NEWSನಮ್ಮಜಿಲ್ಲೆನಮ್ಮರಾಜ್ಯ

ಸೇವೆಯಿಂದ ಸ್ವಯಂ ನಿವೃತ್ತಿ ಪಡೆದು ಸನ್ಯಾಸಿಯಾದ ಕೆಎಎಸ್ ಅಧಿಕಾರಿಗೆ ಬಡ್ತಿ ನೀಡಿದ ಸರ್ಕಾರ: ಜಾಡಿಸಿದ ಆರ್‌.ಅಶೋಕ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಯಾಗಿದ್ದ ಡಾ. ಕೆ.ಮೋಹನ್​ ಅವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ನೇಮಕ ಮಾಡಿರುವ ಪತ್ರವೊಂದು ವೈರಲ್‌ ಆಗಿ, ಅದನ್ನು ಸಿಎಂ ಸಿದ್ದರಾಮಯ್ಯ ನಕಲಿ ಎಂದ ಬೆನ್ನಲ್ಲೇ ರಾಜ್ಯ ಸರ್ಕಾರದ ಆಡಳಿತಾತ್ಮಕ ಪ್ರಮಾದವೊಂದು ಮುನ್ನಲೆಗೆ ಬಂದಿದೆ.

ಇತ್ತೀಚೆಗೆ ಸರ್ಕಾರ ಹೊರಡಿಸಿದ್ದ ಕೆಎಎಸ್ (KAS) ಅಧಿಕಾರಿಗಳ ಬಡ್ತಿ ಪಟ್ಟಿಯಲ್ಲಿ ಸನ್ಯಾಸ ಸ್ವೀಕರಿಸಿದ ನಿವೃತ್ತ ಅಧಿಕಾರಿಯೊಬ್ಬರ ಹೆಸರು ಕಾಣಿಸಿಕೊಂಡಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. ಸರ್ಕಾರದ ಈ ಗಂಭೀರ ಬೇಜವಾಬ್ದಾರಿತನವನ್ನು ವಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಏನಿದು ಪ್ರಮಾದ?: ರಾಜ್ಯ ಸರ್ಕಾರವು ಇತ್ತೀಚೆಗೆ 20 ಕೆಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಪಟ್ಟಿಯಲ್ಲಿ ಮಂಡ್ಯದ ಮಾಜಿ ಅಪರ ಜಿಲ್ಲಾಧಿಕಾರಿ (ADC) ಎಚ್.ಎಲ್. ನಾಗರಾಜ್ ಅವರ ಹೆಸರೂ ಸೇರಿದೆ. ವಿಶೇಷವೆಂದರೆ, ನಾಗರಾಜ್ ಅವರು ಈಗಾಗಲೇ ಸರ್ಕಾರಿ ಸೇವೆಯಿಂದ ಸ್ವಯಂ ನಿವೃತ್ತಿ (VRS) ಪಡೆದು, ಸಂನ್ಯಾಸ ದೀಕ್ಷೆ ಸ್ವೀಕರಿಸಿದ್ದಾರೆ.

ಇನ್ನು ಅವರು ಬೆಂಗಳೂರಿನ ಕೆಂಗೇರಿ ಸಮೀಪದ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಪೀಠಾಧಿಪತಿಯಾಗಿ ‘ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ’ ಎಂಬ ಹೆಸರಿನಲ್ಲಿ ಆಧ್ಯಾತ್ಮಿಕ ಜೀವನ ನಡೆಸುತ್ತಿದ್ದಾರೆ. ಆದರೆ ಸರ್ಕಾರದ ಆದೇಶದಲ್ಲಿ ಅವರನ್ನು ‘ಸ್ಥಳ ನಿರೀಕ್ಷೆಯಲ್ಲಿದ್ದಾರೆ’ ಎಂದು ನಮೂದಿಸಿ ಬಡ್ತಿ ನೀಡಿರುವುದು ಆಡಳಿತ ಯಂತ್ರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ.

ಆರ್. ಅಶೋಕ್ ಟೀಕೆ: ಈ ಬಗ್ಗೆ ತಮ್ಮ ‘ಎಕ್ಸ್’ನಲ್ಲಿ ಸರಣಿ ಪೋಸ್ಟ್ ಮಾಡಿರುವ ಆರ್. ಅಶೋಕ್, ಕಾಂಗ್ರೆಸ್ ಸರ್ಕಾರದ ಅದಕ್ಷತೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ನಿಮ್ಮ ಸರ್ಕಾರದ ಅದಕ್ಷತೆ ಮತ್ತು ಅಸಮರ್ಥತೆ ಯಾವ ಮಟ್ಟಕ್ಕೆ ತಲುಪಿದೆ ಎಂದರೆ, ಕಾವಿ ಧರಿಸಿ ಪೀಠಾಧಿಪತಿಯಾಗಿರುವವರಿಗೂ ಬಡ್ತಿ ನೀಡುವ ಹಂತಕ್ಕೆ ಬಂದಿದೆ. ಸೇವೆಯಲ್ಲಿರುವವರು ಯಾರು ಮತ್ತು ನಿವೃತ್ತರಾದವರು ಯಾರು ಎಂಬ ಕನಿಷ್ಠ ಮಾಹಿತಿಯೂ ಸರ್ಕಾರಕ್ಕೆ ಇಲ್ಲದಿರುವುದು ದುರಂತ,” ಎಂದು ಟೀಕಿಸಿದ್ದಾರೆ.

ಮುಂದುವರಿದು “ಮುಖ್ಯಮಂತ್ರಿಗಳು ಮತ್ತು ಸಚಿವರು ಫೈಲುಗಳಿಗೆ ಸಹಿ ಮಾಡುವ ಮುನ್ನ ಅವುಗಳನ್ನು ಓದುತ್ತಾರೋ ಅಥವಾ ಕಣ್ಣು ಮುಚ್ಚಿಕೊಂಡು ಸಹಿ ಹಾಕುತ್ತಾರೋ? ಇವತ್ತು ನಿವೃತ್ತರಾದವರಿಗೆ ಬಡ್ತಿ ನೀಡಿದ್ದೀರಿ, ನಾಳೆ ನಿಧನರಾದವರಿಗೆ ವರ್ಗಾವಣೆ ಆದೇಶ ಹೊರಡಿಸಿದರೂ ಆಶ್ಚರ್ಯವಿಲ್ಲ. ಇದು ಆಡಳಿತ ವ್ಯವಸ್ಥೆಯ ಸಂಪೂರ್ಣ ಕುಸಿತದ ಸೂಚನೆ ಎಂದು ವ್ಯಂಗ್ಯವಾಡಿದ್ದಾರೆ.

ಈ ಪ್ರಮಾದವು ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರದ ಇರೋಬರೋ ಗೌರವ ಉಳಿಸಿಕೊಳ್ಳಲು ಸಿಎಂ ರಾಜೀನಾಮೆ ನೀಡಬೇಕೆಂದು ಇತ್ತ ಬಿಜೆಪಿಯ ಹಲವು ಮುಖಂಡರು ಒತ್ತಾಯಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಗ್ಯಾಸ್‌ ಸಿಲಿಂಡರ್‌ಗೆ 195.50 ರೂ ಏರಿಕೆ: ಶಾಕ್‌ಕೊಟ್ಟ ಕೇಂದ್ರ ಸರ್ಕಾರ KSRTC: ಏ.6ರ ಸಭೆಯಲ್ಲಿ ನೌಕರರ ಬೇಡಿಕೆ ಈಡೇರದಿದ್ದರೆ 8ರಿಂದ ಪಾದಯಾತ್ರೆ, 21ರಿಂದ ಆಮರಣಾಂತ ಉಪವಾಸ -ಕೂಟದ ಸಭೆಯಲ್ಲಿ ನ... ಡೀಸೆಲ್‌ ಟ್ಯಾಂಕರ್‌-ಕಾರಿನ ನಡುವೆ ಭೀಕರ ಅಪಘಾತ: ತಪ್ಪಿದ ಭಾರಿ ದುರಂತ KSRTC: ಸಿಬ್ಬಂದಿಗಳಿಗೆ 38 ತಿಂಗಳ ಹಿಂಬಾಕಿ, ವೇತನ ಹೆಚ್ಚಳ ಮಾಡೋಕೆ ಹಣವಿಲ್ಲವೆನ್ನೋ ಸಚಿವರಿಗೆ ಅನಾವಶ್ಯ ಖರ್ಚು ಮಾಡೋಕ... ರೈತರತ್ನ ಕುರುಬೂರು ಶಾಂತಕುಮಾರ್ ಹುಟ್ಟು ಹಬ್ಬ ನೆನಪಿಗಾಗಿ ಕೃಷಿ ಕಾರ್ಮಿಕ ಮಹಿಳೆಯರಿಗೆ ಸನ್ಮಾನ ಕನಿಷ್ಠ ಹೆಚ್ಚುವರಿ ಪಿಂಚಣಿ 7500 ರೂ. ಭತ್ಯೆ, ವೈದ್ಯಕೀಯ ಸೌಲಭ್ಯಕ್ಕೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟ... KSRTC: ನಾಳೆ ನೌಕರರ ಕೂಟದ ಸರ್ವ ಸದಸ್ಯರ, ಪದಾಧಿಕಾರಿಗಳು, ನಿವೃತ್ತರ ಸಭೆ KSRTC: ನೌಕರರಿಗೆ ವೇತನ ಬಡ್ತಿ ನೀಡಿದ ಆಯಾ ತಿಂಗಳಲ್ಲಿಯೇ HRMSನಲ್ಲಿ ಜಾರಿ ಮಾಡಿ, ಇಲ್ಲದಿದ್ದರೆ ಕ್ರಮ- ಸಿಪಿಎಂ ಎಚ್ಚರ... ನಾಲ್ಕೂ ಸಾರಿಗೆ ನಿಗಮಗಳಿಗೆ "ಶಕ್ತಿ" ಮುಂಗಡವಾಗಿ 500 ಕೋಟಿ ರೂ. ಬಿಡುಗಡೆ ಮಾಡಿ ಸರ್ಕಾರ ಆದೇಶ ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ಭವಿಷ್ಯ ಶೂನ್ಯ!