NEWSನಮ್ಮರಾಜ್ಯರಾಜಕೀಯ

ಶೇ.17ರಷ್ಟು ಮಧ್ಯಂತರ ವೇತನ ಹೆಚ್ಚಳ: ಮುಷ್ಕರ ಕೈ ಬಿಟ್ಟ ಸರ್ಕಾರಿ ನೌಕರರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಧ್ಯಂತರ ಪರಿಹಾರ ಭತ್ಯೆಯಾಗಿ ಸರ್ಕಾರ ಘೋಷಣೆ ಮಾಡಿರುವ ಶೇ.17ರಷ್ಟು ತಾತ್ಕಾಲಿಕ ಪರಿಹಾರವನ್ನು ಸರ್ಕಾರಿ ನೌಕರರು ಒಪ್ಪಿಕೊಂಡಿದ್ದೇವೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಕ್ಷರಿ ತಿಳಿಸಿದ್ದಾರೆ.

ಈಗ ಆದೇಶ ಹೊರಡಿಸಿರುವುದರಿಂದ ನಿವೃತ್ತ ನೌಕರರು ಸೇರಿದಂತೆ 15 ಲಕ್ಷ ನೌಕರರ ಕುಟುಂಬಕ್ಕೆ ಅನುಕೂಲವಾಗಿರುವುದರಿಂದ ತಾತ್ಕಾಲಿಕ ಪರಿಹಾರವನ್ನು ಒಪ್ಪಿಕೊಂಡು ನಾವು ಮುಷ್ಕರವನ್ನು ವಾಪಸ್‌ ಪಡೆದುಕೊಂಡಿದ್ದೇವೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಕಳೆದ ರಾತ್ರಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಸಂಧಾನ ಸಭೆ ವಿಫಲವಾಗಿತ್ತು. ಹೀಗಾಗಿ ಇಂದು (ಮಾ.1) ಮುಷ್ಕರ ಆರಂಭಗೊಳ್ಳುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಶೇ.17 ವೇತನ ಹೆಚ್ಚಿಸುವ ಬಗ್ಗೆ ತಕ್ಷಣ ಆದೇಶ ನೀಡಿದ್ದರು.

ಏ.1ರಿಂದ ಜಾರಿಗೆ ಬರುವಂತೆ ಮಧ್ಯಂತರ ಪರಿಹಾರವಾಗಿ ಶೇ.17ರಷ್ಟು ವೇತನ ಪರಿಷ್ಕರಣೆ ಮಾಡಿ ಆದೇಶವನ್ನೂ ಹೊರಡಿಸಿದ್ದು, ಇದಕ್ಕೆ ಒಪ್ಪಿರುವುದಾಗಿ ಅಧ್ಯಕ್ಷ ಷಡಕ್ಷರಿ ತಿಳಿಸಿದರು.

ಮುಷ್ಕರದ ಹಿನ್ನೆಲೆಯಲ್ಲಿ ಎಸ್ಎಸ್ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಮತ್ತು ಮೈಸೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಪ್ರಥಮ ಪಿಯುಸಿ, ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಇನ್ನು ರಾಜ್ಯಾದ್ಯಂತ ಸರ್ಕಾರಿ ಕಚೇರಿಯ ಸೇವೆ ಬಹುತೇಕ ಸ್ಥಗಿತವಾಗಿತ್ತು. ಸಾರ್ವಜನಿಕರು ಇದರಿಂದ ತೊಂದರೆ ಅನುಭವಿಸುವಂತಾಗಿದೆ. ಆದರೆ ಈ ತಕ್ಷ ಎಲ್ಲ ಸರ್ಕಾರಿ ನೌಕರರು ಡ್ಯೂಟಿಗೆ ಹಾಜರಾಗುವಂತೆ ತಿಳಿಸಿದ್ದು, ಇನ್ನು ದೂರದ ಸ್ಥಳದಲ್ಲಿರುವ ನೌಕರರು ಇಂದು ಹಾಜರಾಗುವುದಕ್ಕೆ ಸಾಧ್ಯವಾಗುವುದಿಲ್ಲ ಅಂಥವರಿಗೆ ವಿನಾಯಿತಿ ನೀಡಬೇಕು ಎಂದು ಸಹ ಕೇಳಿಕೊಂಡರು ಷಡಕ್ಷರಿ.

ಎನ್‌ಪಿಎಸ್‌ ಸಂಬಂಧ ಸಮಿತಿ ರಚಿಸಿದ್ದು ಅದು ಮುಂದಿನ 2ತಿಂಗಳಲ್ಲಿ ವರದಿ ಕೊಡಬೇಕು ಆ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು. ಸದ್ಯ ಈಗ ಆದೇಶ ಮಾಡಿರುವ ಶೇ.17ರಷ್ಟು ವೇತನ ಹೆಚ್ಚಳವು ತಾತ್ಕಾಲಿಕವಾಗಿದ್ದು ನಮ್ಮ ಬೇಡಿಕೆಯಾದ ಶೇ.40ರಷ್ಟು ವೇತನ ಹೆಚ್ಚಳವನ್ನು 7ನೇ ವೇತನ ಆಯೋದಲ್ಲಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸುವುದು ಮುಂದುವರಿಯಲಿದೆ ಎಂದು ವಿವರಿಸಿದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ