NEWSದೇಶ-ವಿದೇಶರಾಜಕೀಯ

ರಾಜೀನಾಮೆ ನೀಡದೇ ಹೈಡ್ರಾಮಾ ಮಾಡಿದ್ದ ಮಮತಾ ಬ್ಯಾನರ್ಜಿ- ಸರ್ಕಾರ ವಜಾಗೊಳಿಸಿದ ರಾಜ್ಯಪಾಲ

2026ರ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಸೋಲನ್ನನುಭವಿಸಿದರೂ, ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದೇ ಮೊಂಡಾಟ ಮುಂದುವರಿಸಿದ್ದರು. ಇದು ಅವರಿಗೆ ಶೋಭೆ ತರುವಂತದ್ದಲ್ಲ. ಆದರೂ ಮೊಂಡುತನ ಪ್ರದರ್ಶನ ಮುಂದುವರಿಸಿದ್ದರು.

ವಿಜಯಪಥ ಸಮಗ್ರ ಸುದ್ದಿ

ಕೋಲ್ಕತ್ತಾ: ಚುನಾವಣೆಯಲ್ಲಿ ಸರ್ಕಾರ ರಚಿಸುವಷ್ಟು ಶಾಸಕ ಸ್ಥಾನಗಳನ್ನು ಗೆಲ್ಲಲು ಆಗದಿದ್ದರೂ ಕೂಡ ರಾಜೀನಾಮೆ ನೀಡದೇ ಭಾರೀ ಹೈಡ್ರಾಮಾ ಮಾಡಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವನ್ನೇ ಪಶ್ಚಿಮ ಬಂಗಾಳದ ರಾಜ್ಯಪಾಲ ಆರ್‌.ಎನ್‌. ರವಿ ವಜಾಗೊಳಿಸಿದ್ದಾರೆ.

2026ರ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಸೋಲನ್ನನುಭವಿಸಿದರೂ, ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದೇ ಮೊಂಡಾಟ ಮುಂದುವರಿಸಿದ್ದರು. ಇದು ಅವರಿಗೆ ಶೋಭೆ ತರುವಂತದ್ದಲ್ಲ. ಆದರೂ ಮೊಂಡುತನ ಪ್ರದರ್ಶನ ಮುಂದುವರಿಸಿದ್ದರು.

ಟಿಎಂಸಿಗೆ ಸೋಲಾಗಿಲ್ಲ, ಚುನಾವಣಾ ಆಯೋಗದಿಂದಾಗಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ (BJP) ಜಯಗಳಿಸಿದೆ. ಬೇಕಿದ್ದರೆ ರಾಜ್ಯಪಾಲರೇ ನನ್ನನ್ನು ವಜಾ ಮಾಡಲಿ ಎಂದು ಸವಾಲು ಎಸೆದಿದ್ದರು. ಹೀಗಾಗಿ ಬ್ಯಾನರ್ಜಿ ನೇತೃತ್ವದ ಸರ್ಕಾರವನ್ನು ವಜಾಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ಭಾರತದ ಸಂವಿಧಾನದ 172ನೇ ವಿಧಿಯ ಪ್ರಕಾರ, ವಿಧಾನಸಭೆಯು ತನ್ನ ಮೊದಲ ಸಭೆಯಿಂದ ಐದು ವರ್ಷಗಳ ಅವಧಿಯನ್ನು ಪೂರೈಸಿದ ನಂತರ ಸ್ವಯಂಚಾಲಿತವಾಗಿ ವಿಸರ್ಜನೆಯಾಗುತ್ತದೆ. ಅದರಂತೆ 2021ರಲ್ಲಿ ಅಸ್ತಿತ್ವಕ್ಕೆ ಬಂದಿದ್ದ ಸಭೆಯ ಅವಧಿಯು ಇಂದು ಪೂರ್ಣಗೊಂಡಿದ್ದು 17ನೇ ವಿಧಾನಸಭೆ ಅವಧಿ ಅಧಿಕೃತವಾಗಿ ಅಂತ್ಯಗೊಂಡಿದೆ.

ಅಂತ್ಯಗೊಂಡ ಬೆನ್ನಲ್ಲೇ ಆರ್‌.ಎನ್‌. ರವಿ ಅವರು ಸಂವಿಧಾನದ 164(1)ನೇ ವಿಧಿಯಡಿ ಮೇ 7 ರಿಂದ ಜಾರಿಗೆ ಬರುವಂತೆ ಮಮತಾ ಬ್ಯಾನರ್ಜಿ ನೇತೃತ್ವದ ಸಚಿವ ಸಂಪುಟವನ್ನು ವಜಾಗೊಳಿಸಿ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ.

ಈ ಅವಧಿ ಮುಕ್ತಾಯದೊಂದಿಗೆ ಮಮತಾ ಬ್ಯಾನರ್ಜಿ ಸೇರಿದಂತೆ ಎಲ್ಲ 294 ಶಾಸಕರ ಸದಸ್ಯತ್ವವು ಅಧಿಕೃತವಾಗಿ ರದ್ದಾಗಿದೆ. ಮಮತಾ ಬ್ಯಾನರ್ಜಿ ಅವರು ರಾಜೀನಾಮೆ ನೀಡಲು ನಿರಾಕರಿಸಿದ್ದರೂ ಸಹ ಸಂವಿಧಾನದ ನಿಯಮದಂತೆ ಅವರು ಈಗ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯವಿಲ್ಲ.

ಈ ಚುನಾವಣೆಯಲ್ಲಿ ಬಿಜೆಪಿ 207 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದಿದೆ. ಟಿಎಂಸಿ 80 ಸ್ಥಾನಗಳಿಗೆ ಕುಸಿದಿದೆ. ಸ್ವತಃ ಮಮತಾ ಬ್ಯಾನರ್ಜಿ ಅವರು ಭವಾನಿಪುರ ಕ್ಷೇತ್ರದಲ್ಲಿ ಸುಮಾರು 15 ಸಾವಿರ ಮತಗಳ ಅಂತರದಿಂದ ಸೋಲನುಭವಿಸಿದ್ದಾರೆ.

ರಾಜ್ಯಪಾಲರು ಈಗ ಚುನಾವಣೆಯಲ್ಲಿ ಬಹುಮತ ಸಾಧಿಸಿರುವ ಬಿಜೆಪಿ ಪಕ್ಷಕ್ಕೆ ಸರ್ಕಾರ ರಚಿಸಲು ಆಹ್ವಾನ ನೀಡಲಿದ್ದಾರೆ. ಮೇ 9ರಂದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವ ಸಾಧ್ಯತೆಯಿದೆ.

Deva
the authorDeva

Leave a Reply

error: Content is protected !!
Latest news
ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ.ಡಿ.ಸತೀಶನ್ ಇಂದು ಕೇರಳದ ನೂತನ ಸಿಎಂಆಗಿ ವಿ.ಡಿ. ಸತೀಶನ್‌ ಪ್ರಮಾಣ ವಚನ ಸ್ವೀಕಾರ KSRTC ಜಂಟಿ ಸಮಿತಿ ಒಳೊಪ್ಪಂದ ಬಯಲು; 2.5 ಕೋಟಿ ರೂ.ಗೆ ಸೇಲಾದರ ನೀಚರು, ನೌಕರರ ದಾರಿತಪ್ಪಿಸುತ್ತಿರುವುದರ ಹಿಂದಿನ ಮರ್ಮ... ವಿಜಯಪಥ ವರದಿ ಪರಿಣಾಮ: ಎಚ್ಚೆತ್ತ BMTC ಅಧಿಕಾರಿಗಳು- ಆದೇಶದ ದಿನಾಂಕಕ್ಕಿಂತ ಮೂರು ದಿನ ಮುಂಚಿತವಾಗಿಯೇ ನೌಕರರಿಗೆ 11 ತ... ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ತಂತ್ರ: ಬಸ್ ಸಂಚಾರ ನಿಲ್ಲಿಸಿ ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಶಾಕ್ ... KSRTC: ಸರ್ಕಾರದ ಸಾಧನ ಸಮಾವೇಶದಲ್ಲಿ ಕಪ್ಪು ಬಾವುಟ, ಕಪ್ಪು ಪಟ್ಟಿ ಧರಿಸಿ ಸಾರಿಗೆ ನೌಕರರ ಪ್ರತಿಭಟನೆ !? BMTC ನೌಕರರಿಗೆ ಮೇ 19ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ್ರಮ- ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲದರ ಪರಿಣಾಮ ಈ ವಿಳಂಬ!