NEWSನಮ್ಮರಾಜ್ಯಬೆಂಗಳೂರು

ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್‌ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ. .

ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಈ ಬಗ್ಗೆ ಬಹಳಷ್ಟು ತಪ್ಪು ಕಲ್ಪನೆಗಳನ್ನು ಹುಟ್ಟುಹಾಕಲಾಗುತ್ತಿದೆ. ಡಿಜಿ ಹಂತದ ಅಧಿಕಾರಿಯನ್ನು ಎಸ್‌ಐಟಿ ಮುಖ್ಯಸ್ಥರನ್ನಾಗಿ ಮಾಡಬೇಕು ಎಂದು ಸರ್ಕಾರ ತೀರ್ಮಾನ ಮಾಡಿತು. ಪ್ರಣವ್ ಮೊಹಾಂತಿಯವರನ್ನು ನೇಮಿಸಿದ್ದೇವೆ. ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಅವರ ಹೆಸರಿದೆ, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದರು.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಇಲ್ಲಸಲ್ಲದ ಪೋಸ್ಟಿಂಗ್‌ಗಳನ್ನು ಮಾಡಲಾಗುತ್ತಿದೆ. ಇದು ಸರಿ ಕಾಣಿಸುವುದಿಲ್ಲ. ಪ್ರಕರಣದಲ್ಲಿ ಸರ್ಕಾರದ ಆಸಕ್ತಿ ಏನಿದೆ? ಎಸ್‌ಐಟಿ ಯಾಕೆ ರಚಿಸುತ್ತಿದ್ದೆವು ಎಂದು ಪ್ರಶ್ನಿಸಿದ ಅವರು, ಪ್ರಕರಣದಲ್ಲಿ ಸತ್ಯಾಂಶ ಹೊರಬರಬೇಕು ಎಂಬುದಷ್ಟೆ ಸರ್ಕಾರಕ್ಕೆ ಮುಖ್ಯ ಎಂದು ಹೇಳಿದರು.

Megha
the authorMegha

Leave a Reply

error: Content is protected !!