NEWSಕೃಷಿನಮ್ಮರಾಜ್ಯ

ಆ.31ರಿಂದ ಜಾರಿಗೆ ಬರುವಂತೆ ನೋಂದಣಿ ಶುಲ್ಕ ಶೇ.1 ರಿಂದ ಶೇ.2ರಷ್ಟು ಪರಿಷ್ಕರಿಸಿ ಸರ್ಕಾರ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಆ.31ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವು ನೆರೆಹೊರೆಯ ರಾಜ್ಯಗಳಲ್ಲಿರುವ ದರಗಳಿಗಿಂತ ಪ್ರಸ್ತುತ ಕಡಿಮೆ ಶುಲ್ಕ ಇದೆ. ಸದ್ಯ ಅದನ್ನು ಇತರೆ ರಾಜ್ಯಗಳ ಶುಲ್ಕಗಳೊಂದಿಗೆ ಸಮೀಕರಣ ಮಾಡಿ ಪರಿಷ್ಕರಿಸಲಾಗುತ್ತಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲೈ ಮುಗಿಲನ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಮುದ್ರಾಂಕ, ನೋಂದಣಿ ಹಾಗೂ ಇತರೆ ಸೆಸ್ ಸೇರಿ ಕರ್ನಾಟಕ ರಾಜ್ಯವು ಶೇ.6.6ರಷ್ಟು ವಿಧಿಸುತ್ತಿತ್ತು. ಇದೇ ಅವಧಿಯಲ್ಲಿ ಈ ಶುಲ್ಕವು ತಮಿಳುನಾಡು ರಾಜ್ಯದಲ್ಲಿ ಶೇ.9, ಕೇರಳ ಶೇ.10, ಆಂಧ್ರಪ್ರದೇಶ ಶೇ.7.5, ತೆಲಂಗಾಣ ರಾಜ್ಯಗಳು ಶೇ.7.5ರಷ್ಟು ಶುಲ್ಕ ಅನುಸರಿಸುತ್ತಿವೆ.

ದಸ್ತಾವೇಜುಗಳ ಮೇಲಿನ ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳನ್ನು ಇತರೆ ರಾಜ್ಯಗಳೊಂದಿಗೆ ಸಮೀಕರಿಸಿಕೊಳ್ಳಲು, ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಬಲಪಡಿಸಲು ಮತ್ತು ನಾಗರಿಕರಿಗೆ ಉತ್ತಮ ಹಾಗೂ ಪರಿಣಾಮಕಾರಿ ಸೇವೆಯನ್ನು ನೀಡಲು ರಾಜ್ಯ ಸರ್ಕಾರವು 2025ರ ಆ.31ರಿಂದ ಜಾರಿಗೆ ಬರುವಂತೆ ನೋಂದಣಿ ಶುಲ್ಕವನ್ನು ಶೇ.1 ರಿಂದ ಶೇ.2ರಷ್ಟು ಪರಿಷ್ಕರಿಸಿದೆ.

ಪರಿಷ್ಕೃತ ನೋಂದಣಿ ಶುಲ್ಕವನ್ನು ಸುಗಮವಾಗಿ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಬಹುದು. ಹಿಂದಿನ ನೋಂದಣಿ ಶುಲ್ಕವನ್ನು ಪಾವತಿಸಿ ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಅಪಾಯಿಂಟ್‌ಮೆಂಟ್ ಪಡೆದಿರುವವರು ಅಥವಾ ಶುಲ್ಕವನ್ನು ಪಾವತಿಸಿ ಅಪಾಯಿಂಟ್‌ಮೆಂಟ್ ಪಡೆಯದಿರುವವರು, ವ್ಯತ್ಯಾಸದ ಮೊತ್ತವನ್ನು ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಬೇಕು.

ಇನ್ನು ಮೊದಲು ಬಳಸಿದ ಲಾಗಿನ್ ಮೂಲಕವೇ ಈ ಪಾವತಿಯನ್ನು ಮಾಡಬೇಕು. ಅರ್ಜಿದಾರರಿಗೆ ನೆರವಾಗುವ ದೃಷ್ಟಿಯಿಂದ ಅಗತ್ಯ ಸೂಚನೆಗಳನ್ನು ಒಳಗೊಂಡ ಎಸ್‌ಎಂಎಸ್ ನೇರವಾಗಿ ಅವರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುವುದು.

ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಸಲ್ಲಿಸಲಾಗಿರುವ ಹಾಗೂ ಪರಿಶೀಲನೆಯಲ್ಲಿರುವ ದಸ್ತಾವೇಜುಗಳಿಗೆ ನೋಂದಣಿ ಶುಲ್ಕವನ್ನು ಮರು ಲೆಕ್ಕ ಹಾಕಲಾಗುವುದು ಮತ್ತು ಪರಿಷ್ಕೃತ ಶೇಕಡ 2 ರಂತೆ ನೋಂದಣಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈ ವರ್ಗದ ಅರ್ಜಿದಾರರಿಗೆ ಪಾವತಿಯ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲು ಪರಿಷ್ಕೃತ ನೋಂದಣಿ ಶುಲ್ಕದ ವಿವರವನ್ನು ತಿಳಿಸಲಾಗುವುದು.

ಇಲಾಖೆಯು ದಸ್ತಾವೇಜುಗಳ ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬವಾಗುವುದನ್ನು ತಪ್ಪಿಸಲು ಎಲ್ಲ ಅರ್ಜಿದಾರರಿಗೆ ಮೇಲ್ಕಾಣಿಸಿದ ನವೀಕರಿಸಿದ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹಂತ ಹಂತವಾಗಿ ಅನುಸರಿಸಬಹುದಾದ ವಿವರವಾದ ಸೂಚನೆಗಳನ್ನು ಇಲಾಖೆಯ ಅಧಿಕೃತ ಪೋರ್ಟಲ್‌ನಲ್ಲಿ ಲಭ್ಯವಾಗುವಿರುವಂತೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ