NEWSನಮ್ಮಜಿಲ್ಲೆನಮ್ಮರಾಜ್ಯ

ಜಿಪಂ, ತಾಪಂ ಚುನಾವಣೆ ನಡೆಸಲು ಸರ್ಕಾರ ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಜಿಲ್ಲಾ, ತಾಲೂಕು ಪಂಚಾಯಿತಿ ಹಾಗೂ ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಡ್ವೋಕೇಟ್ ಜನರಲ್ ಜತೆ ಚರ್ಚೆ ಮಾಡಿ ಕಾನೂನು ಪ್ರಕಾರ ಏನು ಮಾಡಬೇಕೋ ಹಾಗೆ ಮಾಡುತ್ತೇವೆ, ಕ್ಷೇತ್ರ ಪುನರ್‌ವಿಂಗಡಣೆ ನಂತರ ಮೀಸಲಾತಿ ಮಾಡಲೇಬೇಕು ಎಂದರು.

ಇನ್ನು ಪುತ್ರ ಡಾ.ಯತೀಂದ್ರ ಅವರನ್ನು ಎಂಎಲ್‌ಸಿ ಮಾಡುವುದಾಗಿ ಪಕ್ಷದ ಹೈಕಮಾಂಡ್ ಈ ಹಿಂದೆ ಹೇಳಿದ್ದರು, ಆದರೆ ಈಗ ಏನು ಮಾಡುತ್ತಾರೆ ಎಂಬುದು ಗೊತ್ತಿಲ್ಲ, ಕಳೆದ ಬಾರಿ ಚುನಾವಣೆಯಲ್ಲಿ ವರುಣಾ ವಿಧಾನಸಭಾ ಕ್ಷೇತ್ರ ಬಿಟ್ಟುಕೊಡಲು ಸೂಚಿಸಿದ್ದರು. ಈಗ ಏನು ತೀರ್ಮಾನ ಕೈಗೊಳ್ಳುತ್ತಾರೋ ತಿಳಿದಿಲ್ಲ ಎಂದರು.

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಆಡಿಯೋ ಇರುವುದರಿಂದ ವಿಚಾರಣೆ ಮಾಡಬೇಕು ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕಿಯಿಸಿದ ಅವರು, ಅಣ್ಣನ ಮಗ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ, ಅತ್ಯಾಚಾರದ ಸಂಗತಿ ದುರ್ಬಲಗೊಳಿಸಲು ಡಿ.ಕೆ. ಶಿವಕುಮಾರ್ ಹಾಗೂ ಮತ್ತೊಬ್ಬರ ಮೇಲೆ ಹೇಳುತ್ತಿದ್ದಾರೆ, ಈ ನೆಲದ ಕಾನೂನಿಗೆ ಗೌರವ ಕೊಡಬೇಕು ಎಂದರು.

ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದತಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಈವರೆಗೆ ಪ್ರತಿಕ್ರಿಯೆ ಬಂದಿಲ್ಲ, ಈ ಹಿಂದೆ ಬರೆದಿರುವ ಪತ್ರಗಳಿಗೂ ಉತ್ತರ ಕೊಟ್ಟಿಲ್ಲ ಎಂದು ಹೇಳಿದರು.

ಉತ್ತರ ಕೊಡುತ್ತಾರೆ ಎಂಬ ನಂಬಿಕೆ: ಚುನಾಯಿತ ಸರ್ಕಾರದ ಮುಖ್ಯಮಂತ್ರಿಯೊಬ್ಬರು ಪ್ರಧಾನಿ ಅವರಿಗೆ ಪತ್ರ ಬರೆದಾಗ ಸ್ವಾಭಾವಿಕವಾಗಿ ಉತ್ತರ ಕೊಡುತ್ತಾರೆ ಎಂಬ ನಂಬಿಕೆ ಇದೆ. ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಲು ಬರೆದ ಮೊದಲ ಪತ್ರಕ್ಕೆ ಉತ್ತರ ಕೊಟ್ಟಿಲ್ಲ, ಎರಡನೇ ಪತ್ರಕ್ಕೆ ಉತ್ತರ ಕೊಡುತ್ತಾರೇನೋ ನೋಡೋಣ ಎಂದರು.

ಪ್ರಜ್ವಲ್ ರೇವಣ್ಣ ಶರಣಾಗಬೇಕು, ಇಲ್ಲದಿದ್ದರೆ ಒಬ್ಬಂಟಿಯಾಗಬೇಕಾಗುತ್ತದೆ ಎಂಬ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಎಚ್ಚರಿಕೆ ಪತ್ರಕ್ಕೆ ಪ್ರತಿಕಿಯಿಸಿ, ಇವರಿಗೆ ಗೊತ್ತಿಲ್ಲದೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೊರಟು ಹೋಗಿದ್ದಾರಾ ಎಂದು ಪ್ರಶ್ನಿಸಿದರು.

ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಮೊದಲಿನಿಂದಲೂ ಪ್ರಜ್ವಲ್ ರೇವಣ್ಣ ನಮ್ಮ ಸಂಪರ್ಕದಲ್ಲಿ ಇಲ್ಲ ಎನ್ನುತ್ತಾರೆ, ಪ್ರಜ್ವಲ್ ನನ್ನ ಮಗ ಎಂದು ಮತ ಕೇಳಲು ಮಾಡಿದ ಚುನಾವಣಾ ಪ್ರಚಾರ ಸಂಪರ್ಕವೋ, ಅಲ್ಲವೋ ಎಂದರು.

ಎಸ್‌ಐಟಿ ತನಿಖೆ ಬಗ್ಗೆ ವಿಶ್ವಾಸ: ಎಸ್‌ಐಟಿ ತನಿಖೆ ಬಗ್ಗೆ ಸಂಪೂರ್ಣ ವಿಶ್ವಾಸವಿದೆ, ಕುಮಾರಸ್ವಾಮಿ ಕಾಲದಲ್ಲಿ ಎಷ್ಟು ಪ್ರಕರಣಗಳನ್ನು ಎಸ್‌ಐಟಿಗೆ ವಹಿಸಿದ್ದಾರೆ ಎನ್ನುವ ಮಾಹಿತಿ ಇಲ್ಲ, ಎಸ್‌ಐಟಿ ರಚನೆ ಮಾಡುವುದು ಪ್ರಕರಣದ ಬಗ್ಗೆ ಗಮನ ಕೇಂದ್ರೀಕರಿಸಲು ಎಂದರು.

ಕೆಲವು ಕಡೆ ಕೈಗಾರಿಕೆಗಳಿಂದ ಹರಿಸುವ ತ್ಯಾಜ್ಯ ನೀರಿನಿಂದ ಕಾವೇರಿ ನದಿ ನೀರು ಮಲಿನವಾಗಿರುವ ಸಾಧ್ಯತೆ ಇದೆ, ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ