NEWSನಮ್ಮಜಿಲ್ಲೆನಮ್ಮರಾಜ್ಯ

ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಈ 2 ಯೋಜನಗೆಳು ಇನ್ನು ಮುಂದೆ ಸಿಗಲ್ಲ!?

ತೆರಿಗೆ ಪಾವತಿಸುವವರು ಕೂಡ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಲಾಭ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ. ಈ ಯೋಜನೆಗಳ ಮುಖ್ಯ ಉದ್ದೇಶ ಆರ್ಥಿಕವಾಗಿ ಹಿಂದುಳಿದವರಿಗೆ ನೆರವು ನೀಡುವುದಾಗಿದ್ದು, ಹೀಗಾಗಿ ತೆರಿಗೆ ಪಾವತಿಸುವವರನ್ನು ಈ ವ್ಯಾಪ್ತಿಯಿಂದ ಹೊರಗಿಡಲು ಚಿಂತನೆ ನಡೆಸಲಾಗಿದೆ.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪಂಚ ಗ್ಯಾರಂಟಿಗಳ ಮೇಲೆ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ನ ಸಿದ್ದರಾಮಯ್ಯ ನೇತೃತವದ ಸರ್ಕಾರ ಈಗ 2 ಮಹತ್ವದ ಗ್ಯಾರಂಟಿಗಳಾದ ಗೃಹಲಕ್ಷ್ಮಿ ಹಾಗೂ ಗೃಹ ಜ್ಯೋತಿ ಯೋಜನೆಗಳ ಪರಿಷ್ಕರಣೆಗೆ ನಿರ್ಧರಿಸಿದ್ದು, ಈ ನನಿಟ್ಟಿನಲ್ಲಿ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಮುಖ ಗ್ಯಾರಂಟಿ ಯೋಜನೆಗಳಾದ ಈ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ಸರ್ಕಾರ ಮುಂದಾಗಿದೆ.

ಈ ಸಂಬಂಧ ನಿನ್ನೆ ನಡೆದ ಎಸ್ಐಆರ್ ಸಭೆಯಲ್ಲಿ ಈ ಕುರಿತು ವಿಸ್ತೃತವಾಗಿ ಚರ್ಚಿಸಲಾಗಿದ್ದು, ಫಲಾನುಭವಿಗಳ ಅರ್ಹತೆಯನ್ನು ಸಮಗ್ರವಾಗಿ ಪರಿಶೀಲಿಸಲು ಸರ್ಕಾರ ಮುಂದಾಗಿದೆ. ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗದಂತೆ ಹಾಗೂ ನಿಜವಾದ ಅರ್ಹ ಬಡ ಜನರಿಗೆ ಮಾತ್ರ ಯೋಜನೆ ತಲುಪಬೇಕು ಎಂಬ ಉದ್ದೇಶದಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಲಾಯತ್ತಿದೆ.

ರಾಜ್ಯ ಸರ್ಕಾರದ ಎಸ್‌ಐಆರ್ (SIR) ವಿಶೇಷ ಸಭೆಯಲ್ಲಿ ಈ ಕುರಿತು ಸುದೀರ್ಘ ಚರ್ಚೆ ನಡೆದಿದ್ದು, ಅನಗತ್ಯವಾಗಿ ಯೋಜನೆಗಳ ಲಾಭ ಪಡೆಯುತ್ತಿರುವವರನ್ನು ಪಟ್ಟಿಯಿಂದ ಕೈಬಿಡಲು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಯೋಜನೆಯಲ್ಲಿ ಪಾರದರ್ಶಕತೆ ಮತ್ತು ಅರ್ಹ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ದೊರೆಯುವಂತೆ ಮಾಡುವುದಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಹಣವು ಮೃತಪಟ್ಟವರ ಹೆಸರಿನಲ್ಲಿಯೂ ಸಂದಾಯವಾಗುತ್ತಿರುವ ಹಲವಾರು ಪ್ರಕರಣಗಳು ವರದಿಯಾಗಿವೆ.

ಗೃಹ ಲಕ್ಷ್ಮಿ ಮತ್ತು ಗೃಹ ಜ್ಯೋತಿ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಾದ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಸಮಗ್ರವಾಗಿ ಪರಿಶೀಲಿಸಲು ತೀರ್ಮಾನಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಬರೋಬ್ಬರಿ 1.24 ಕೋಟಿಗೂ ಹೆಚ್ಚು ಗೃಹಲಕ್ಷ್ಮಿ ಫಲಾನುಭವಿಗಳಿದ್ದಾರೆ. ಇಷ್ಟು ದೊಡ್ಡ ಪ್ರಮಾಣದ ಫಲಾನುಭವಿಗಳ ಪಟ್ಟಿಯಲ್ಲಿ ಹಲವು ತಾಂತ್ರಿಕ ದೋಷಗಳು ಹಾಗೂ ನಿಯಮ ಉಲ್ಲಂಘನೆಗಳು ಪತ್ತೆಯಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ.

ಇದು ಸರ್ಕಾರಿ ಹಣದ ದುರುಪಯೋಗಕ್ಕೆ ಕಾರಣವಾಗುತ್ತಿದೆ. ಅಲ್ಲದೆ, ತೆರಿಗೆ ಪಾವತಿಸುವವರು ಕೂಡ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಲಾಭ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ. ಈ ಯೋಜನೆಗಳ ಮುಖ್ಯ ಉದ್ದೇಶ ಆರ್ಥಿಕವಾಗಿ ಹಿಂದುಳಿದವರಿಗೆ ನೆರವು ನೀಡುವುದಾಗಿದ್ದು, ಹೀಗಾಗಿ ತೆರಿಗೆ ಪಾವತಿಸುವವರನ್ನು ಈ ವ್ಯಾಪ್ತಿಯಿಂದ ಹೊರಗಿಡಲು ಚಿಂತನೆ ನಡೆಸಲಾಗಿದೆ.

ಇದಲ್ಲದೆ, ಒಂದೇ ಮನೆಯಲ್ಲಿ ಇಬ್ಬಿಬ್ಬರಿಗೆ ಗೃಹಲಕ್ಷ್ಮಿ ಹಣ ಜಮೆಯಾಗುತ್ತಿರುವ ಅಕ್ರಮಗಳು ಸಹ ಬೆಳಕಿಗೆ ಬಂದಿದ್ದು, ಈ ಬಗ್ಗೆಯೂ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಇನ್ನು ಈ ಎಲ್ಲ ಅಕ್ರಮಗಳನ್ನು ಮತ್ತು ಅನರ್ಹ ಫಲಾನುಭವಿಗಳನ್ನು ಗುರುತಿಸಿ ಪಟ್ಟಿಯಿಂದ ಕೈಬಿಡುವ ಸಲುವಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​​ ನೇತೃತ್ವದಲ್ಲಿ ಸಮಗ್ರ ಪರಿಶೀಲನೆಗೆ ಚಿಂತನೆ ನಡೆಸಲಾಗಿದೆ.

Megha
the authorMegha

Leave a Reply

error: Content is protected !!
Latest news
BPL ಕಾರ್ಡ್‌ದಾರರು ಮಾತ್ರ ಗೃಹಲಕ್ಷ್ಮಿ ಫಲಾನುಭವಿಗಳು ಆದರೆ, ಅರ್ಹತೆ ಮೀರಿದವರು ಎಂದರೆ ಯಾರು? ಸರ್ಕಾರವನ್ನು ಪ್ರಶ್ನಿಸ... ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಈ 2 ಯೋಜನಗೆಳು ಇನ್ನು ಮುಂದೆ ಸಿಗಲ್ಲ!? ಭಟ್ಕಳ: ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ 8 ಮಂದಿ ಮೃತ- ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಹೈ ಕೋರ್ಟ್‌ CJಗೆ ಪತ್ರ ಬರೆದ ನೌಕರರು: ಸಮಾನ ಕೆಲಸಕ್ಕೆ ಸಮಾನ ವೇತನ ಬೇಕು! ಸಾರಿಗೆ ನಿಗಮ ನೌಕರರಿಗೆ ನ್ಯಾಯ ಬೇಕು! ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿಗಾಗಿ ಪತ್ರ ಚಳವಳಿಗೆ ಮುಂದಾದ ಸಾರಿಗೆ ನೌಕರರು: ಹೈ ಕೋರ್ಟ್‌ ಸಿಜೆಗೆ ಲೆಟರ್ ಬರೆಯಲು ... ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ... ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ KSRTC ತುಮಕೂರು ಡಿಸಿಗೆ ಲಂಚ ಸಂಗ್ರಹ ಆರೋಪ: ಸಂಬಂಧಿಕರ ಫೋನ್‌ ಪೇ ಬಳಸಿ ಸಿಕ್ಕ ಬಿದ್ದ ನೌಕರ ಆತ್ಮಹತ್ಯೆಗೆ ಯತ್ನ- ಪಾರ... ಬಿಎಂಟಿಸಿ ಹೊಸ ವೇಗದೂತ ಬಸ್‌ಗಳ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ