NEWSನಮ್ಮರಾಜ್ಯ

ಮೂರು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಿಸಲು ಸರ್ಕಾರ ನಿರ್ಧಾರ: ಸಾರಿಗೆ ಸಚಿವ ಬೈರತಿ ಸುರೇಶ್

ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಜನದಟ್ಟಣೆ ನಿಯಂತ್ರಿಸಲು ಮತ್ತು ಸಾರ್ವಜನಿಕ ಸಾರಿಗೆಯನ್ನು ಬಲಪಡಿಸಲು ಕರ್ನಾಟಕ ಸರ್ಕಾರ ಯೋಜನೆ ರೂಪಿಸಿದ್ದು, ರಾಜ್ಯಾದ್ಯಂತ ಸಾರಿಗೆ ನಿಗಮಗಳಿಗೆ ಒಟ್ಟು 5,000 ಹೊಸ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುವುದು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ ಮೂರು ಕೋಟಿಗೂ ಹೆಚ್ಚು ಮಹಿಳಾ ಫಲಾನುಭವಿಗಳಿಗೆ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಸುಗಮ ಪ್ರಯಾಣವನ್ನು ಸಕ್ರಿಯಗೊಳಿಸಲು ಉಚಿತ ಸ್ಮಾರ್ಟ್ ಕಾರ್ಡ್‌ಗಳನ್ನು ನೀಡಲಾಗುವುದು ಎಂದು ನೂತನ ಸಾರಿಗೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.

ಮೊನ್ನೆ ನಡೆಸಿದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ ಮತ್ತು ವಾಯವ್ಯ ಸಾರಿಗೆ ನಿಗಮಗಳ ಹಿರಿಯ ಅಧಿಕಾರಿಗಳೊಂದಿಗಿನ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಶಕ್ತಿ ಯೋಜನೆಯನ್ನು ಮತ್ತಷ್ಟು ವ್ಯವಸ್ಥಿತವಾಗಿ ಜಾರಿಗೊಳಿಸಲು ಮತ್ತು ಪ್ರಯಾಣಿಕರ ನಿಖರ ಟ್ರ್ಯಾಕಿಂಗ್‌ಗಾಗಿ ಮೂರು ಕೋಟಿಗೂ ಅಧಿಕ ಮಹಿಳಾ ಫಲಾನುಭವಿಗಳಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಿಸಲು ಸರ್ಕಾರ ನಿರ್ಧರಿಸಿದೆ ಎಂದರು.

ಇನ್ನು ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಜನದಟ್ಟಣೆ ನಿಯಂತ್ರಿಸಲು ಮತ್ತು ಸಾರ್ವಜನಿಕ ಸಾರಿಗೆಯನ್ನು ಬಲಪಡಿಸಲು ಕರ್ನಾಟಕ ಸರ್ಕಾರ ಯೋಜನೆ ರೂಪಿಸಿದ್ದು, ರಾಜ್ಯಾದ್ಯಂತ ಸಾರಿಗೆ ನಿಗಮಗಳಿಗೆ ಒಟ್ಟು 5,000 ಹೊಸ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಅದರಲ್ಲಿ 1,000 ಬಸ್‌ಗಳನ್ನು ರಾಜ್ಯ ಸರ್ಕಾರದ ನಿಧಿಯ ಮೂಲಕ ನೇರವಾಗಿ ಖರೀದಿಸಿದರೆ 4,000 ಅತ್ಯಾಧುನಿಕ ಎಲೆಕ್ಟ್ರಿಕ್ ಬಸ್‌ಗಳನ್ನು ಕೇಂದ್ರ ಸರ್ಕಾರದ ಆರ್ಥಿಕ ನೆರವಿನೊಂದಿಗೆ ಪಡೆದುಕೊಳ್ಳಲಾಗುವುದು.

ಆ ಬಸ್‌ಗಳನ್ನು ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ನಾಲ್ಕೂ ಸಾರಿಗೆ ಸಂಸ್ಥೆಗಳಿಗೆ ಸಮಾನವಾಗಿ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದ ಅವರು, ಪುರುಷ ಪ್ರಯಾಣಿಕರಿಗೆ ನಮ್ಮ ಮೆಟ್ರೋ ಮಾದರಿಯಲ್ಲಿ ನಿಗದಿತ ಶುಲ್ಕ ಪಾವತಿಸಿ ರೀಚಾರ್ಜ್ ಮಾಡಿಕೊಳ್ಳಬಹುದಾದ ಸ್ಮಾರ್ಟ್ ಕಾರ್ಡ್‌ಗಳನ್ನು ಒದಗಿಸಲಾಗುವುದು ಎಂದು ಹೇಳಿದರು.

ಇನ್ನು ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಸುರಕ್ಷತೆಗೆ ಸರ್ಕಾರ ಆದ್ಯತೆ ನೀಡಿದೆ. ಟ್ಯಾಕ್ಸಿಗಳು ಸೇರಿದಂತೆ ಎಲ್ಲ ವಾಣಿಜ್ಯ ಪ್ರಯಾಣಿಕರ ವಾಹನಗಳಲ್ಲಿ ವೆಹಿಕಲ್ ಲೊಕೇಷನ್ ಟ್ರಾಕಿಂಗ್ ಸಿಸ್ಟಂ ಅಳವಡಿಕೆಯನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಲಾಗಿದೆ ಎಂದರು.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿಯೋಜನೆಗೆ ಮತ್ತೆ ಹೊಸದಾಗಿ ಅರ್ಜಿ ಸ್ವೀಕರಿಸುವ ಚಿಂತನೆಯಲ್ಲಿ ಸರ್ಕಾರ! ಮೂರು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಿಸಲು ಸರ್ಕಾರ ನಿರ್ಧಾರ: ಸಾರಿಗೆ ಸಚಿವ ಬೈರತಿ ... ಹಣ ದುರುಪಯೋಗ, ಕರ್ತವ್ಯ ಲೋಪ ಎಸಗಿದ ಆರೋಪ ಸಾಬೀತು: ಮಹೇಶ್ ಜೋಶಿ ಕಸಾಪ ಆಜೀವ ಸದಸ್ಯತ್ವ ರದ್ದು ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತು 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ KSRTC ಎಂಡಿ ಅಕ್ರಮ್‌ಪಾಷ ವರ್ಗಾವಣೆ ಪ್ರಭಾರ ಎಂಡಿಯಾಗಿ ಡಾ.ಆರ್‌. ಸೆಲ್ವಮಣಿ ನೇಮಕ ಮಾಡಿ ಸರ್ಕಾರದ ಆದೇಶ 4.30 ಲಕ್ಷ ಮೃತಪಟ್ಟ, ಅನರ್ಹರ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಟ್ಟ ಸರ್ಕಾರ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗೋಕುಲದ ಅಧ್ಯಕ್ಷ ಲಯನ್ ಅರವಿಂದ ಕೆ.ಆರ್.ಮಾರುಕಟ್ಟೇಲಿ ಅಗ್ನಿ ಅವಘಡ ತಡೆಗೆ ಫೈರ್ ಆಡಿಟ್: ಮುಖ್ಯ ಆಯುಕ್ತ ಮಹೇಶ್ವರ್ ರಾವ್ KSRTC ಫ್ರೀ ಬಸ್‌ಪಾಸ್‌ ಈ ತಿಂಗಳು ಸಿಗುವುದು ಡೌಟ್‌- ನಿತ್ಯ ಹಣಕೊಟ್ಟು ಓಡಾಡುತ್ತಿರುವ ವಿದ್ಯಾರ್ಥಿಗಳ ಗೋಳು ಕೇಳುವವರು... ಉಕ್ಕು ಸ್ಥಾವರ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ರೂ. ಗಾಯಗೊಂಡವರಿಗೆ 10 ಲಕ್ಷ ರೂ. ಪರಿಹಾರ: ಕೇಂದ್ರ ಸಚಿವ ಎಚ್‌ಡಿಕ...