NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರಿಗೂ 7 ವೇತನ ಆಯೋಗ ಮಾದರಿ ಪಗಾರ ಕೊಡಲು ಸರ್ಕಾರದ ಚಿಂತನೆ : ಸಾರಿಗೆ ಸಚಿವ ಶ್ರೀರಾಮುಲು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರ ಕನಸ್ಸು ನನಸಾಗುವತ್ತ ನಮ್ಮ ಸರ್ಕಾರ ಹೆಜ್ಜೆ ಇಡುತ್ತಿದೆ ಎಂದು ಸಾರಿಗೆ ಬಿ.ಶ್ರೀರಾಮುಲು ಹೇಳಿದ್ದಾರೆ.

ನಮಗೂ ಸಾರಿಗೆ ನೌಕರರ ಸಮಸ್ಯೆ ಅರ್ಥವಾಗುತ್ತಿದೆ. ಹೀಗಾಗಿ ನೌಕರರನ್ನು ಸರ್ಕಾರಿ ನೌಕರರು ಎಂದು ಘೋಷಿಸುವುದು ಕಷ್ಟಸಾಧ್ಯವಾಗಿದ್ದರೂ ನಮ್ಮ ಸರ್ಕಾರ ವೇತನ ಆಯೋಗದ ಮಾದರಿಯಲ್ಲಿ ವೇತನ ನೀಡುವುದುಕ್ಕೆ ಹಿಂದೆ ಸರಿಯುತ್ತಿಲ್ಲ. ಆದರೆ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನಾವು ಇಲ್ಲಿಯವರೆಗೂ ಮುಂದಿಡಿದ್ದೆವು ಎಂದು ಸಮಾರಂಭ ಒಂದರಲ್ಲಿ ನೌಕರರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಆದರೆ ಇನ್ನು ಮುಂದೆ ಈರೀತಿಯ ಸಮಸ್ಯ ಆಗದಂತೆ ಶಾಶ್ವತ ಮುಕ್ತಿ ನೀಡಲು ಸರ್ಕಾರ ಮುಂದಡಿ ಇಟ್ಟಿದ್ದು ಅತೀಶೀಘ್ರದಲ್ಲೇ ನೌಕರರ ಬೇಡಿಕೆಯಂತೆ ವೇತನ ನೀಡುವ ಸಂಬಂಧ ಸಿಹಿ ಸುದ್ದಿ ನೀಡಲಾಗುವುದು ಎಂದು ಸ್ವತಃ ಸಾರಿಗೆ ಸಚಿವ ಶ್ರೀರಾಮುಲು ಅವರೆ ನೌಕರರಿಗೆ ತಿಳಿಸಿದ್ದಾರೆ.

ಇನ್ನು ಮುಂದಿನ 2023ರ ವಿಧಾನಸಭಾ ಚುನಾವಣೆಯಲ್ಲೂ ನಮ್ಮದೆ ಸರ್ಕಾರ ಅಧಿಕಾರಕ್ಕೆ ಬರಲಿದ್ದು ಆ ವೇಳೆ ನಾನೆ ಸಾರಿಗೆ ಸಚಿವನಾಗಲಿದ್ದು ಬಜೆಟ್‌ನಲ್ಲೂ ಹಣ ಮೀಸಲಿಡಲಾಗುವುದು ಎಂದು ಹೇಳಿದ್ದಾರೆ.

ಇನ್ನು ವೇತನ ಆಯೋಗದ ಮಾದರಿಯಲ್ಲೇ ನಮ್ಮ ಸರ್ಕಾರ ಈಗ ರಾಜ್ಯ ಸರ್ಕಾರಿ ನೌಕರರಿಗೆ ರಚಿಸಿರುವ 7ನೇ ವೇತನ ಆಯೋಗದಂತೆ ಸಾರಿಗೆ ನೌಕರರಿಗೂ ಇದೆ ಮಾದರಿಯಲ್ಲಿ ವೇತನ ನೀಡಲಾಗುವುದು ಎಂದು ನೌಕರರಿಗೆ ಪರೋಕ್ಷವಾಗಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ