮಿಳುನಾಡಿನ 179 ಟಿಎಂಸಿ ಹಂಚಿಕೆ ನೀರನ್ನು ಹರಿಸಿ ಹೆಚ್ಚುವರಿ ನೀರನ್ನು ರಾಜ್ಯಕ್ಕೆ ಬಳಸಿಕೊಳ್ಳಲು ಅಗತ್ಯವಾಗಿ ಮೇಕೆದಾಟು ಅಣೆಕಟ್ಟೆ ನಿರ್ಮಿಸಲು ರಾಜ್ಯ ಸರ್ಕಾರ ಕೂಡಲೇ ಕಾಮಗಾರಿ ಕೈಗೆತ್ತಿಕೊಳ್ಳಬೇಕು. ತಮಿಳುನಾಡಿನ ಒತ್ತಡದ ಮುಲಾಜಿಗೆ ಮಣಿಯಬಾರದು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಒತ್ತಾಯಿಸಿದ್ದಾರೆ.

ಇಂದು ರಾಜ್ಯದ ಕಬ್ಬು ಬೆಳೆಗಾರರ ಬಾಕಿ ಹಣ ಕೊಡಿಸುವ ಬಗ್ಗೆ ನ್ಯಾಯಾಲಯದಲ್ಲಿರುವ ತಡೆಯಾಜ್ಞಾ ತೆರವುಗೊಳಿಸುವ ಬಗ್ಗೆ ಪ್ರಸಕ್ತ ಸಾಲಿನ ಕಬ್ಬಿನ ದರ ನಿಗದಿಪಡಿಸುವ ಬಗ್ಗೆ ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಜತೆ ರಾಜ್ಯ ಕಬ್ಬು ಬೆಳೆಗಾರ ಸಂಘದ ಪದಾಧಿಕಾರಿಗಳು ಕೃಷಿ ಮಾರುಕಟ್ಟೆ ಸಬಾಂಗಣದಲ್ಲಿ ಚರ್ಚಿಸಿದ ಬಳಿಕ ಮಾತನಾಡಿದರು.

ಕೇಂದ್ರ ಸರ್ಕಾರ ಭತ್ತಕ್ಕೆ ಬೆಂಬಲ ಬೆಲೆ ಏರಿಕ್ಕೆ ಮಾಡಿರುವುದು ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತಾಗಿದೆ ಒಂದು ಚೀಲ ಗೊಬ್ಬರಕ್ಕೆ 500ರೂ ಏರಿಕೆಯಾಗಿದೆ ರೈತರ ಬತ್ತಕ್ಕೆ 140ರೂ ಮಾತ್ರ ಏರಿಕೆ ಯಾಕೆ?

ಗೋಹತ್ಯ ನಿಷೇಧ ಕಾಯ್ದೆ ರದ್ದು ಬೇಡ ರಾಜಕೀಯ ಪಕ್ಷಗಳು ಗೋವುಗಳ ವಿಚಾರದಲ್ಲಿ ರಾಜಕಾರಣ ಮಾಡಬಾರದು ಕೋಣನಿಗೂ ಹಸುವಿಗೂ ಹೋಲಿಕೆ ಮಾಡಿರುವುದು ಸರಿಯಲ್ಲ. ಹಸುಗಳು ರೈತರ ಬದುಕಿಗೆ ಆಸರೆಯಾಗಿ ಜೀವನಾಡಿಯಾಗಿ ಕಾಯಕ ಮಾಡುತ್ತವೆ. ರೈತರು ಗೌರವ ಭಾವನೆಯಿಂದ ಪೂಜಿಸುತ್ತೇವೆ ಗೋವುಗಳನ್ನು ಹತ್ಯೆ ಮಾಡಿದರೆ ಏನು ತಪ್ಪು ಎಂದು ಹೇಳುವುದು ಒಪ್ಪುವಂತದ್ದಲ್ಲ ಎಂದು ಹೇಳಿದರು.

ಕಾನೂನಿನಲ್ಲಿರುವ ಅಡೆ ತಡೆಗಳನ್ನು ನಿವಾರಿಸಿ ತಪ್ಪೇನಿಲ್ಲ. ಗೋಹತ್ಯೆ ಕಾಯ್ದೆ ರದ್ದು ಮಾಡಲು ರೈತರು ಒಪ್ಪುವುದಿಲ್ಲ ಎಂದ ಅವರು, ಕಾಡು ಪ್ರಾಣಿಗಳ ಹಾವಳಿಯಿಂದ ಕಾಡಂಚಿನ ಭಾಗದ ರೈತರ ಬದುಕು ಭಯದಿಂದ ತತ್ತರಿಸುತ್ತಿದೆ ಕಾಡಿನ ಒಳಗೆ ಇರುವ ಎಲ್ಲ ರೆಸಾರ್ಟ್‌ಗಳು, ಮೋಜಿನತಾಣಗಳನ್ನು ಬಂದ್ ಮಾಡಲು, ಗಣಿಗಾರಿಕೆಯನ್ನು ನಿಲ್ಲಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ವೇಳೆ ಕಬ್ಬು ಹಾಗೂ ಸಕ್ಕರೆ ಅಭಿವೃದ್ಧಿ ಆಯುಕ್ತ ಶಿವಾನಂದ ಕೆಲಗಿರಿ, ರೈತ ಮುಖಂಡರಾದ ರೇವಣ್ಣಯ್ಯ ಹಿರೇಮಠ ಪರಶುರಾಮ್ ಎತ್ತಿನ ಗುಡ್ಡ, ಎನ್‌.ಎಚ್. ದೇವಕುಮಾರ, ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಕಾನೂನು ಸಲಹೆಗಾರ ಕಿಸಾನ್, ನರಸಿಂಹಮೂರ್ತಿ, ಸಿದ್ದಲಿಂಗ ಒಡೆಯರ್, ಮಹಾಂತೇಶ್ ಕರಟಗಿ ಇದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು