ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಡಿಟೆಕ್ಟಿವ್– ಸೆಕ್ಯೂರಿಟಿ ಏಜೆನ್ಸಿಗಳಿಂದ ಯಾವುದೇ ಟೆಂಡರ್ ಕರೆಯದೇ ಶಿಕ್ಷಕರು, ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಮುಂದಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ಬೆಂಗಳೂರು ಘಟಕದ ಅಧ್ಯಕ್ಷ ಡಾ. ಸತೀಶ್ ಕುಮಾರ್ ಹೇಳಿದ್ದಾರೆ.
ನಗರದ ಆಮ್ ಆದ್ಮಿ ಪಾರ್ಟಿ ರಾಜ್ಯ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಬಿಎಂಪಿ ಶಾಲೆಗಳಲ್ಲಿ ಕಳಪೆ ಫಲಿತಾಂಶ ದಾಖಲಾಗುತ್ತಿದ್ದರೂ ತಲೆಕೆಡಿಸಿಕೊಳ್ಳದ ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಬಿಬಿಎಂಪಿ ಶಾಲೆಗಳನ್ನು ಸಂಪೂರ್ಣವಾಗಿ ಮುಚ್ಚಿಹಾಕಲು ಯತ್ನಿಸುತ್ತಿದೆ ಎಂದರು.
ರಾಜ್ಯ ಸರ್ಕಾರಕ್ಕೆ ಶಿಕ್ಷಣದ ಗುಣಮಟ್ಟಕ್ಕಿಂತ ಏಜೆನ್ಸಿಗಳ ಲಾಬಿಯೇ ಮುಖ್ಯವಾಗಿದೆ. ಹೊಸ ಟೆಂಡರ್ ಕರೆಯದೆ ನೇಮಕಾತಿ ಪ್ರಕ್ರಿಯೆಗೆ ಆದೇಶಿಸಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಶಿಕ್ಷಣ ಇಲಾಖೆ ಮೂಲಕವೇ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುವುದು ಎಂದು ನೀಡಿದ್ದ ಭರವಸೆಯನ್ನು ರಾಜ್ಯ ಸರ್ಕಾರ ಹುಸಿಗೊಳಿಸಿದೆ. ನುಡಿದಂತೆ ನಡೆವ ಸರ್ಕಾರ ಎಂದು ಬೀಗುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೊರಗುತ್ತಿಗೆ ಲಾಬಿಗೆ ಒಳಗಾಗಿರುವುದು ವಿಪರ್ಯಾಸ ಎಂದು ಡಾ. ಸತೀಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಹತ್ತಾರು ವರ್ಷಗಳಿಂದ ಡಿಟೆಕ್ಟಿವ್-ಸೆಕ್ಯೂರಿಟಿ ಏಜೆನ್ಸಿಗಳಿಂದಲೇ ಹೊರಗುತ್ತಿಗೆ ಮೇಲೆ ಶಿಕ್ಷಕರನ್ನು ನೇಮಿಸಲಾಗುತ್ತಿದೆ. ಇದರರ್ಥ ಶಿಕ್ಷಕರ ನೇಮಕಾತಿ ಹಿಂದೆ ದೊಡ್ಡ ಲಾಬಿಯಿದೆ. ಇದರ ಹಿಂದೆ ಪ್ರಭಾವಿ ರಾಜಕಾರಣಿಯೊಬ್ಬರಿದ್ದಾರೆ. ಶೀಘ್ರದಲ್ಲಿಯೇ ಅವರು ಯಾರೆಂದು ದಾಖಲೆಗಳ ಸಮೇತ ಬಹಿರಂಗಗೊಳಿಸಲಿದ್ದೇವೆ ಎಂದರು.
ಈಗ ಕೆಲಸ ಮಾಡುತ್ತಿರುವವರಲ್ಲಿ 40 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನ ಹಲವಾರು ಮಂದಿ ಇದ್ದಾರೆ. ಈಗ ಅವರನ್ನು ಏಕಾಏಕಿ ಕೆಲಸದಿಂದ ತೆಗೆದು ಹಾಕಿದರೆ ಅವರು ಎಲ್ಲಿಗೆ ಹೋಗಬೇಕು? ಎಂದು ಡಾ. ಸತೀಶ್ ಕುಮಾರ್ ಪ್ರಶ್ನಿಸಿದರು.
ದಕ್ಷಿಣ ಮತ್ತು ಆರ್.ಆರ್. ನಗರ ವಲಯದ ಶಿಕ್ಷಕರ ನೇಮಕಾತಿ ಟೆಂಡರ್ ಆಗಿದೆ. ಇದರಲ್ಲಿ 600 ಮಂದಿ ಶಿಕ್ಷಕರು ಇದ್ದಾರೆ. ಶಿಕ್ಷಕರನ್ನು ಮಾರುಕಟ್ಟೆ ಸರಕಿನಂತೆ ಬಳಸಿಕೊಳ್ಳುತ್ತಿರುವ ವಿಚಾರ ಶಿಕ್ಷಕರ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಇದರ ವಿರುದ್ಧ ಶಿಕ್ಷಕರು, ಉಪನ್ಯಾಸಕರು ಹೋರಾಟ ಮಾಡಲು ಮುಂದಾಗಿದ್ದಾರೆ. ಈಗ ಪಾಠ ಮಾಡುತ್ತಿರುವ ಶಿಕ್ಷಕರು, ಉಪಾನ್ಯಾಸಕರಲ್ಲಿ ಹಲವರು ಡಾಕ್ಟರೇಟ್ ಸೇರಿದಂತೆ ಉನ್ನತ ವಿದ್ಯಾಭ್ಯಾಸ ಮಾಡಿದವರು. ಅಂಥವರನ್ನು ಬಿಟ್ಟು ಪತ್ತೆದಾರಿ ಸಂಸ್ಥೆಯ ಮೂಲಕ ಶಿಕ್ಷಕರನ್ನು ನೇಮಿಸಿಕೊಳ್ಳುವ ಕ್ರಮವೇ ಅಸಂಬದ್ಧ ಎಂದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು 2024-25ನೇ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಇಲಾಖೆಯಿಂದ ಬಿಬಿಎಂಪಿ ಶಾಲೆ ಕಾಲೇಜುಗಳಿಗೆ ಶಿಕ್ಷಕರನ್ನು ಒದಗಿಸಲಾಗುವುದು. ಮೂಲ ಸೌಕರ್ಯಗಳನ್ನು ಬಿಬಿಎಂಪಿ ಒದಗಿಸಲಿದೆ ಎಂದು ಹೇಳಿದ್ದರು. ಇದನ್ನು ವಿರೋಧಿಸಿ ಸುಮಾರು 700ಕ್ಕೂ ಹೆಚ್ಚು ಹೊರಗುತ್ತಿಗೆ ಶಿಕ್ಷಕರು ಶಾಲೆ ಬಹಿಷ್ಕರಿಸಿ ಪ್ರತಿಭಟಿಸಿದ್ದರು.
ಆದರೆ ಇದಾವುದಕ್ಕೂ ಮಣಿಯದೆ ಅನರ್ಹ ಶಿಕ್ಷಕರಿದ್ದಾರೆ ಎಂದಿದ್ದರು. ಆದರೆ ಈಗ ಅದೇ ಶಿಕ್ಷಕರು ಅರ್ಹರಾಗಿದ್ದು ಹೇಗೆ? ಯಾವ ಮಾನದಂಡದ ಅಡಿಯಲ್ಲಿ ಶಿಕ್ಷಕರ ಸೇವಾ ಪೂರೈಕೆ ಮಾಡಲು ಸೆಕ್ಯೂರಿಟಿ ಏಜೆನ್ಸಿ ನೀಡಲಾಗುತ್ತದೆ ಎಂಬುದನ್ನು ರಾಜ್ಯ ಸರ್ಕಾರ ಜನತೆಗೆ ತಿಳಿಸಬೇಕು ಎಂದು ಎಂದು ಡಾ. ಸತೀಶ್ ಕುಮಾರ್ ಆಗ್ರಹಿಸಿದರು.
ಬಿಬಿಎಂಪಿ ಅಡಿಯಲ್ಲಿ 159 ಶಿಕ್ಷಣ ಸಂಸ್ಥೆಗಳಿವೆ. ಎಸ್ಎಸ್‌ಎಲ್‌ಸಿಯಲ್ಲಿ ಬಿಬಿಎಂಪಿ ಶಾಲೆಯ ಸಾವಿರಾರು ವಿದ್ಯಾರ್ಥಿಗಳು ಪ್ರಥಮ ಭಾಷೆ ಕನ್ನಡದಲ್ಲಿಯೇ ಅನುತ್ತೀರ್ಣರಾಗಿದ್ದಾರೆ. ಕನ್ನಡ ಓದಲು ಮತ್ತು ಬರೆಯಲು ಬರುತ್ತಿಲ್ಲ. ಇದು ಬಿಬಿಎಂಪಿ ಶಾಲೆಗಳ ಶಿಕ್ಷಣದ ಗುಣಮಟ್ಟವನ್ನು ತೋರಿಸುತ್ತದೆ. ಶಿಕ್ಷಕರ ನೇಮಕಾತಿಯನ್ನು ಸೆಕ್ಯೂರಿಟಿ ಏಜೆನ್ಸಿಗೆ ಗುತ್ತಿಗೆ ನೀಡಿದರೆ ಶಿಕ್ಷಣ ಕ್ಷೇತ್ರ ಎಂತಹ ಸ್ಥಿತಿಗೆ ತಲುಪುತ್ತದೆ? ಅವರು ನೇಮಕ ಮಾಡುವ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣವನ್ನು ನಿರೀಕ್ಷಿಸುವುದು ಹೇಗೆ? ಎಂದು ಕೇಳಿದರು.
ಬೆಂಗಳೂರು ಯುವ ಘಟಕದ ಅಧ್ಯಕ್ಷ ಉಮೇಶ್ ಬಾಬು ಮಾತನಾಡಿ, ನಗರದ ಶ್ರೀರಾಂಪುರ ಬಾಲಕಿಯರ ಪ್ರೌಢಶಾಲೆಯ ಪಿ. ಚಂದನಾ 625ಕ್ಕೆ 619 ಅಂಕಗಳನ್ನು (ಶೇ 99) ಪಡೆದು ಪಾಲಿಕೆ ಶಾಲೆಗಳಲ್ಲಿ ಅತಿಹೆಚ್ಚು ಅಂಕ ಗಳಿಸಿದ ದಾಖಲೆ ಬರೆದಿದ್ದಾರೆ. ಈ ಶಾಲೆಯನ್ನು ಭಾರತೀಯ ವಿದ್ಯಾಭವನ ಎಂಬ ಎನ್‌ಜಿಒ ನಡೆಸುತ್ತಿದೆ ಎಂಬುದು ಗಮನಾರ್ಹ.
ಕಳೆದ 10 ವರ್ಷಗಳಿಂದ ಶೇ 100 ಫಲಿತಾಂಶ ಪಡೆಯುವಲ್ಲಿ ಯಶಸ್ವಿಯಾಗುತ್ತಿದೆ. ಇಂತಹ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುವ ಎನ್‌ಜಿಒ/ಏಜೆನ್ಸಿಗಳ ಜೊತೆ ಉತ್ತಮ ಫಲಿತಾಂಶ ಪಡೆಯುವ ಕುರಿತು ಚರ್ಚಿಸಬೇಕು. ಅವರಿಗೆ ಶಾಲೆಗಳನ್ನು ವಹಿಸುವ ಮೂಲಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ನೆರವಾಗಬೇಕು. ಪ್ರತಿ ಶಾಲೆಗಳಲ್ಲೂ ಶೇ 100 ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಸಮಗ್ರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
Related
You Might Also Like
ಹೆಂಡತಿ, ಮಾವನ ಕಾಟ: ರೈಲಿಗೆ ತಲೆಕೊಟ್ಟು ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ
ಬೆಂಗಳೂರು: ಪತ್ನಿ ಹಾಗೂ ಪತ್ನಿ ತಂದೆಯ ಅಂದರೆ ಮಾನನ ಕಿರುಕುಳದಿಂದ ಮಾನಸಿಕವಾಗಿ ಭಾರಿ ನೋವು ಅನುಭವಿಸಿದ ಹೆಡ್‌ಕಾನ್‌ಸ್ಟೇಬಲ್ ಒಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜ್ಯದ...
9 ಸಾವಿರ ರೂ. ಲಂಚ ಪ್ರಕರಣ: ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.ದಂಡ
ಮಂಗಳೂರು: ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದ ಆರೋಪಿ ಪಿಡಿಒಗೆ ಮಂಗಳೂರಿನ 3ನೆ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು 3 ವರ್ಷದ...
KSRTC ತುಮಕೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಚಾಲಕನಿಗೆ ಧೈರ್ಯ ತುಂಬಿದ ಡಿಸಿ, ಅಧಿಕಾರಿಗಳು
ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತುಮಕೂರು ವಿಭಾಗದ ಕುಣಿಗಲ್ ಘಟಕದ ಚಾಲಕ ಮನನೊಂದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದು, ವಿಷಯ ತಿಳಿದ ಕೂಡಲೇ ಅಧಿಕಾರಿಗಳು...
KSRTC: ಡಿ.31ರ ಮುಷ್ಕರ ಬೆಂಬಲಿಸುವಂತೆ ಕೂಟಕ್ಕೆ ಜಂಟಿ ಕ್ರಿಯಾ ಸಮಿತಿ ಮನವಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಬೇಡಿಕೆಗಳ ಈಡೇರಿಕಗಾಗಿ ಜಂಟಿ ಕ್ರಿಯಾ ಸಮಿತಿ ಇದೇ ಡಿ.31ರಂದು ಮುಷ್ಕರಕ್ಕೆ ಕರೆ ನೀಡಿದೆ. ಅದರ ಮುಂದುವರಿದ ಭಾಗವಾಗಿ...
ಸರ್ಕಾರದ ನಡೆಯೇ BMTC ಆರ್ಥಿಕವಾಗಿ ಕುಸಿಯಲು ಕಾರಣ: ವರದಿ ಕೊಟ್ಟ CAG
ಬೆಂಗಳೂರು: ರಾಜ್ಯ ಸರ್ಕಾರದ 5 ಮಹತ್ವದ ಗ್ಯಾರಂಟಿ ಗಳಲ್ಲಿ ಶಕ್ತಿ ಯೋಜನೆ ಕೂಡ ಒಂದು. ಕರ್ನಾಟಕದಲ್ಲಿ ಮಹಿಳೆಯರು ಸರ್ಕಾರಿ ಬಸ್ಗಳಲ್ಲಿ ಎಲ್ಲಿ ಬೇಕಾದರೂ ಉಚಿತವಾಗಿ ಪ್ರಯಾಣಿಸಬಹುದಾದ ಯೋಜನೆ...
KSRTC ಕುಣಿಗಲ್: ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸದಿರುವುದಕ್ಕೆ ಮನನೊಂದ ಚಾಲಕ ಆತ್ಮಹತ್ಯೆಗೆ ಯತ್ನ
ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಾಲಕರೊಬ್ಬರ ಮೇಲೆ ಲಾ ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದರೂ ಸಹ ಅವರನ್ನು ಬಂಧಿಸದಿರುವುದಕ್ಕೆ ಅಸಮಾಧಾನಗೊಂಡ ಹಲ್ಲೆಗೊಳಗಾದ ಚಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ....
KSRTC: ಈ ಅಧಿವೇಶನದಲ್ಲಾದರೂ ಸಿಎಂ ಸರಿ ಸಮಾನ ವೇತನ ಬಗ್ಗೆ ದಿಟ್ಟ ಹೆಜ್ಜೆ ಇಡಲಿ
ಸಾರಿಗೆ ನೌಕರರತ್ತ ಒಮ್ಮೆ ನೋಡಿ l ವೇತನ ಹೆಚ್ಚಳ ಸಮಸ್ಯೆಗೆ ಇತಿಶ್ರೀ ನಿಮ್ಮಿಂದ ಸಾಧ್ಯ ಬೆಂಗಳೂರು: ತಿಂಗಳು ಪೂರ್ತಿ ದುಡಿದರೂ ಸರಿಯಾದ ಸಮಯಕ್ಕೆ ವೇತನ ಸಿಗದೆ, ಸಿಕ್ಕ...
BMTC: ಆಧಾರ್ ಕಾರ್ಡ್ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಪ್ರಯಾಣಿಸುವ ಮಹಿಳೆಯರ ಆಧಾರ್ ಕಾರ್ಡ್ ಯಾವುದೇ ಭಾಷೆಯಲ್ಲಿರಲಿ ಅದು ಕರ್ನಾಟಕ ರಾಜ್ಯದ್ದಾಗಿದ್ದರೆ ಶಕ್ತಿ ಯೋಜನೆಯಡಿ ಉಚಿತ ಟಿಕೆಟ್ ನೀಡಬೇಕು...
ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್
ಹಾವೇರಿ: ಚೆಲಿಸುತ್ತಿದ್ದ ಬಸ್ ಹತ್ತಲು ಹೋಗಿ ವೃದ್ಧೆಯೊಬ್ಬರು ಕೆಳಗೆ ಬಿದ್ದ ಪರಿಣಾಮ ಬಸ್ಸಿನ ಹಿಂಬದಿ ಚಕ್ರ ಹರಿದು ಎರಡು ಕಾಲುಗಳು ತುಂಡಾಗಿರುವ ಘಟನೆ ನಗರದ ಕೇಂದ್ರ ನಿಲ್ದಾಣದಲ್ಲಿ...
KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್ ಬಂಧನ
ಮಡಿಕೇರಿ: ನಿತ್ಯ ತಾನು ಬಸ್ ಚಲಾಯಿಸುತ್ತಿದ್ದ ಮಾರ್ಗವನ್ನು ಬದಲಾಯಿಸಿ ಬೇರೆ ಮಾರ್ಗಕ್ಕೆ ಕರ್ತವ್ಯಕ್ಕೆ ನಿಯೋಜಿಸಿದ್ದಕ್ಕೆ ಸಹೋದ್ಯೋಗಿ ನಿರ್ವಾಹಕನೆ ಕಾರಣ ಕಾರಣ ಎಂದು ನಿರ್ವಾಹಕನ ಮೇಲೆ ಮುಗಿಬಿದ್ದು ಸಾರ್ವಜನಿಕ...
KKRTC ರಾಯಚೂರು: ಲಿಂಗಸುಗೂರು ಘಟಕ ವ್ಯವಸ್ಥಾಪಕ, ಡಿಸಿ ಅಮಾನತಿಗೆ ಕರವೇ ಆಗ್ರಹ
ಲಿಂಗಸಗೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ರಾಯಚೂರು ವಿಭಾಗದ ಲಿಂಗಸುಗೂರು ಘಟಕದಲ್ಲಿ ಚಾಲಕ ಹಾಗೂ ನಿರ್ವಾಹಕರಿಗೆ ಘಟಕ ವ್ಯವಸ್ಥಾಪಕರು ದಿನನಿತ್ಯ ಒಂದಿಲೊಂದು ರೀತಿಯಲ್ಲಿ ಕಿರುಕುಳು ನೀಡುತ್ತಿದ್ದು...
ಮೈಸೂರು: ಸಾಲದ ಸುಳಿಗೆ ಸಿಲುಕಿದ KSRTC ಕಂಡಕ್ಟರ್: ನಾಲೆಗೆ ಹಾರಿ ಆತ್ಮಹತ್ಯೆ
ಮೈಸೂರು: ಸಾಲದ ಸುಳಿಯಲ್ಲಿ ಸಿಲುಕಿ ಅದನ್ನು ತೀರಿಸಲಾಗದೆ ಮನಸ್ಸಿನಲ್ಲಿ ಭಾರಿ ನೋವು ಅನುಭವಿಸುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮೈಸೂರು ವಿಭಾಗದ ನಿರ್ವಾಹಕರೊಬ್ಬರು ನದಿಗೆ ಹಾರಿ...