Please assign a menu to the primary menu location under menu

NEWSಆರೋಗ್ಯದೇಶ-ವಿದೇಶ

ಗರ್ಭಕೋಶ ಕ್ಯಾನ್ಸರ್ ತಡೆಗೆ ಸರ್ಕಾರ ಮುಂದಾಗಬೇಕು: ಸಂಸದೆ ಸುಧಾಮೂರ್ತಿ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಗರ್ಭಕೋಶದ ಕ್ಯಾನ್ಸರ್ ತಡೆಗೆ ಲಸಿಕೆ ಹಾಗೂ ಕರ್ನಾಟಕ ಸೇರಿದಂತೆ ದೇಶದ ಪ್ರವಾಸೋದ್ಯಮ ಅಭಿವೃದ್ಧಿ ಹೆಚ್ಚು ಒತ್ತು ನೀಡಬೇಕು ಎಂದು ಇನ್ಫೋಸಿಸ್ ಪ್ರತಿಷ್ಠಾನದ ಸಂಸ್ಥಾಪಕಿ, ರಾಜ್ಯ ಸಭೆ ಸದಸ್ಯೆ ಡಾ.ಸುಧಾಮೂರ್ತಿ
ಸದನದ ಗಮನಕ್ಕೆ ತಂದರು.

ರಾಜ್ಯ ಸಭೆಗೆ ನಾಮನಿರ್ದೇಶನಗೊಂಡಿರುವ ಸುಧಾಮೂರ್ತಿ ಅವರು ಇದೇ ಮೊದಲ ಬಾರಿಗೆ ರಾಜ್ಯ ಸಭೆಯಲ್ಲಿ ಮಾತನಾಡಿದ್ದು, “ನಾನು ರಾಜಕಾರಣಿಯಲ್ಲ ನನಗೆ ಹೆಚ್ಚು ಮತ್ತು ರಾಜಕೀಯ ಮಾತುಗಳನ್ನು ಆಡಲು ಬರುವುದಿಲ್ಲ ಎನ್ನುತ್ತಲೆ ಮಾತು ಆರಂಭಿಸಿದ ಅವರು ಈ ಎರಡು ಪ್ರಮುಖ ವಿಚಾರಗಳನ್ನು ಸದನದಲ್ಲಿ ಪ್ರಸ್ತಾಪಿಸುವ ಮೂಲಕ ಗಮನ ಸೆಳೆದರು.

ಗರ್ಭಕೋಶ ಕ್ಯಾನ್ಸರ್ ಈಗ ಮಾರಣಾಂತಿಕವಾಗಿದೆ. ಇದರ ವಿರುದ್ಧ ಹೋರಾಡಲು ಸರ್ಕಾರಿ ಪ್ರಾಯೋಜಿತ ಲಸಿಕೆ ಕಾರ್ಯಕ್ರಮ ಪ್ರಾರಂಭವಾಗಬೇಕು. ತಾಯಿ ಮೃತಪಟ್ಟರೆ ಮಕ್ಕಳು ಜೀವನ ಪೂರ್ತಿ ಅನಾಥರಾಗುತ್ತಾರೆ. ಹೀಗಾಗಿ, ಗರ್ಭಕೋಶ ಕ್ಯಾನ್ಸರ್ಗೆ ಲಸಿಕೆ ನೀಡುವ ವ್ಯವಸ್ಥೆ ಮಾಡಬೇಕು. ಈಗ ಲಸಿಕೆಗೆ 1,300-1,400 ರೂ. ಆಗುತ್ತದೆ. ಸರ್ಕಾರ ಮಧ್ಯ ಪ್ರವೇಶಿಸಿದರೆ ಅದನ್ನು 800 ರೂ.ಗೆ ಇಳಿಸಿ ಹೆಣ್ಣು ಮಕ್ಕಳಿಗೆ ಲಸಿಕೆ ಕೊಡಬಹುದು ಎಂದರು.

ಇನ್ನು 9-14 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಗರ್ಭಕೋಶ ಲಸಿಕೆ ಇದ್ದು, ಇದನ್ನು ತೆಗೆದುಕೊಂಡರೆ ಕ್ಯಾನ್ಸರ್ ತಡೆಗಟ್ಟಬಹುದು. ನಮ್ಮ ಹೆಣ್ಣು ಮಕ್ಕಳ ಒಳಿತಿಗಾಗಿ ಈ ಲಸಿಕೆ ನೀಡಲು ನಾವು ಉತ್ತೇಜನ ನೀಡಬೇಕು ಎಂದು ಹೇಳಿದರು.

ಇನ್ನು ಭಾರತದಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ದೇಶದಲ್ಲಿ 42 ಪ್ರವಾಸಿ ತಾಣಗಳು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿವೆ. ಇನ್ನೂ 57 ತಾಣಗಳು ಪೆಂಡಿಂಗ್ ಲಿಸ್ಟ್‌ನಲ್ಲಿವೆ. ಅವುಗಳ ಕುರಿತು ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಇದರ ಜತೆಗೆ ಕರ್ನಾಟಕದ ಶ್ರವಣಬೆಳಗೋಳದಲ್ಲಿನ ಬಾಹುಬಲಿ ಮೂರ್ತಿ, ಬದಾಮಿ, ಐಹೊಳೆ, ಮಧ್ಯ ಪ್ರದೇಶದ ಮಾಂಡು, ದೇಶದ ಗುಹೆಗಳು, ಲಿಂಗರಾಜ ದೇವಾಲಯಗಳು ದೇಶದ ಸಂಸ್ಕೃತಿಯ ತಾಣಗಳಾಗಿವೆ. ಇವುಗಳನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಬೇಕೆಂದು ಒತ್ತಾಯಿಸಿದರು.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...