NEWSನಮ್ಮರಾಜ್ಯಬೆಂಗಳೂರುರಾಜಕೀಯ

ಜನರಿಗೆ ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ಹುನ್ನಾರ: ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸರ್ಕಾರ ಬಡವರ ಜತೆ ಚಲ್ಲಾಟವಾಡುತ್ತಿದೆ. ಅವರಿಗೆ ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುವ ಕೆಲಸವನ್ನು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಆಲ್ಕೊಹಾಲಿನ ಬೆಲೆ ಏರಿಸಿದ ನಂತರ ಹಾಲಿನ ದರ ಏರಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು, ಸರ್ಕಾರ ಹಾಲಿನ ಬೆಲೆಯನ್ನೂ ಲೀಟರಿಗೆ 3ರೂ. ಹೆಚ್ಚಿಸಿ ಶ್ರಮಜೀವಿಗಳ ಜೇಬಿಗೆ ನೇರವಾಗಿಯೇ ಕನ್ನ ಹಾಕಿದೆ. ಒಂದು ಕೈಯಲ್ಲಿ ಕೊಟ್ಟು, ಇನ್ನೊಂದು ಕೈಯಲ್ಲಿ ಕಸಿದುಕೊಳ್ಳುತ್ತಿದೆ. ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಈಗ ಫ್ಲವರ್ ಪಾಟ್ ಇಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಬಾಯಿಬಾಯಿ ಬಡಿದುಕೊಂಡಿತ್ತು.ದೊಡ್ಡ ಬಾನಗಡಿಯನ್ನೇ ಎಬ್ಬಿಸಿತ್ತು. ಅಧಿಕಾರಕ್ಕೆ ಬಂದೊಡನೆ ಬೆಲೆ ಏರಿಕೆಯ ಸರಣಿ ಶಾಕ್ ನೀಡುತ್ತಿದೆ. ಹೀಗಿದೆ ನೋಡಿ ಕೈ ಕರಾಮತ್ತು. ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತನೀತಿಗೆ ಧಿಕ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ.

ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರಕಾರ, ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರಕಾರ, ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ ಎಂದು ವ್ಯಂಗ್ಯವಾಡಿದ್ದಾರೆ.

ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ!! ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ. ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕೇ ಹಾಲಾಹಲವಾಗಿದೆ ಎಂದು ಮಾಜಿ ಸಿಎಂ ಎಚ್‌ಡಿಕೆ ಟ್ವೀಟ್​ ಮಾಡಿದ್ದಾರೆ.

Leave a Reply

error: Content is protected !!
LATEST
KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ...