NEWSದೇಶ-ವಿದೇಶನಮ್ಮರಾಜ್ಯ

ಸರ್ಕಾರಿ ಜಮೀನು ಒತ್ತುವರಿ ಪ್ರಕರಣ: ಕೇಂದ್ರ ಸಚಿವ ಕುಮಾರಸ್ವಾಮಿ ಅರ್ಜಿ ಇತ್ಯರ್ಥಪಡಿಸಿದ ಸುಪ್ರೀಂ ಕೋರ್ಟ್‌

ವಿಜಯಪಥ - vijayapatha.in
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ರಾಮನಗರದ ಬಿಡದಿಯ ಕೇತಗಾನಹಳ್ಳಿ‌ ಬಳಿ ಸರ್ಕಾರಿ ಜಮೀನು ಒತ್ತುವರಿ ಪ್ರಕರಣದಲ್ಲಿ ದಾಖಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿ ವಜಾ ಮಾಡುವಂತೆ ಕೋರಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ  ಅರ್ಜಿಯನ್ನು ಸುಪ್ರೀಂ ಕೋರ್ಟ್ ಇತ್ಯರ್ಥಪಡಿಸಿದೆ.

ಹೈಕೋರ್ಟ್‌ನಲ್ಲಿ ವಿಚಾರಣೆ ಬಾಕಿ ಇರುವ ಹಿನ್ನೆಲೆ ಅದರ ಮುಂದೆಯೇ ಈ ಅಂಶವನ್ನು ಪ್ರಾಸ್ತಪಿಸುವಂತೆ ನ್ಯಾಯಾಲಯ ಹೇಳಿದೆ. ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಪಂಕಜ್ ಮಿಥಲ್ ಮತ್ತು ಎಸ್‌ವಿಎನ್ ಭಟ್ಟಿ ಅವರ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಹಿರಿಯ ವಕೀಲ ಮುಕುಲ್ ರೋಹಟ್ಗಿ ಮತ್ತು ವಕೀಲರಾದ ಬಾಲಾಜಿ ಶ್ರೀನಿವಾಸನ್ ಮತ್ತು ನಿಶಾಂತ್ ಎವಿ ವಾದ ಮಂಡಿಸಿದರು.  ಕುಮಾರಸ್ವಾಮಿ ಪರ ವಾದಿಸಿದ ವಕೀಲರು, ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ನಾವು ಪಕ್ಷಕಾರರಲ್ಲ ಆದಾಗ್ಯೂ ನೋಟಿಸ್ ನೀಡಲಾಗುತ್ತಿದೆ ಎಂದು ವಾದಿಸಿದರು.

ಸರ್ಕಾರೇತರ ಸಂಸ್ಥೆ ಸಮಾಜ ಪರಿವರ್ತನ ಸಮುದಾಯದ ಪರವಾಗಿ ವಾದ ಮಂಡಿಸಿದ ವಕೀಲ ಪ್ರಶಾಂತ್ ಭೂಷಣ್, ಅರ್ಜಿದಾರರು ತೆರವು ಪ್ರಕ್ರಿಯೆಯನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಈಗಾಗಲೇ ರಿಟ್ ಅರ್ಜಿ ಸಲ್ಲಿಸಿದ್ದಾರೆ ಎಂದು ಕೋರ್ಟ್‌ ಗಮನಕ್ಕೆ ತಂದರು.

ಈ ವೇಳೆ ಮಧ್ಯಪ್ರವೇಶ ಮಾಡಿದ ಪೀಠ, ಅರ್ಜಿದಾರರು ಎದುರಿಸುತ್ತಿರುವ ಸಂಕಷ್ಟವನ್ನು ನಾವು ಅರ್ಥ ಮಾಡಿಕೊಂಡಿದ್ದೇವೆ. ಇದು ರಾಜಕೀಯ ಕಾರಣಗಳಿಗೂ ಇರಬಹುದು. ನಾವು ನಿಮಗೆ ಹೈಕೋರ್ಟ್‌ಗೆ ಹೋಗಲು ಸ್ವಾತಂತ್ರ್ಯ ನೀಡಬಹುದು. ಯಾವುದೇ ಪಕ್ಷಗಳು ಇಲ್ಲಿ ಪೂರ್ವಾಗ್ರಹಕ್ಕೆ ಒಳಗಾಗಬಾರದು ಎಂದು ನಾವು ಬಯಸುತ್ತೇವೆ ಎಂದು ಹೇಳಿ ಅರ್ಜಿಯನ್ನು ಇತ್ಯರ್ಥ ಪಡಿಸಿತು.

2014 ರಲ್ಲಿ ಎಂಟು ಸರ್ವೆ ನಂಬರ್‌ಗಳ ಒತ್ತುವರಿ ಮಾಡಲಾಗಿದೆ ಎನ್ನಲಾಗಿತ್ತು. ಈ ಒತ್ತುವರಿ ತೆರಿವಿಗೆ ಲೋಕಾಯುಕ್ತ ಸೂಚಿಸಿತ್ತು. ಲೋಕಾಯುಕ್ತದ ಸೂಚನೆ ಬಳಿಕವೂ ಅಧಿಕಾರಿಗಳು ತೆರವು ಮಾಡಲಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಮಾಜ ಪರಿವರ್ತನ ಸಮಾಜ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತು.

Advertisement

ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮೂರು ತಿಂಗಳಲ್ಲಿ ತೆರವು ಮಾಡಲು ಸೂಚನೆ ನೀಡಿತ್ತು. ಹೈಕೋರ್ಟ್ ಸೂಚನೆ ಬಳಿಕವೂ ಅಧಿಕಾರಿಗಳು ತೆರವು ಮಾಡದ ಹಿನ್ನೆಲೆ ಸಮಾಜ ಪರಿವರ್ತನಾ ಸಮಾಜ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು. ಈ ನ್ಯಾಯಾಂಗ ನಿಂದನೆ ಅರ್ಜಿ ವಜಾ ಮಾಡಲು ಕುಮಾರಸ್ವಾಮಿ ಸುಪ್ರೀಂ ಕೋರ್ಟ್‌ಗೆ ಕೋರಿದ್ದರು.

Deva
the authorDeva

Leave a Reply

error: Content is protected !!