NEWSನಮ್ಮಜಿಲ್ಲೆನಮ್ಮರಾಜ್ಯ

4 ಸಾರಿಗೆ ಸಂಸ್ಥೆಗಳಿಗೆ ನವೆಂಬರ್ ತಿಂಗಳ ಉಚಿತ ಟಿಕೆಟ್‌ಗೆ ಮುಂಗಡವಾಗಿ 441.66 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ನಾಲ್ಕೂ ಸಾರಿಗೆ ಸಂಸ್ಥೆಗಳಿಗೆ ಶಕ್ತಿ ಯೋಜನೆಯಡಿ ನವೆಂಬರ್-2025ರ ಮಾಹೆಯಲ್ಲಿ ರಾಜ್ಯದ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ವಿತರಿಸಲಾಗುವ ಶೂನ್ಯ ಟಿಕೇಟ್‌ಗಳ ವೆಚ್ಚಕ್ಕೆ ಮುಂಗಡವಾಗಿ 441 ಕೋಟಿ 66 ಲಕ್ಷದ 66 ಸಾವಿರ ರೂಪಾಯಿಗಳನ್ನು ಬಿಡುಗಡೆಗೊಳಿಸಿ ಸರ್ಕಾರ ಸೋಮವಾರ ಆದೇಶಿಸಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಿಗೆ ನವೆಂಬರ್‌ ತಿಂಗಳ ಉಚಿತ ಟಿಕೆಟ್‌ ಹಣ 441 ಕೋಟಿ 66 ಲಕ್ಷದ 66 ಸಾವಿರ ರೂಪಾಯಿಗಳನ್ನು ಮುಂಗಡವಾಗಿ ಬಿಡುಗಡೆಗೊಳಿಸಿದೆ.

ಇನ್ನು ಸರ್ಕಾರದ ಆದೇಶದಲ್ಲಿ ರಾಜ್ಯದ ನಾಲ್ಕೂ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ರಾಜ್ಯಾದ್ಯಂತ ನಗರ, ಸಾಮಾನ್ಯ ಹಾಗೂ ವೇಗದೂತ (Express) ಬಸ್ಸುಗಳಲ್ಲಿ ರಾಜ್ಯದ ಎಲ್ಲ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಉಚಿತವಾಗಿ ಪ್ರಯಾಣಿಸಲಿದ್ದಾರೆ.

ಹೀಗಾಗಿ 17.11.2025ರಂದು ರಾಜ್ಯದ 4 ಸಾರಿಗೆ ಸಂಸ್ಥೆಗಳಿಗೆ ಶಕ್ತಿ ಯೋಜನೆಯಡಿ ನವೆಂಬರ್-2025ರ ಮಾಹೆಯಲ್ಲಿ ರಾಜ್ಯದ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ವಿತರಿಸಲಾಗುವ ಶೂನ್ಯ ಟಿಕೇಟ್‌ಗಳ ವೆಚ್ಚಕ್ಕೆ ಮುಂಗಡವಾಗಿ 441 ಕೋಟಿ 66 ಲಕ್ಷದ 66 ಸಾವಿರ ರೂ.ಗಳನ್ನು ಷರತ್ತುಗಳಿಗೊಳಪಟ್ಟು ಶೇಕಡವಾರು ಅನುಪಾತದನ್ವಯ ನಿಗಮವಾರು ಬಿಡುಗಡೆಗೊಳಿಸಿ ಆದೇಶಿಸಿದೆ.

ಅದರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 171 ಕೋಟಿ 41 ಲಕ್ಷದ 8 ಸಾವಿರ ರೂ., ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 75 ಕೋಟಿ 65 ಲಕ್ಷದ 75 ಸಾವಿರ ರೂ.ಗಳು ಹಾಗೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 107 ಕೋಟಿ 67ಲಕ್ಷದ 83 ಸಾವಿರ ರೂ.ಗಳನ್ನು ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ 86 ಕೋಟಿ 92ಲಕ್ಷ ರೂ.ಗಳನ್ನು ಅಂದರೆ ಒಟ್ಟಾರೆ 441 ಕೋಟಿ 66 ಲಕ್ಷದ 66 ಸಾವಿರ ರೂ.ಗಳನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

ಇನ್ನು ಬಿಡುಗಡೆ ಮಾಡಿರುವ ಅನುದಾನವನ್ನು ನಾಲ್ಕೂ ಸಾರಿಗೆ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರು ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ, ಬೆಂಗಳೂರು ಇವರಿಂದ ಪೇಯಿಸ್ ರಶೀದಿಗೆ ಮೇಲು ರುಜು ಪಡೆದು ರಾಜ್ಯ ಹುಜೂರು ಖಜಾನೆಯಿಂದ ಡ್ರಾ ಮಾಡಲು ಅನುಮತಿ ನೀಡಿದೆ ಎಂದು ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ತಿಳಿಸಿದ್ದಾರೆ. ಶಕ್ತಿ ಯೋಜನೆಯ ಅನುದಾನ ಬಿಡುಗಡೆ ಆದೇಶ

Megha
the authorMegha

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ