NEWSನಮ್ಮಜಿಲ್ಲೆನಮ್ಮರಾಜ್ಯ

ವಾಹನ ಸವಾರರಿಗೆ ಗುಡ್​​ನ್ಯೂಸ್ : HSRP ನಂಬರ್ ಪ್ಲೇಟ್ ಅಳವಡಿಕೆಗೆ ಇನ್ನೂ 3ತಿಂಗಳ ಗಡುವು ವಿಸ್ತರಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹಳೆಯ ವಾಹನಗಳಿಗೆ ಹೈ-ಸೆಕ್ಯುರಿಟಿ ನಂಬರ್ ಪ್ಲೇಟ್‌ (HSRP) ಅಳವಡಿಕೆಗೆ ರಾಜ್ಯ ಸರ್ಕಾರ ನೀಡಿದ್ದ ಗಡುವನ್ನು ವಿಸ್ತರಣೆ ಮಾಡಲಾಗುತ್ತದೆ. ಈ ಬಗ್ಗೆ ಶೀಘ್ರವೇ ಆದೇಶ ಹೊರಡಿಸಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಇಂದು ಸದನದಲ್ಲಿ ಮಾಹಿತಿ ನೀಡಿದ್ದಾರೆ.

ಇಂದು ಪರಿಷನತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತಂತೆ ಶಾಸಕ ಮಧು ಮಾದೇಗೌಡ ಅವರು 18 ಲಕ್ಷ ವಾಹನಗಳಷ್ಟೇ ಈಗ ನೋಂದಣಿ ಆಗಿವೆ. ಆದ್ದರಿಂದ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು.

ಮಧು ಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇದುವರೆಗೂ 18 ಲಕ್ಷ ವಾಹನಗಳಿಗೆ ಮಾತ್ರ ಎಚ್​​ಎಸ್​​​ಆರ್​ಪಿ ಬೋರ್ಡ್​ಗಳನ್ನು ಅಳವಡಿಕೆ ಮಾಡಲಾಗಿದೆ. ಕೇಂದ್ರ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್ ಸೂಚನೆ ಅನ್ವಯ ದೇಶದ ಎಲ್ಲ ಭಾಗಗಳಲ್ಲೂ ಹೀಗಾಗಲೇ ಅಳಡಿಸಿಕೊಳ್ಳಲಾಗಿದೆ. ನಮ್ಮಲ್ಲಿ ಮಾತ್ರ ತಡವಾಗಿ ಆರಂಭವಾಗಿದೆ. ಆದ್ದರಿಂದ ಅಂತಿಮ ದಿನಾಂಕವನ್ನು ಮುಂದಕ್ಕೆ ಹಾಕಬೇಕಾದ ಸ್ಥಿತಿ ಎದುರಾಗಿದೆ, ಹೀಗಾಗಿ ಮೂರು ತಿಂಗಳು ಮಂದಕ್ಕೆ ಹಾಕುತ್ತೇವೆ ಎಂದು ತಿಳಿಸಿದರು.

ಈ ವೇಳೆ ಮಧ್ಯ ಪ್ರವೇಶಿಸಿದ ಮಧು ಮಾದೇಗೌಡ, ನಂಬರ್ ಪ್ಲೇಟ್ ಅಳವಡಿಕೆ ಮಾಡುವ ಬಗ್ಗೆ ಫೇಕ್ ಜಾಹೀರಾತುಗಳು ಹೆಚ್ಚಾಗುತ್ತಿದೆ. ಇದರಿಂದ ಬಹಳಷ್ಟು ಜನರು ತಮ್ಮ ಹಣವನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಕೂಡಲೇ ಸರ್ಕಾರ ಗಮನ ಹರಿಸಿ ಫೇಕ್ ಜಾಹೀರಾತುಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಈ ವೇಳೆ ಸಚಿವರು, ಆನ್ ಲೈನ್ ವಂಚನೆ ಬಗ್ಗೆಯೂ ಗಮನಹರಿಸುತ್ತೇವೆ. ಆದರೆ ಇದುವರೆಗೂ ನಂಬರ್ ಪ್ಲೇಟ್ ಅಳವಡಿಕೆ ಮಾಡುವ ಕಾರ್ಯ ಪಾರದರ್ಶಕವಾಗಿ ನಡೆಯುತ್ತಿದೆ. ಎಲ್ಲೂ ನೇರ ಹಣ ಪಾವತಿ ಮಾಡುವ ವ್ಯವಸ್ಥೆ ಇಲ್ಲ, ಎಲ್ಲವೂ ಆನ್​ಲೈನ್ ಮೂಲಕವೇ ಮಾಡುತ್ತಿದ್ದೇವೆ. ಈ ಬಗ್ಗೆ ಹೆಚ್ಚಿನ ಜಾಹೀರಾತು ನೀಡಿ ಜನರಿಗೆ ಅರಿವು ಮಾಡಿಸುವ ಕಾರ್ಯ ಮಾಡುತ್ತೇವೆ. ಮುಂದಿನ ಮೂರು ತಿಂಗಳಿನಲ್ಲಿ ಈ ಕಾರ್ಯವನ್ನು ಮುಗಿಸಲು ಕ್ರಮಕೈಗೊಳ್ಳುತ್ತೇವೆ ಎಂದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ