NEWSನಮ್ಮಜಿಲ್ಲೆನಮ್ಮರಾಜ್ಯ

ಕುತಂತ್ರಕ್ಕೆ ಮಣಿದ ಸರ್ಕಾರ: ನಿಷ್ಠಾವಂತ BMTC ಎಂಡಿ ಸತ್ಯವತಿ ವರ್ಗಾವಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ಸರ್ಕಾರ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಇದೇ ವೇಳೆ ಹತ್ವದ ಬೆಳವಣಿಗೆಯೊಂದರಲ್ಲಿ ನೌಕರರ ಸ್ನೇಹಿ, ನಿಷ್ಠಾವಂತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ಸರ್ಕಾರ ಐಎಎಸ್ ಅಧಿಕಾರಿಗಳನ್ನು ಸೋಮವಾರ ವರ್ಗಾವಣೆ ಮಾಡಿದ್ದು, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿದ್ದು ಅವರ ಜಾಗಕ್ಕೆ ರಾಮಚಂದ್ರನ್ ಆರ್. (ಕೆಎನ್ : 2012) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಿ ಆದೇಶಿಸಿದೆ.

ಇನ್ನು ಜಿ. ಸತ್ಯವತಿ ಅವರನ್ನು ವರ್ಗಾವಣೆ ಮಾಡಲಾಗಿದ್ದರೂ ಅವರಿಗೆ ಹುದ್ದೆಯನ್ನು ತೋರಿಸಿಲ್ಲ. ಸದ್ಯ ರಾಮಚಂದ್ರನ್ ಆರ್. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಆಯುಕ್ತರ (ಚುನಾವಣೆ) ಹುದ್ದೆಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದು, ಈ ಹುದ್ದೆಯ ಜತೆಗೆ ಹೆಚ್ಚುವರಿಯಾಗಿ ಬಿಎಂಟಿಸಿ ಎಂಡಿಯಾಗಿ ನೇಮಕ ಮಾಡಲಾಗಿದೆ.

ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಜಿ. ಸತ್ಯವತಿ ವಿರುದ್ಧ ಸಾರಿಗೆ ಸಚಿವರಿಗೆ ಹಲವು ದೂರುಗಳನ್ನು ಕೆಎಸ್ಆರ್‌ಟಿಸಿ ಸ್ಟಾಫ್‌ ಎಂಡ್ ವರ್ಕರ್ಸ್ ಫೆಡರೇಷನ್ ಪಾಧಿಕಾರಿಗಳು ಅದರಲ್ಲೂ  AITUC ಅಧ್ಯಕ್ಷ ಅನಂತ ಸುಬ್ಬರಾವ್‌ ಅವರು ಒಂದು ರೀತಿ ವೈಯಕ್ತಿ ದ್ವೇಷ ಎಂಬಂತೆ ನಿಗಮದಲ್ಲಿ ನೌಕರರ ಪರವಾದ ಕೆಲಸ ಮಾಡುತ್ತಿದ್ದ ಎಂಡಿ ಅವರ ವಿರುದ್ದ ಕಿಡಿಕಾರುತ್ತಿದ್ದದ್ದೂ ಅಲ್ಲದೆ ಸಚಿವರ ಬಳಿ ಅವರನ್ನು ವರ್ಗಾವಣೆ ಮಾಡುವಂತೆ ಮನವಿ ಮಾಡಿದ್ದರು.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸರ್ಕಾರ ಬಿಎಂಟಿಸಿಯ ನಿಷ್ಠಾವಂತ ಅಧಿಕಾರಿಯನ್ನು ವರ್ಗಾವಣೆ ಮಾಡಿರುವುದಕ್ಕೆ ಸಮಸ್ತ ಸಾರಿಗೆ ನೌಕರರು  ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರತಿ ತಿಂಗಳು 7ನೇ ತಾರೀಖಿಗೆ ನೌಕರರ ವೇತನ ಬರುತ್ತಿರುವುದಕ್ಕೆ ಎಂಡಿ ಸತ್ಯವತಿ ಅವರೇ ಕಾರಣ ಇನ್ನು ಈ ತಿಂಗಳು ಅಂದರೆ ಜನವರಿ 7 ಭಾನುವಾರ ಬಂದಿದ್ದರಿಂದ 6ನೇ ತಾರೀಖಿಗೆ ನೌಕರರ ಬ್ಯಾಂಕ್‌ ಖಾತೆಗೆ ವೇತನವನ್ನು ಹಾಕಿಸುವ ಮೂಲಕ ನೌಕರರಿಗೆ ಇನ್ನಷ್ಟು ಹತ್ತಿರವಾಗಿದ್ದರು.

ಇದಿಷ್ಟೇ ಅಲ್ಲದೆ 6500ಕ್ಕೂ ಹೆಚ್ಚು ನೌಕರರ ವಿರುದ್ಧ ಇದ್ದ ಪ್ರಕರಣಗಳನ್ನು ರದ್ದು ಮಾಡುವ ಮೂಲಕ ನೌಕರರಿಗೆ ಅನುಕೂಲ ಕಲ್ಪಿಸಿಕೊಟ್ಟಿದ್ದಾರೆ. ಈ ಎಲ್ಲ ಬೆಳವಣಿಗೆಯನ್ನು ಸಹಿಸಲಾಗದ ಕೆಲವರು ನಿಷ್ಠಾವಂತ ಅಧಿಕಾರಿಯ ವಿರುದ್ಧ ಪಿತೂರಿ ನಡೆಸಿ ವರ್ಗಾವಣೆ ಮಾಡಿಸುವಲ್ಲಿ ಸಫಲರಾಗಿದ್ದಾರೆ ಇದು ಅಸತ್ಯಕ್ಕೆ ಸರ್ಕಾರ ಮಣಿದಿದೆ ಎಂಬುದಕ್ಕೆ ತಾಜಾ  ನಿದರ್ಶನವಾಗಿರುವುದು ಮಾತ್ರ ದುರಂತವೇ ಸರಿ..

ಬಿಎಂಟಿಸಿ ನಿರ್ದೇಶಕಿಯಾಗಿ ನೇಮಕ; ಡಿಸೆಂಬರ್ 28ರಂದು ಕರ್ನಾಟಕ ಸರ್ಕಾರ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಹುದ್ದೆಯ ನಿರೀಕ್ಷೆಯಲ್ಲಿದ್ದ 8 ಐಎಎಸ್ ಅಧಿಕಾರಿಗಳನ್ನು ವಿವಿಧ ಹುದ್ದೆಗಳಿಗೆ ನೇಮಕ ಮಾಡಿ ಆದೇಶ ಹೊರಡಿಸಿತ್ತು.

ಶಿಲ್ಪ ಎಂ. (ಕೆಎನ್‌:2017) ಬೀದರ್ ಜಿಲ್ಲಾ ಪಂಚಾಯಿತಿಯ ಸಿಇಒ ಅವರನ್ನು ತಕ್ಷಣದಿಂದ ಮತ್ತು ಮುಂದಿನ ಆದೇಶದ ವರೆಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನಿರ್ದೇಶಕಿ (ಐಟಿ)ಯಾಗಿ ನೇಮಕ ಮಾಡಲಾಗಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ