NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರಿಗೆ ಗುಡ್‌ನ್ಯೂಸ್‌ : ಷರತ್ತಿಲ್ಲದೆ ವಜಾಗೊಂಡ ನೌಕರರ ಮರು ನೇಮಕಕ್ಕೆ ಒಪ್ಪಿದ ಸಚಿವ ಶ್ರೀರಾಮುಲು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಳೆದ 2021ರ ಏಪ್ರಿಲ್‌ 7 ರಿಂದ 21ರವರೆಗೆ ವೇತನ ಸೇರಿದಂತೆ ಇತರ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಕೈಗೊಂಡ ಮುಷ್ಕರದ ವೇಳೆ ಸೇವೆಯಿಂದ ವಜಾಗೊಂಡಿರುವ  ಎಲ್ಲ ನೌಕರರನ್ನು ಯಾವುದೇ ಷರತ್ತು ಇಲ್ಲದೇ ಒಂದು ವಾರದೊಳಗೆ ಮರು ನೇಮಕ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಶಾಂತಿನಗರದಲ್ಲಿರುವ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ  ನೌಕರರ ಮರು ನೇಮಕ ಸಂಬಂಧ ಶನಿವಾರ ಮಧ್ಯಾಹ್ನ   ಶ್ರೀರಾಮುಲು ಅವರ ನೇತೃತ್ವದಲ್ಲಿ ನಡೆದ ಎಲ್ಲ ಸಂಘಟನೆಗಳ ಪದಾಧಿಕಾರಿಗಳ ಸಭೆಯಲ್ಲಿ  ಈ ವಿಷಯವನ್ನು ಸಚಿವರು ತಿಳಿಸಿದರು.

ಸಭೆಯಲ್ಲಿ ಭಾಗವಹಿಸಿದ್ದ ನೌಕರರ ಪರ ಸಂಘಟನೆಗಳ ಪದಾಧಿಕಾರಿಗಳು ಇದಕ್ಕೂ ಮುನ್ನ ತಮ್ಮ ಬೇಡಿಕೆಗಳನ್ನು ಇಟ್ಟರು. ಈ ವೇಳೆ ಸಚಿವರು ನಿಮ್ಮ ಒತ್ತಾಯದ ಮೇರೆಗೆ ವಜಾಗೊಳಿಸಿರುವ ಎಲ್ಲ ನೌಕರರನ್ನು ಯಾವುದೇ ಷರತ್ತು ಇಲ್ಲದೆ ಮರು ನೇಮಕ ಮಾಡಿಕೊಳ್ಳುತ್ತೇವೆ ಹಾಗೂ ಈ ಹಿಂದೆ ಷರತ್ತಿಗೆ ಒಳಪಟ್ಟು ನೇಮಕಗೊಂಡಿರುವವರಿಗೂ ಇದು ಅನ್ವಯವಾಗಲಿದೆ ಎಂದು ತಿಳಿಸಿದರು.

ಈಗಾಗಲೇ ಕೋರ್ಟ್‌ನಲ್ಲಿ ಪ್ರಕರಣಗಳಿದ್ದು ಬಹುತೇಕ ಎಲ್ಲ ಪೊಲೀಸ್‌ ಪ್ರಕರಣಗಳನ್ನು ಹಿಂಪಡೆಯಬೇಕು. ಜತೆಗೆ ಸೇವಾ ನಿರಂತರತೆ (Service Continuity) ಕೊಡಬೇಕು ಎಂಬ ಬೇಡಿಕೆ ಇಟ್ಟರು. ಇದಿಷ್ಟೇ ಅಲ್ಲದೆ ಯಾವುದೇ ಷರತ್ತುಗಳನ್ನು ವಿಧಿಸದೆ ಎಲ್ಲ ವಜಾಗೊಂಡ ನೌಕರರನ್ನು ಮರು ನೇಮಕ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಅವರ ಮನವಿಗೆ ಸ್ಪಂದಿಸಿದ ಸಚಿವರು ಮುಂದಿನ ಬಾರಿ ನಾವು ಅಧಿಕಾರದಲ್ಲಿ ಇರುತ್ತೇವೋ ಇಲ್ಲವೋ ಆದರೆ ನೌಕರರಿಗೆ ಒಂದು ಒಳ್ಳೆಯದನ್ನು ಮಾಡಬೇಕು. ಹೀಗಾಗಿ ನಾನು ಅಧಿಕಾರಿಗಳ ಜತೆ ಹಲವಾರು ಬಾರಿ ಸಭೆ ನಡೆಸಿದ್ದು ನಿಮ್ಮ ಈ ಎಲ್ಲ ಮನವಿಗಳನ್ನು ಪರಿಶೀಲಿಸಿ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ತಿಳಿಸಿದರು.

ಈ ಮೂಲಕ ನೌಕರರಿಗೆ ಸಿಹಿ ಸುದ್ದಿ ನೀಡಿರುವ ಸಚಿವರು ಇನ್ನು ಒಂದು ವಾರದೊಳಗೆ ಬಿಎಂಟಿಸಿಯಲ್ಲಿ ವಜಾಗೊಂಡಿರುವ ಎಲ್ಲ ನೌಕರರನ್ನು ಮರು ನೇಮಕ ಮಾಡಿಕೊಳ್ಳಲಾಗುವುದು. ಇದಿಷ್ಟೇ ಅಲ್ಲದೆ ಇನ್ನು ಉಳಿದಿರುವ ಮೂರು ನಿಗಮಗಳಲ್ಲೂ ವಜಾಗೊಂಡಿರುವ 110-120 ನೌಕರರನ್ನು ಕೂಡ ತೆಗೆದುಕೊಳ್ಳಲಾಗುವುದು ಎಂದು ಸಭೆಯಲ್ಲಿ ಭರವಸೆ ನೀಡಿದರು.

ಅದಕ್ಕೆ ನೌಕರರ ಪರ ಎಲ್ಲ ಸಂಘಟನೆಗಳ ಮುಖಂಡರು ಒಪ್ಪಿಗೆ ಸೂಚಿಸಿದರು. ಹೀಗಾಗಿ ಒಂದು ವಾರದೊಳಗೆ ಮುಷ್ಕರದ ವೇಳೆ ವಜಾಗೊಂಡಿರುವ ಎಲ್ಲ ನೌಕರರು ಕರ್ತವ್ಯಕ್ಕೆ ಮರಳುವುದು ಬಹುತೇಕ ಖಚಿತವಾಗಿದೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ