NEWSನಮ್ಮರಾಜ್ಯರಾಜಕೀಯ

ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ವರ್ಗಾವಣೆ: ಭಾರೀ ಚರ್ಚೆಗೆ ಗ್ರಾಸ

ವಿಜಯಪಥ ಸಮಗ್ರ ಸುದ್ದಿ

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಶಿವಮೊಗ್ಗದ ಸ್ಥಳೀಯ ಲೆಕ್ಕಪರಿಶೋಧನಾ ವರ್ತುಲದ ಜಂಟಿ ನಿರ್ದೇಶಕರ ಕಚೇರಿಯಿಂದ ಕೋಲಾರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕ ಹುದ್ದೆಗೆ ವರ್ಗಾವಣೆ ಮಾಡಿದೆ.

15 ವರ್ಷದಿಂದ ಶಿವಮೊಗ್ಗದಲ್ಲೇ ಇದ್ದ ಷಡಾಕ್ಷರಿ ಅವರು ಕಳೆದ ಬಿಜೆಪಿ ಸರ್ಕಾರದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದರು. ಮಾಜಿ ಸಿಎಂ ಯಡಿಯೂರಪ್ಪ ಅವರ ಆಪ್ತ ಸಹಾಯಕನಾಗಿದ್ದ ಷಡಾಕ್ಷರಿಯನ್ನು ಕಾಂಗ್ರೆಸ್‌ ಸರ್ಕಾರ ಕಳೆದ 4 ತಿಂಗಳ ಹಿಂದಷ್ಟೇ ಬೆಂಗಳೂರಿನಿಂದ ಶಿವಮೊಗ್ಗದ ಸ್ಥಳೀಯ ಲೆಕ್ಕಪರಿಶೋಧನಾ ವರ್ತುಲದ ಜಂಟಿ ನಿರ್ದೇಶಕರ ಕಚೇರಿಗೆ ವರ್ಗಾವಣೆ ಮಾಡಿತ್ತು. ಇದೀಗ ಕೋಲಾರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕ ಹುದ್ದೆಗೆ ವರ್ಗಾವಣೆಗೊಳಿಸಿ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನೇತ್ರಪ್ರಭಾ ಎಂ. ಧಾಯಪುಲೆ ಆದೇಶ ಹೊರಡಿಸಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ ಯಡಿಯೂರಪ್ಪ ಅಧಿಕಾರದಿಂದ ಇಳಿದು ಬಸವರಾಜ ಬೊಮ್ಮಾಯಿ ಸಿಎಂ ಆದ ಬಳಿಕ ಷಡಾಕ್ಷರಿಯ ಪ್ರಭಾವ ಕಡಿಮೆಯಾಗಿತ್ತು.

ಅಬ್ಬಲಗೆರೆಯ ಮುದ್ದಣ್ಣನ ಕೆರೆಯಿಂದ ಖಾಸಗಿ ಲೇಔಟ್ ನಿರ್ಮಾಣಕ್ಕೆ ಅನಧಿಕೃತವಾಗಿ ಅಪಾರ ಪ್ರಮಾಣದಲ್ಲಿ ಮಣ್ಣು ಸಾಗಾಟ ಮಾಡಿದ ವಿಷಯ ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಶಿವಮೊಗ್ಗದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಷಡಾಕ್ಷರಿ ಹೆಸರು ಪ್ರಸ್ತಾಪವಾಗುವ ಮೂಲಕ ಭಾರಿ ಚರ್ಚೆಯಾಗಿತ್ತು.

ಷಡಾಕ್ಷರಿ ಅವರ ಪ್ರಭಾವದಿಂದಾಗಿ ಮಣ್ಣು ಸಾಗಣೆ ನಡೆದಿದೆ ಹಾಗೂ ನಮಗೆ ಜೀವ ಬೆದರಿಕೆಯಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ಹೇಳಿದ್ದರು. ಈ ಎಲ್ಲದರ ಆಧಾರದ ಹಿನ್ನೆಲೆಯಲ್ಲಿ ಷಡಾಕ್ಷರಿಯನ್ನು ಕೋಲಾರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆಯೇ ಎಂಬ ಅನುಮಾನ ಮೂಡುತ್ತಿದೆ.

ಇನ್ನು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ವರ್ಗಾವಣೆ ವಿಷಯ ನೌಕರರ ಹಾಗೂ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗುರಿಯಾಗಿದೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್