NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ 3 ನಿಗಮಗಳ ನೌಕರರಿಗೆ ಗುಡ್‌ನ್ಯೂಸ್‌:  ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ಶೀಘ್ರದಲ್ಲೇ ಜಾರಿ- ರಾಮಲಿಂಗಾರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ನಿಗಮದಲ್ಲಿ ಅಧಿಕಾರಿಗಳು/ ನೌಕರರಿಗೆ ಜಾರಿಗೆ ತಂದಿರುವ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಯನ್ನು ಉಳಿದ ಮೂರು ಸಾರಿಗೆ ನಿಗಮಗಳಲ್ಲೂ ಶೀಘ್ರವಾಗಿ ಜಾರಿಗೆ ತರಬೇಕೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಿದೆ.

ಈ ವಿಷಯಕ್ಕೆ ಸಂಬಂಧಪಟ್ಟಂತೆ ಸಾರಿಗೆ ನೌಕರರ ಹಲವು ವರ್ಷಗಳ ಅತೀ ಮುಖ್ಯ ಬೇಡಿಕೆಗಳಲ್ಲಿ ಒಂದಾಂದ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಯನ್ನು ಕೆಎಸ್ಆರ್ಟಿಸಿ ನಿಗಮದಲ್ಲಿ ಕಳೆದ ಜನವರಿ 6-2025 ರಂದು ಮುಖ್ಯಮಂತ್ರಿಗಳು ಉದ್ಘಾಟಿಸುವ ಮೂಲಕ ಚಾಲನೆ ನೀಡಿದ್ದಾರೆ.

ಆ ವೇದಿಕೆಯಲ್ಲಿ ತಾವು ಮಾತನಾಡಿದ ಸಂದರ್ಭದಲ್ಲಿ ಮಾರ್ಚ್ 2025ರ ಒಳಗೆ ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ, ಕೆಕೆಆರ್‌ಟಿಸಿಯ ಈ ಮೂರು ನಿಗಮಗಳಲ್ಲಿ ಈ ಯೋಜನೆ ಜಾರಿಗೆ ತರಬೇಕೆಂದು ಹೇಳಿದ್ದೀರಿ.

ಆದರೆ, ಈಗಾಗಲೇ ಸುಮಾರು 8 ತಿಂಗಳುಗಳು ಕಳೆದಿದ್ದು, ಈ ಮೂರು ನಿಗಮಗಳ ನೌಕರರು ಮತ್ತು ಕುಟುಂಬ ಸದಸ್ಯರು ಯಾವಾಗ ನಮ್ಮ ನಿಗಮಕ್ಕೆ ಈ ನಗದು ರಹಿತ ಆರೋಗ್ಯ ಭಾಗ ಯೋಜನೆ ಜಾರಿಗೆ ಬರುತ್ತದೆ ಎಂದು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

ಆದ್ದರಿಂದ ಕೆಎಸ್ಆರ್ಟಿಸಿ ನಿಗಮದಲ್ಲಿ ಜಾರಿಗೆ ತಂದಿರುವ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಯನ್ನು ಈ ಮೂರು ಸಾರಿಗೆ ನಿಗಮಗಳಲ್ಲಿ ಶೀಘ್ರವಾಗಿ ಜಾರಿಗೆ ತರಬೇಕೆಂದು ಸಮಸ್ತ ಸಾರಿಗೆ ನೌಕರರ ಮತ್ತು ಕುಟುಂಬ ಸದಸ್ಯರ ಪರವಾಗಿ ಮನವಿ ಮಾಡಿದ್ದಾರೆ.

ಕೂಟದ ರಾಜ್ಯಾಧ್ಯಕ್ಷ ಆರ್‌.ಚಂದ್ರಶೇಖರ್‌ ನೇತೃತ್ವದಲ್ಲಿ ಪದಾಧಿಕಾರಿಗಳು ಸಲ್ಲಿಸಿದ ಮನವಿ ಸಸ್ವೀಕರಿಸಿದ ಸಚಿವ ರಾಮಲಿಂಗಾರೆಡ್ಡಿ ಅವರು, ನಾವು ಈಗಾಗಲೇ ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಡಿಸೆಂಬರ್‌ ವೇಳೆಗೆ ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಕೆಕೆಆರ್‌ಟಿಸಿಯ ಮೂರು ನಿಗಮಗಳಲ್ಲಿ ಎಚ್‌ಆರ್‌ಎಂಎಸ್‌ (HRMS) ಪೂರ್ಣ ಪ್ರಮಾಣದಲ್ಲಿ ಅಳವಡಿಕೆ ಆಗಲಿದ್ದು, 2026ರ ಜನವರಿ ಮೊದಲ ವಾರದಲ್ಲೇ ಯೋಜನೆ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

ಅಲ್ಲದೆ ಏನು ಕೆಎಸ್‌ಆರ್‌ಟಿಸಿ ನಿಗಮದಂತೆ ಈ ಮೂರು ನಿಗಮಗಳ ನೌಕರರಿಗೆ ಯೋಜನೆಯನ್ನು ವಿಧಾನಸೌಧದಲ್ಲೇ ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸುವ ಮೂಲಕ ರಹಿತ ವೈದ್ಯಕೀಯ ಚಿಕಿತ್ಸೆಗೆ ಚಾಲನೆ ನೀಡುವರು ಎಂದು ತಿಳಿಸಿದ್ದಾರೆ.

ಕೂಟದ ಪದಾಧಿಕಾರಿಗಳಾದ ಲೋಕೇಶ್‌, ಶ್ರೀನಿವಾಸ್‌, ಅಂಬರೀಶ್‌ ಸೇರಿದಂತೆ ಹಲವು ಇದ್ದರು.

Megha
the authorMegha

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ