ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವನ್ನು ಲಾಭದಾಯಕವಾಗಿಸಲು ಕೈಗೊಳ್ಳಬೇಕಾದ ಸುಧಾರಣಾ ಕ್ರಮಗಳ ಕುರಿತು ಪರಿಶೀಲಿಸಲು ಪರಿಣತರ ಸಮಿತಿಯನ್ನು ರಚಿಸಲಾಗುವುದು. ಜತೆಗೆ ನೌಕರರ ಜೀವನ ಪಟ್ಟ ಸುಧಾರಿಸುವ ನಿಟ್ಟಿನಲ್ಲೂ ಯೋಜನೆ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸ್ಥಾಪನೆಯಾಗಿ 60 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ 60ರ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಂದು ನಿಗಮವು ಸಂಕಷ್ಟದಲ್ಲಿದೆ. ಆದರೆ ಸಮಸ್ಯೆಯನ್ನು ಬೆಳೆಯಲು ಬಿಡದೆ ನಾವು ಪರಿಹಾರ ಕಂಡುಕೊಳ್ಳಬೇಕಾಗಿದೆ. ಆದಾಯೋತ್ಪನ್ನ ಮಾದರಿಯಿದ್ದರೂ, ನಿಗಮ ನಷ್ಟದಲ್ಲಿರಲು ಕಾರಣಗಳನ್ನು ವಿಶ್ಲೇಷಿಸುವುದರೊಂದಿಗೆ, ನಿಗಮವನ್ನು ಲಾಭದಾಯಕವಾಗಿಸಲು ಸಲಹೆ ಸೂಚನೆಗಳನ್ನು ನೀಡಲು ಸಮಿತಿ ರಚಿಸಲಾಗುವುದು ಎಂದು ತಿಳಿಸಿದರು.
ಕೆಎಸ್ಆರ್ಟಿಸಿಗೆ ತನ್ನದೇ ಅಂತರ್ಗತವಾದ ಶಕ್ತಿ ಇದೆ, ವಿಸ್ತಾರವಿದೆ, ಜಾಲವಿದೆ. ಇವುಗಳನ್ನು ಹೆಚ್ಚಿಸುವುದು ಹೇಗೆ ಎಂಬ ಕುರಿತು ಸಹ ಚಿಂತನೆ ನಡೆಸಲಾಗುವುದು. ಜತೆಗೆ ಮುಂದಿನ ದಿನಗಳಲ್ಲಿ ನಿಗಮದ ಆದಾಯ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ನಿಗಮವನ್ನು ಲಾಭದತ್ತ ಒಯ್ಯಲು ಚಿಂತನೆ, ಕಾರ್ಯವಿಧಾನಗಳಲ್ಲಿ ಬದಲಾವಣೆಯ ಅಗತ್ಯವಿದೆ. ಜತೆಗೆ ಕ್ಷಮತೆಯಿಂದ ನಿಗಮವನ್ನು ಮುನ್ನಡೆಸಲು ಸರ್ಕಾರ ಬದ್ಧವಾಗಿದೆ. ನಿಗಮದ ಸುಧಾರಣೆಯೊಂದಿಗೆ ನೌಕರರ ಜೀವನಮಟ್ಟ ಸುಧಾರಣೆಗೂ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಬಸ್ ಎಂದರೆ ಹಲವು ಅರ್ಥಗಳನ್ನು ಧ್ವನಿಸುತ್ತದೆ- ಪ್ರಯಾಣ, ಜೀವನದ ಪ್ರಯಾಣ, ಎಲ್ಲರಿಗೂ ಸ್ಥಳಾವಕಾಶ ಒದಗಿಸುವ ಸಮಾನತೆಯ ಪರಿಕಲ್ಪನೆ, ನಿರಂತರ ಚಾಲನಾ ಶಕ್ತಿ ಮೊದಲಾದ ವಿಚಾರಗಳು ನಮ್ಮಲ್ಲಿ ಸುಳಿಯುತ್ತವೆ. ಸರ್ಕಾರದಲ್ಲಿ ನಿರಂತರ ಚಲನಶೀಲತೆ ಹೊಂದಿರುವ ಇಲಾಖೆ ಸಾರಿಗೆ ಇಲಾಖೆ ಎಂದು ಸಿಎಂ ಬಣ್ಣಿಸಿದರು.

ಬಸ್ ಚಾಲಕರು ಅತ್ಯಂತ ಜವಾಬ್ದಾರಿಯ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರಯಾಣದ ಅವಧಿಯಲ್ಲಿ ನಮ್ಮ ಜೀವ ಅವರ ಕೈಯಲಿರುತ್ತದೆ. ಆದ್ದರಿಂದ ಚಾಲಕರಿಗೆ ಮೊದಲ ಗೌರವ ಸಲ್ಲಿಸುವುದಾಗಿ ತಿಳಿಸಿದರು.
ಜೊತೆಗೆ ವಿಶ್ವದಾದ್ಯಂತ ಸಾರಿಗೆ ವ್ಯವಸ್ಥೆಯಲ್ಲಿ ಎಷ್ಟೇ ಬದಲಾವಣೆಗಳಾದರೂ, ಬಸ್ ಸೇವೆ ನಿರಂತರವಾಗಿ ತನ್ನ ಅಸ್ತಿತ್ವ ಉಳಿಸಿಕೊಂಡಿದೆ. ಹಳ್ಳಿಗಳಲ್ಲಿ ಬಸ್ ಬಂದರೆ ಚಟುವಟಿಕೆ ಪ್ರಾರಂಭವಾಗುತ್ತದೆ. ಈ ಎಲ್ಲ ಕಾರಣಗಳಿಗಾಗಿ ನಿಗಮ ತನ್ನದೇ ಆದ ಗೌರವವನ್ನು ಹೊಂದಿದೆ ಎಂದು ಅಭಿಪ್ರಾಯಪಟ್ಟರು.
ಬದಲಾಗುತ್ತಿರುವ ತಂತ್ರಜ್ಞಾನದೊಂದಿಗೆ ಹೊಂದಿಕೊಳ್ಳುವ ಜೊತೆಗೆ ಪರಿಸರ ಸ್ನೇಹಿ ವಾಹನಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಬಿಎಂಟಿಸಿಯು 90 ವಿದ್ಯುತ್ ಚಾಲಿತ ಬಸ್‌ಗಳನ್ನು ಖರೀದಿಸುತ್ತಿದೆ. ಅಂತೆಯೇ ಕೆ.ಎಸ್.ಆರ್.ಟಿ.ಸಿಯು 642 ಹೊಸ ಬಸ್ ಗಳನ್ನು ಖರೀದಿಸುತ್ತಿದೆ ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ನಾಲ್ಕೂ ನಿಗಮಗಳ ಅಪಘಾತ ರಹಿತ ಚಾಲನೆ ಮಾಡಿದ 60 ಚಾಲಕರಿಗೆ ಚಿನ್ನದ ಪದಕ ಪ್ರದಾನ ಮಾಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ 60ನೇ ವರ್ಷದ ಸವಿ ನೆನಪಿಗೆ ಅಂಚೆ ಲಕೋಟೆ ಬಿಡುಗಡೆ ಹಾಗೂ ಕೆಂಪೇಗೌಡ ಬಸ್ ನಿಲ್ದಾಣ 50 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು.
ಜತೆಗೆ ನೌಕರರು ಮತ್ತು ಕುಟುಂಬದವರ ಅನುಕೂಲಕ್ಕಾಗಿ ಇನ್ಫೋಸಿಸ್ ಸಹಯೋಗದೊಂದಿಗೆ ಡಿಜಿಟಲ್ ಲರ್ನಿಂಗ್ ಕಾರ್ಯಕ್ರಮ ಹಾಗೂ ಆನ್‌ಲೈನ್ ನಲ್ಲಿ ನೌಕರರ ಕುಂದುಕೊರತೆ ನಿವಾರಣಾ ವ್ಯವಸ್ಥೆಗೆ ಚಾಲನೆ ನೀಡಲಾಯಿತು.
ಸಚಿವರಾದ ಬಿ. ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ, ಬಿ.ಸಿ. ನಾಗೇಶ್, ಆನಂದ್ ಸಿಂಗ್, ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷ ಎಂ.ಚಂದ್ರಪ್ಪ, ಶಾಸಕ ರಿಜ್ವಾನ್ ಅರ್ಷದ್, ಕರ್ನಾಟಕದ ಛೀಫ್ ಪೋಸ್ಟ್ ಮಾಸ್ಟರ್ ಜನರಲ್ ಶಾರದಾ ಸಂಪತ್, ಸಾರಿಗೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಮತ್ತಿತರರು ಉಪಸ್ಥಿತರಿದ್ದರು.
ರಾಜ್ಯ ರಸ್ತೆ ಸಾರಿಗೆ ನಿಗಮ ಸಾಕಷ್ಟು ಸೇವೆ ಒದಗಿಸುತ್ತಿದೆ. ಜತೆಗೆ ಖಾಸಗಿ ಸಾರಿಗೆ ಸಂಸ್ಥೆಗಳಿಗಿಂತ ಹೆಚ್ಚಿನ ಜನರು ಸರ್ಕಾರಿ ಸಾರಿಗೆಯಲ್ಲಿಯೇ ಸಂಚಾರ ಮಾಡುತ್ತಾರೆ. ಆದರೂ ನಿಗಮವು ಯಾಕೆ ನಷ್ಟದಲ್ಲಿರುತ್ತದೆ ಎಂಬುದು ಪ್ರಯಾಣಿಕರು ಹಾಗೂ ಸಾರ್ವಜನಿಕರ ಪ್ರಶ್ನೆ. ಅಲ್ಲದೆ ನಿಗಮ ಯಾವಾಗಲೂ ನಷ್ಟದಲ್ಲಿಯೇ ಇರುತ್ತದೆ ಎಂಬ ಆಪಾದನೆಗಳಿವೆ. ಹೀಗಾಗಿ ಸಾರಿಗೆ ನಿಗಮವನ್ನು ನಷ್ಟದಿಂದ ಲಾಭದತ್ತ ತೆಗೆದುಕೊಂಡು ಹೋಗಲುಮಹತ್ವದ ತೀರ್ಮಾನ ತೆಗೆದುಕೊಂಡಿದ್ದೇನೆ.ಅದು ಲಾಭ ನಷ್ಟ ಪರಿಶೀಲಿಸಲು ಪರಿಣತರ ಸಮಿತಿ ರಚಿಸುವುದು. ಈ ಮೂಲಕ ಸಾರ್ವಜನಿರು ಮತ್ತು ನೌಕರರ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲಾಗುವುದು.
l ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ.
Related


You Might Also Like
KKRTC ಕಂಡಕ್ಟರ್ ಮೇಲೆ ಹಲ್ಲೆ: ಆರೋಪಿಗೆ 3 ವರ್ಷ ಜೈಲು, 6 ಸಾವಿರ ರೂ.ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದ ಕೋರ್ಟ್
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕರ ಮೇಲೆ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಅಪರಾಧಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ 6...
ಮೆಜೆಸ್ಟಿಕ್ ಬಳಿ ಮೊಬೈಲ್ ಶೌಚಾಲಯ ವ್ಯವಸ್ಥೆ: ಆಯುಕ್ತ ರಾಜೇಂದ್ರ ಚೋಳನ್
ಬೆಂಗಳೂರು: ಮೆಜೆಸ್ಟಿಕ್ ಬಳಿ ಪಾದಚಾರಿ ಮಾರ್ಗಗಳಲ್ಲಿ ಸಾರ್ವಜನಿಕರು ಮೂತ್ರ ವಿಸರ್ಜನೆ ಮಾಡುವುದನ್ನು ನಿಯಂತ್ರಿಸುವ ಸಲುವಾಗಿ ಮೊಬೈಲ್ ಶೌಚಾಲಯಗಳ ವ್ಯವಸ್ಥೆ ಮಾಡಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ...
ಸರ್ಕಾರಿ ಬಸ್ ಚಾಲಕ-ನಿರ್ವಾಹಕರು ಎಲ್ಲದಕ್ಕೂ ಹೊಣೆಯಲ್ಲ: ಸುಜಯ ಆರ್.ಕಣ್ಣೂರ
ಬಿಎಂಟಿಸಿ ವಿರುದ್ಧ 10 ಸಾವಿರ ದೂರು' ಮುಖಪುಟ ವರದಿ ತಿಳಿಸುವ ಸಲುವಾಗಿ ಈ ಬರಹ. ನಾನು ಬಿಂಎಂಟಿಸಿ ಬಸ್ನಲ್ಲಿ 35 ವರ್ಷಗಳಿಂದ ಪ್ರಯಾಣಿಸುತ್ತಿದ್ದೇನೆ. ಇದರಲ್ಲಿ ಯಾರದು ತಪ್ಪು,...
BMTC ಬಸ್ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ಖಂಡಿಸಿ ಚಾಲಕರ ಪ್ರತಿಭಟನೆ
ಬೆಂಗಳೂರು: ಕಾರಿಗೆ ಸೈಡ್ ಬಿಡಲಿಲ್ಲ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಚಾಲಕನ ಮೇಲೆ ಜಿಗಣಿ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ಹಲ್ಲೆ ಮಾಡಿರುವ ಘಟನೆ ನಡೆದಿದೆ....
ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಸಕಾರಾತ್ಮಕ ನಡೆ ಶ್ಲಾಘನೀಯ: ಪ್ರಧಾನಿ ಮೋದಿ
ನ್ಯೂಡೆಲ್ಲಿ: ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಕಾರಾತ್ಮಕ ನಡೆ ಶ್ಲಾಘನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಾನು ಮೋದಿ ಅವರೊಂದಿಗೆ...
“ಗಬ್ಬರ್ ಸಿಂಗ್ ತೆರಿಗೆ” ಸಣ್ಣ ವ್ಯಾಪಾರಿಗಳ ಸರ್ವನಾಶ ಮಾಡಲಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ತೆರಿಗೆದಾರ ಜನತೆ ಮತ್ತು ವ್ಯಾಪಾರಿ ವರ್ಗದ ಮೇಲಿನ ಆರ್ಥಿಕ ಭಾರ ಮತ್ತು ಅನುಷ್ಠಾನದ ಜಂಜಾಟವನ್ನು ತಗ್ಗಿಸಲು ಅತ್ಯಗತ್ಯವಾಗಿದ್ದ ತೆರಿಗೆ ಸುಧಾರಣೆಯನ್ನು ಜಾರಿಗೆ ತರುವ ಸರಕು ಸೇವಾ...
ಜಾತಿ ವ್ಯವಸ್ಥೆ ಕಾರಣಕ್ಕೆ ಅವಕಾಶಗಳು ಎಲ್ಲರಿಗೂ ಸಿಗುತ್ತಿಲ್ಲ: CM ಸಿದ್ದರಾಮಯ್ಯ
ಬೆಂಗಳೂರು: ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನ ಸಮಾಜ ನಿರ್ಮಾಣವಾಗಿ ಅವಕಾಶಗಳು ಎಲ್ಲರಿಗೂ ಸಿಗುತ್ತಿಲ್ಲ. ಶೂದ್ರರ ಜತೆಗೆ ಮಹಿಳೆಯರನ್ನೂ ಶಿಕ್ಷಣದಿಂದ ಹೊರಗಿಡಲಾಗಿತ್ತು. ಆದರೆ ಈಗ ಶಿಕ್ಷಣದ ಹಕ್ಕಿನ ಕಾರಣಕ್ಕೆ...
ನಮ್ಮ ಸರ್ಕಾರ ವರ್ಷಕ್ಕೆ 65 ಸಾವಿರ ಕೋಟಿ ರೂ. ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ: ಸಿಎಂ
ಬೆಂಗಳೂರು: ಶಿಕ್ಷಣ ನಮ್ಮ ಸರ್ಕಾರದ ಆದ್ಯತಾ ಕಾರ್ಯಕ್ರಮವಾಗಿದ್ದು, ವರ್ಷಕ್ಕೆ 65 ಸಾವಿರ ಕೋಟಿ ರೂಪಾಯಿಯನ್ನು ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ವಿಧಾನಸೌಧದ...
ಜಿಬಿಎ: ಬೆಳ್ಳಂಬೆಳಗ್ಗೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ ಐದು ನಗರ ಪಾಲಿಕೆಗಳ ಆಯುಕ್ತರು
ಬೆಂಗಳೂರು: ಐದು ನಗರ ಪಾಲಿಕೆಗಳ ಆಯುಕ್ತರಿಂದ ಬೆಳಗ್ಗೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು ಇತ್ತ ಕೇಂದ್ರ ನಗರ ಪಾಲಿಕೆ ಆಯುಕ್ತರು ಅಧಿಕಾರಿಗಳೊಂದಿಗೆ ಸಭೆ...