NEWSನಮ್ಮಜಿಲ್ಲೆನಮ್ಮರಾಜ್ಯ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ:‌ ಶೇ.27 ವೇತನ ಹೆಚ್ಚಳ ಬಹುತೇಕ ಖಚಿತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಲೋಕಸಭಾ ಚುನಾವಣಾ ನೀತಿ ಸಂಹಿತೆಗೆ ತೆರೆ ಬೀಳುತ್ತಿದ್ದಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ಈ ಮೂಲಕ ವೇತನ, ಭತ್ಯೆ ಹಾಗೂ ಸೌಲಭ್ಯಗಳು ಈ ತಿಂಗಳ ಕೊನೆಯಲ್ಲಿ ಪರಿಷ್ಕರಣೆ ಆಗುವುದು ಬಹುತೇಕ ಖಚಿತವಾಗಿದೆ.

ಈಗಾಗಲೇ ಮಧ್ಯಂತರವಾಗಿ ಶೇ.17ರಷ್ಟು ಮೂಲ ವೇತನ ಹೆಚ್ಚಳ ಮಾಡಿದ್ದು, ಅಂತಿಮವಾಗಿ ಇನ್ನೂ ಶೇ.10ರಷ್ಟು ವೇತನ ಹೆಚ್ಚಳ ನಿರೀಕ್ಷಿಸಲಾಗಿದೆ. ಒಟ್ಟಾರೆ ಏರಿಕೆ ಮೂಲವೇತನದ ಶೇ.27 ತಲುಪುವ ಸಾಧ್ಯತೆಯಿದೆ ಎಂದು ಬಲ್ಲ ಮೂಲಗಳು ಖಚಿತಪಡಿಸಿವೆ.

ಕಳೆದ ಮಾರ್ಚ್ 16 ರಂದು ನೀತಿ ಸಂಹಿತೆ ಘೋಷಣೆಯಾಗುವ ಕೆಲಹೊತ್ತು ಮುನ್ನ ಸಲ್ಲಿಕೆಯಾಗಿದ್ದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಸ್ವೀಕರಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೂಲಂಕಶವಾಗಿ ಅಧ್ಯಯನ ಮಾಡಿ ಸಲಹೆ ನೀಡಲು ಹಣಕಾಸು ಇಲಾಖೆಗೆ ಸೂಚಿಸಿದ್ದರು.

ಅದರಂತೆ ಆಯೋಗದ ಶೇ.27.5ರಷ್ಟು ಹೆಚ್ಚಳಕ್ಕೆ ಶಿಫಾರಸು ಬದಲಿಗೆ ಶೇ.27 ಏರಿಕೆಯ ಲೆಕ್ಕಾಚಾರಕ್ಕೆ ಬರಲಾಗಿದೆ ಎಂದು ಹೇಳಲಾಗುತ್ತಿದೆ. ಇದೇ ಜೂನ್‌ ಮೊದಲ ವಾರ ನೀತಿ ಸಂಹಿತೆ ಮುಕ್ತಾಯವಾದ ಬಳಿಕ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಅಂತಿಮ ನಿರ್ಣಯ ಪ್ರಕಟಿಸಲಾಗುತ್ತದೆ ಎಂದು ಅಂದೇ ಸರ್ಕಾರದ ಉನ್ನತ ಮೂಲಗಳು ತಿಳಿಸಿದ್ದವು.

ಆಯೋಗದ ಅಂತಿಮ ವರದಿ ನಿರೀಕ್ಷಿಸಿ ಹಿಂದಿನ‌ ಬಿಜೆಪಿ ಸರ್ಕಾರದ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ವಿಧಾನಸಭೆ ಚುನಾವಣೆಗೆ ಮುನ್ನ ಶೇ.17ರಷ್ಟು ಮಧ್ಯಂತರ ವೇತನ ಹೆಚ್ಚಳ ಮಾಡಿತ್ತು ಮತ್ತು 2023ರ ಏಪ್ರಿಲ್‌ 1 ರಿಂದ ಅನ್ವಯವಾಗುವಂತೆ ಈ ಪರಿಷ್ಕರಣೆ ಜಾರಿಗೆ ಬಂದಿತ್ತು. ‌

ಇನ್ನು ನೌಕರ ಸಮುದಾಯದ ಸಂಘಟಿತ ಒತ್ತಡದಂತೆ ಪ್ರಸ್ತುತ ಕಾಂಗ್ರೆಸ್‌ ನೇತೃತ್ವದ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಕೂಡ 2024 -25ನೇ ಸಾಲಿನ ಬಜೆಟ್‌ನಲ್ಲಿ 7ನೇ ವೇತನ ಆಯೋಗದ ನಿರೀಕ್ಷಿತ ಶಿಫಾರಸುಗಳ ಅನುಷ್ಠಾನಕ್ಕಾಗಿ ಒಟ್ಟಾರೆ 15,431 ಕೋಟಿ ರೂ. ಅನುದಾನ ಮೀಸಲಿಟ್ಟಿದೆ.

ಪ್ರಮುಖ ಶಿಫಾರಸುಗಳು: ಕಳೆದ ಮಾರ್ಚ್ 16 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವೇತನ ಆಯೋಗ ತನ್ನ ವರದಿ ಸಲ್ಲಿಸಿದ್ದು, ಅದರಲ್ಲಿ ಪ್ರಮುಖವಾಗಿ ಶೇ.31ರಷ್ಟು ತುಟ್ಟಿಭತ್ಯೆಯನ್ನು ವಿಲೀನಗೊಳಿಸಿ ಶೇ.27.50 ಫಿಟ್‌ಮೆಂಟ್‌ ನೀಡುವ ಮೂಲಕ ಕನಿಷ್ಠ ಮೂಲ ವೇತನವನ್ನು ಸದ್ಯದ 17,000 ರೂ.ಗಳಿಂದ 27,000 ರೂ.ಗೆ ಏರಿಕೆ ಮಾಡಲು ಸಲಹೆ ನೀಡಿದೆ.

ಇನ್ನು ಗರಿಷ್ಠ ವೇತನವನ್ನು 2,41,200 ರೂ.ಗೆ ನಿಗದಿಪಡಿಸಬೇಕು ಎಂದು ಶಿಫಾರಸು ಮಾಡಿದೆ. ಆಯೋಗದ 30 ಪ್ರಮುಖ ಶಿಫಾರಸುಗಳಲ್ಲಿ ನೌಕರರಿಗೆ ಹಲವು ಸೌಲಭ್ಯಗಳ ಹೆಚ್ಚಳವೂ ಸೇರಿದ್ದು, ಅದಕ್ಕೆ ಅನುಗುಣವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ನೌಕರರಿಗೆ ಬಹುತೇಕ ಸಿಹಿ ಸುದ್ದಿಕೊಡುವ ಎಲ್ಲ ಮುನ್ಸೂಚನೆಗಳು ಕಾಣಿಸುತ್ತಿವೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು