NEWSನಮ್ಮರಾಜ್ಯ

ನಾಳೆ ಬಜೆಟ್‌ನಲ್ಲಿ ಹೊಸ ಪ್ರಸ್ತಾವನೆ, ಅವಶ್ಯ ಅನುದಾನದ ಬಗ್ಗೆ ಚರ್ಚಿಸಲು ಸಾರಿಗೆ ಆಯಕ್ತರು, ಎಂಡಿಗಳ ಸಭೆ ಕರೆದ ಸರ್ಕಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರ ಮಂಡಿಸಲಿರುವ 2026-27ನೇ ಸಾಲಿನ ಬಜೆಟ್‌ನಲ್ಲಿ ಸಾರಿಗೆ ಇಲಾಖೆಯ ಹೊಸ ಪ್ರಸ್ತಾವನೆಗಳು, ಅದಕ್ಕೆ ಅವಶ್ಯವಿರುವ ಅನುದಾನದ ವಿವರಗಳು ಹಾಗೂ ಮುಖ್ಯಮಂತ್ರಿಯವರ ಆಯವ್ಯಯ ಭಾಷಣಕ್ಕೆ ಘೋಷಣೆಗಳ ಕುರಿತು ಚರ್ಚಿಸಲು ಸರ್ಕಾರದ ಕಾರ್ಯದರ್ಶಿ, ಸಾರಿಗೆ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಆಯವ್ಯಯ ಪೂರ್ವಭಾವಿ ಸಭೆಯನ್ನು ನಾಳೆ ಅಂದರೆ ಜ.29 ರ ಮಧ್ಯಾಹ್ನ 3.30ಕ್ಕೆ ನಿಗದಿಗೊಳಿಸಲಾಗಿದೆ.

ಈ ಸಂಬಂಧ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿ.ಎಸ್‌.ಪುಷ್ಪಾ ಅವರು ಸಾರಿಗೆ ಇಲಾಖೆಯ ಆಯುಕ್ತರು ಹಾಗೂ ನಾಲ್ಕೂ ಸಾರಿಗೆ ನಿಗಮಗಳ ಎಂಡಿಗಳಿಗೆ ಸಭೆಗೆ ಹಾಜರಾಗುವಂತೆ ಸಭಾ ಸೂಚನಾ ಪತ್ರವನ್ನು ನಿನ್ನೆ (ಜ.27) ನೀಡಿದ್ದಾರೆ.

ಸಭಾ ಸೂಚನಾ ಪತ್ರದಲ್ಲೇನಿದೆ: 2026-27ನೇ ಸಾಲಿನ ಆಯವ್ಯಯದಲ್ಲಿ ಸಾರಿಗೆ ಇಲಾಖೆಯ ಹೊಸ ಪ್ರಸ್ತಾವನೆಗಳು, ಅದಕ್ಕೆ ಅವಶ್ಯವಿರ ಅನುದಾನದ ವಿವರಗಳು ಹಾಗೂ ಮುಖ್ಯಮಂತ್ರಿಯವರ ಆಯವ್ಯಯ ಭಾಷಣಕ್ಕೆ ಘೋಷಣೆಗಳ ಕುರಿತು ಚರ್ಚಿಸಲು ಸರ್ಕಾರದ ಕಾರ್ಯದರ್ಶಿ, ಸಾರಿಗೆ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಆಯವ್ಯಯ ಪೂರ್ವಭಾವಿ ಸಭೆ 29.01.2026 ರಂದು ಅಪರಾಹ್ನ 3.30 ಗಂಟೆಗೆ ನಿಗದಿಗೊಳಿಸಲಾಗಿದೆ.

ಹೀಗಾಗಿ ಈ ಸಭೆಗೆ ಪ್ರಾತ್ಯಕ್ಷಿಕೆ ಮತ್ತು ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ, ಬೆಂಗಳೂರು.

ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು. ವ್ಯವಸ್ಥಾಪಕ ನಿರ್ದೇಶಕರು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಬೆಂಗಳೂರು. ವ್ಯವಸ್ಥಾಪಕ ನಿರ್ದೇಶಕರು, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಹುಬ್ಬಳ್ಳಿ. ವ್ಯವಸ್ಥಾಪಕ ನಿರ್ದೇಶಕರು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಕಲಬುರಗಿ.

ವ್ಯವಸ್ಥಾಪಕ ನಿರ್ದೇಶಕರು, ಡಿ.ದೇವರಾಜ ಅರಸ್ ಟ್ರಕ್ ಟರ್ಮಿನಲ್‌ಲಿ, ಬೆಂಗಳೂರು ಅವರಿಗೆ ಕೋರಲಾಗಿದೆ. ಜತೆಗೆ ಈ ಪ್ರತಿಗಳನ್ನು ಸರ್ಕಾರದ ಕಾರ್ಯದರ್ಶಿಯವರ ಆಪ್ತ ಕಾರ್ಯದರ್ಶಿ, ಸಾರಿಗೆ ಇಲಾಖೆ ಹಾಗೂ ಸರ್ಕಾರದ ಉಪ ಕಾರ್ಯದರ್ಶಿ/ ಅಧೀನ ಕಾರ್ಯದರ್ಶಿಯವರ ಆಪ್ತ ಸಹಾಯಕರು, ಸಾರಿಗೆ ಇಲಾಖೆ ಅವರಿಗೂ ಕಳಿಸಿದ್ದಾರೆ.

Megha
the authorMegha

Leave a Reply

error: Content is protected !!