NEWSನಮ್ಮರಾಜ್ಯಶಿಕ್ಷಣ-

ಜು.22ರಂದು ಬೆಂವಿವಿಯ ಸಂವಹನ ವಿಭಾಗದ ಸುವರ್ಣ ಮಹೋತ್ಸವ- ರಾಷ್ಟ್ರೀಯ ಸಮ್ಮೇಳನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದ ಸುವರ್ಣ ಮಹೋತ್ಸವದ (1973-2023) ಅಂಗವಾಗಿ (ಮೀಡಿಯಾ ಎಜ್ಯುಕೇಷನ್: ಎ ಲೆಗಸಿ ಟು ಹೋಲ್ಡ್, ಎ ಫ್ಯೂಚರ್ ಟು ಬಿಲ್ಡ್) “ಮೀಡಿಯಾ ಸ್ಪಿಯರ್- 2024, “ಭಾರತೀಯ ಮಾಧ್ಯಮ ಉದ್ಯಮದ” ರೂಪಾಂತರ” ರಾಷ್ಟ್ರೀಯ ಸಮ್ಮೇಳನ ಜುಲೈ 22ರಂದು ಹಮ್ಮಿಕೊಳ್ಳಲಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗ, ಭಾರತೀಯ ಸಂವಹನ ಕಾಂಗ್ರೆಸ್ (ಐಸಿಸಿ) ಹಾಗೂ ಕರ್ನಾಟಕ ರಾಜ್ಯ ಪತ್ರಿಕೋದ್ಯಮ ಮತ್ತು ಸಂವಹನ ಶಿಕ್ಷಕರ ಸಂಘ (ಕೆಎಸ್ ಜೆಸಿಟಿಎ) ಸಹಯೋಗದೊಂದಿಗೆ ನಾಳೆ ಬೆಳಗ್ಗೆ 10:30ಕ್ಕೆ ಜ್ಞಾನಭಾರತಿ ಆವರಣದಲ್ಲಿರುವ ಪ್ರೊ.ವೆಂಕಟಗಿರಿಗೌಡ ಮೆಮೋರಿಯಲ್ ಆಡಿಟೋರಿಯಂನಲ್ಲಿ ಸಮಾರಂಭ ಜರುಗಲಿದೆ.

ಬೆಂವಿವಿಯ ಕುಲಪತಿಗಳಾದ ಪ್ರೊ. ಡಾ. ಜಯಕರ ಶೆಟ್ಟಿ ಎಂ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ ಉಪಾಧ್ಯಕ್ಷ ಪ್ರೊ. ಎಸ್.ಆರ್. ನಿರಂಜನ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಕೆ. ರವಿ ಪ್ರಮುಖ ಉಪನ್ಯಾಸ ನೀಡಲಿದ್ದಾರೆ.

ಭೂಪಾಲ್‌ನ ಪತ್ರಿಕೋದ್ಯಮ ಮತ್ತು ಸಂವಹನ ಮಖನ್ ಲಾಲ್ ಚತುರ್ವೇದಿ ರಾಷ್ಟ್ರೀಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಕೆ.ಜಿ. ಸುರೇಶ್, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ನಿರಂಜನ ವಾನಳ್ಳಿ, ಪಶ್ಚಿಮ ಬಂಗಾಳದ ವಿಶ್ವ ಭಾರತಿ ಕೇಂದ್ರೀಯ ವಿಶ್ವವಿದ್ಯಾಲಯದ ಮುಖ್ಯಸ್ಥರಾಗಿರುವ ಪ್ರೊ. ಬಿಪ್ಲಾಬ್ ಲೋಹೋ ಚೌದರಿ, (ಒಡಿಶಾ) ಭುವನೇಶ್ವರ್ ನ ಉತ್ಕಲ್ ವಿಶ್ವವಿದ್ಯಾಲಯದ ಮಾಧ್ಯಮ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಪ್ರೊ. ಉಪೇಂದ್ರ ಪಾಢಿ, ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಶೈಕ್ ಲತೀಫ್, ಬೆಂಗಳೂರು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ. ಶ್ರೀನಿವಾಸ್ ಚೌಡಪ್ಪ, ಬೆಂಗಳೂರು ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಡಾ. ಎಂ.ಸುನೀತಾ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗವು ಸುವರ್ಣ ಮಹೋತ್ಸವ ಮತ್ತು ಒಂದು ದಿನದ ರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭವು ಜುಲೈ 22ರಂದು ಸಂಜೆ 4 ಗಂಟೆಗೆ ನಡೆಯಲಿದ್ದು, ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಷಾ ಖಾನಂ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ. ಬಿ. ಶೈಲಶ್ರೀ, ಪ್ರಾಧ್ಯಾಪಕ ಡಾ. ಎನ್. ಸಂಜೀವ ರಾಜ್, ಸಹಾಯಕ ಪ್ರಾಧ್ಯಾಪಕ ಡಾ. ವಸುಂಧರಾ ಪ್ರಿಯದರ್ಶಿನಿ, ಬೋಧಕೇತರ ಸಿಬ್ಬಂದಿ ವರ್ಗದವರು, ಸಂಶೋಧನಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ