NEWSಕೃಷಿನಮ್ಮಜಿಲ್ಲೆಮೈಸೂರು

ಕಾವೇರಿ ನೀರು ಬಿಡುವುದಿಲ್ಲ ಎಂದು ಹೇಳುತ್ತಲೆ ಕದ್ದು ಮುಚ್ಚಿ ನೀರು ಬಿಡುತ್ತಿರುವ ವಚನಭ್ರಷ್ಟ ಸರ್ಕಾರ: ರೈತರ ಆಕ್ರೋಶ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕಾವೇರಿ ನೀರು ಬಿಡುವುದಿಲ್ಲ ಎಂದು ಹೇಳುತ್ತಲೆ ಕದ್ದು ಮುಚ್ಚಿ ನೀರು ಬಿಡುತ್ತಿರುವ ವಚನಭ್ರಷ್ಟ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು ರೈತರು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು.

ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ಮೈಸೂರಿನ ಗ್ರಾಮಾಂತರ ಬಸ್ ನಿಲ್ದಾಣದ ಮುಂದೆ ಮಂಗಳವಾರ ದಿಢೀರನೆ ರಸ್ತೆ ತಡೆದು ಸರ್ಕಾರದ ವಿರುದ್ಧ ಧಿಕ್ಕಾರವನ್ನು ಕೂಗುತ್ತಾ ರೈತರು ಪ್ರತಿಭಟನೆ ನಡೆಸಿದರು.

ಕಾವೇರಿ ಭಾಗದ ಜಲಾಶಯಗಳಲ್ಲಿ ಕುಡಿಯ ನೀರಿಗೂ ಬರ ಬಂದಿದೆ. ಹೀಗಾಗಿ ಪ್ರಾಧಿಕಾರದ ಆದೇಶ ಪಾಲನೆ ಮಾಡಲು ಸಾಧ್ಯವಿಲ್ಲ, ನೀರು ಹರಿಸುವುದಿಲ್ಲ ಎಂದು ರಾಜ್ಯದ ರೈತರಿಗೆ, ಜನರಿಗೆ ಭರವಸೆ ನೀಡಿದ ರಾಜ್ಯ ಸರ್ಕಾರ ಮತ್ತೆ ತಮಿಳುನಾಡಿಗೆ ಇಂದಿನಿಂದ 15 ದಿನಗಳವರೆಗೆ 5,000 ಕ್ಯೂಸಿಕ್ ಕಾವೇರಿ ನೀರನ್ನು ಬಿಡುತ್ತಿರುವುದನ್ನು ಖಂಡಿಸುತ್ತಿದ್ದೇವೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

ಅಯ್ಯಯ್ಯೋ ಅನ್ಯಾಯ ಕಾವೇರಿ ನಮ್ಮದು ಉಳಿಯಲಿ ಉಳಿಯಲಿ ನೀರು ಉಳಿಯಲಿ ರೈತ ದ್ರೋಹಿ ಸರ್ಕಾರಕ್ಕೆ ಧಿಕ್ಕಾರ, ವಚನಭ್ರಷ್ಟ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗುತ್ತಾ ರಸ್ತೆಗೆ ಅಡ್ಡಲಾಗಿ ನಿಂತು ಪ್ರತಿಭಟನೆ ಆರಂಭಿಸಿದರು. ಇದರಿಂದ ಸಾವಿರಾರು ವಾಹನಗಳು ರಸ್ತೆಯಲ್ಲಿ ನಿಂತು ಸಂಚಾರ ಅಸ್ತವ್ಯಸ್ತಗೊಂಡ ಕಾರಣ ಬಿಗುವಿನ ವಾತಾವರಣ ಏರ್ಪಟ್ಟಿತು.

ರಸ್ತೆ ತಡೆ ನಡೆಸಿದ ಸಂದರ್ಭದಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ಮಾತನಾಡಿ, ಸರ್ಕಾರ ನುಡಿದಂತೆ ನಡೆಯುತ್ತಿಲ್ಲ. ಕದ್ದುಮುಚ್ಚಿ ನೀರು ಬಿಡುತ್ತಿದೆ. ಕಾವೇರಿ ಭಾಗದ ಜನರನ್ನು ಬಲಿಕೊಡುತ್ತಿದೆ. ಬೆಂಗಳೂರು ಮೈಸೂರು ನಗರದ ಜನತೆಗೆ ಕುಡಿಯುವ ನೀರಿಗೂ ಸಮಸ್ಯೆ ತಂದೊಡುತ್ತಿದೆ ಎಂದು ಕಿಡಿಕಾರಿದರು.

ಇನ್ನು ಇದುನೀರಾವರಿ ಸಚಿವರ ಬೇಜವಾಬ್ದಾರಿ ನಡವಳಿಕೆಯೇ ಈ ಸಮಸ್ಯೆಗೆ ಕಾರಣವಾಗಿದೆ. ಹೀಗಾಗಿ ಕೂಡಲೇ ಸಚಿವ ಸ್ಥಾನ ಬದಲಾಯಿಸಬೇಕು, ಕಾವೇರಿ ನೀರು ನಿರ್ವಹಣಾ ಮಂಡಳಿ ಪ್ರಾಧಿಕಾರದ ಆದೇಶ ಧಿಕ್ಕರಿಸಬೇಕು. ನೀರು ಹರಿಸುತ್ತಿರುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಕೂಡಲೇ ಮೈಸೂರು ಬೆಂಗಳೂರು ನಗರಗಳ ಅಚ್ಚುಕಟ್ಟು ಭಾಗದ ರೈತರು, ಜನಸಾಮಾನ್ಯರು ಜನಪ್ರತಿನಿಧಿಗಳಿಗೆ ಶಾಸಕರಿಗೆ ಸರಿಯಾದ ಪಾಠ ಕಲಿಸಬೇಕು, ಇಲ್ಲದಿದ್ದರೆ ಎಲ್ಲರೂ ಸೇರಿ ಕುಡಿಯುವ ನೀರಿನ ಮರಣ ಶಾಸನ ಬರೆಯುತ್ತಾರೆ. ತಕ್ಷಣದಿಂದಲೇ ಎಲ್ಲ ಸಂಘ ಸಂಸ್ಥೆಗಳು ಹೋರಾಟಕ್ಕಿಳಿದು ಸರ್ಕಾರಕ್ಕೆ ಬಿಸಿ ಮುಟಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆ ತಡೆ ತೆರವುಗೊಳಿಸುವಂತೆ ರೈತರನ್ನು ಮನವೊಲಿಸಲು ಪೊಲೀಸರು ಮುಂದಾದರು ಇದಕ್ಕೆ ರೈತರು ಜಗ್ಗಲಿಲ್ಲ ಈ ವೇಳೆ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು ರೈತರು ಪೊಲೀಸರ ವಿರುದ್ಧ ತಿರುಗಿ ಬಿದ್ದಾಗ ಚಳವಳಿ ನಿರತ ರೈತರನ್ನು ಬಂಧಿಸಿ ಮೈಸೂರಿನ ಸಿಎಆರ್ ಮೈದಾನಕ್ಕೆ ಕರೆದೊಯ್ದುರು, ನಂತರ ಬಿಡುಗಡೆಗೊಳಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಅಮ್ ಆದ್ಮಿ ಪಕ್ಷದ ರಂಗಯ್ಯ, ಕಬ್ಬು ಬೆಳೆಗಾರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ತಾಲೂಕು ಅಧ್ಯಕ್ಷರಾದ ಕುರುಬೂರು ಸಿದ್ದೇಶ್, ಹಾಡ್ಯ ರವಿ, ಕುರುಬೂರು ಪ್ರದೀಪ್, ಹೆಗ್ಗೂರು ರಂಗರಾಜ್, ಅಂಬಳೆ ಮಂಜುನಾಥ್, ಮಾರ್ಬಳ್ಳಿ ನೀಲಕಂಠಪ್ಪ, ಕಾಟೂರು ಮಾದೇವಸ್ವಾಮಿ, ಕೋಟೆ ಸುನಿಲ್, ಸಾತಗಳ್ಳಿ ಬಸವರಾಜ್, ಹಿರೇನಂದಿ ಮಹಾದೇವಪ್ಪ, ಕೆಂಡಗಣ್ಣಸ್ವಾಮಿ, ಚಾಮರಾಜನಗರ ಮಹೇಶ್, ಚುಂಚುರಾಯನಹುಂಡಿ ಗಿರೀಶ್, ದೇವನೂರು ನಾಗೇಂದ್ರ ಸ್ವಾಮಿ, ಪಿ ರಾಜು ಇನ್ನು ಮುಂತಾದವರಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು