Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ಸರ್ಕಾರದ ನಡೆಯೇ  BMTC ಆರ್ಥಿಕವಾಗಿ ಕುಸಿಯಲು ಕಾರಣ: ವರದಿ ಕೊಟ್ಟ CAG

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರದ 5 ಮಹತ್ವದ ಗ್ಯಾರಂಟಿ ಗಳಲ್ಲಿ ಶಕ್ತಿ ಯೋಜನೆ ಕೂಡ ಒಂದು. ಕರ್ನಾಟಕದಲ್ಲಿ ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಎಲ್ಲಿ ಬೇಕಾದರೂ ಉಚಿತವಾಗಿ ಪ್ರಯಾಣಿಸಬಹುದಾದ ಯೋಜನೆ ಇದಾಗಿದೆ.

ಶಕ್ತಿ ಯೋಜನೆ ಜಾರಿ ಆದಾಗಿನಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎಂಬ ಮಾತಿದೆ. ಆದರೆ ಈ ಮಾತನ್ನು CAG ವರದಿ ತಳ್ಳಿ ಹಾಕಿದ್ದು, ಬೇರೆನೆ ಕಾರಣ ಕೊಟ್ಟಿದೆ.

ಹೌದು! ಪ್ರಯಾಣ  ದರ 2014ರಿಂದ ಹೆಚ್ಚಿಸದಿದ್ದಕ್ಕೆ 649.79 ಕೋಟಿ ರೂ.ಗಳು ಸಂಭಾವ್ಯ  ಸಂಚಾರ ಆದಾಯ ಕಳೆದುಕೊಂಡಿದೆ. ಜತೆಗೆ ಕರ್ನಾಟಕ ಸರ್ಕಾರವು ಆರ್ಥಿಕ ನೆರವು ನೀಡದೆ ಇರುವುದರಿಂದ ಬೆಂಗಳೂರು ಮಹಾನಗರ ಸಾರಿಗೆಯ ಆರ್ಥಿಕ ಪರಿಸ್ಥಿತಿ ಸುಧಾರಿಸಿಲ್ಲ ಎಂದು ತಿಳಿಸಿದೆ.,

ಅಲ್ಲದೆ  ಇದು ಬಿಎಂಟಿಸಿ ಆರ್ಥಿಕವಾಗಿ ಕುಸಿಯಲು ಕಾರಣವಾಗಿದೆ ಎಂದು ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕ ಪರಿಶೋಧಕರ ವರದಿ ಬಯಲು ಮಾಡಿದೆ.

ಸಿಎಜಿ ವರದಿ ಗುರುವಾರ ವಿಧಾನಸಭೆಯಲ್ಲಿ ಮಂಡನೆಯಾಯಿತು. ಹಿರಿಯ ನಾಗರೀಕರು, ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರ ಪ್ರಯಾಣಿಕರಿಗೆ ರಿಯಾಯಿತಿ ಬಸ್‌ ಪಾಸ್‌ಗೆ ರಾಜ್ಯ ಸರ್ಕಾರ ಅನುದಾನ ನೀಡುತ್ತಿರುವುದರಿಂದ ಬಿಎಂಟಿಸಿಗೆ ಆರ್ಥಿಕ ನೆರವು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಬಿಎಂಟಿಸಿ ಆರ್ಥಿಕವಾಗಿ ಕುಸಿಯಲು ಇದು ಒಂದು ಕಾರಣವಾಗಿದೆ ಎಂದು ವರದಿಯಲ್ಲಿ ಉಲ್ಲೇಖವಾಗಿದೆ.

ರಿಯಾಯಿತಿ ಪಾಸ್ ಯೋಜನೆಗಳಲ್ಲಿ ಸರ್ಕಾರದ ಪಾಲು ಮರುಪಾವತಿಸಬೇಕು. ಬಿಎಂಟಿಸಿ ಘಟಕಗಳಲ್ಲಿ ಬಸ್‌ಗಳ ಸಮರ್ಪಕ ನಿರ್ವಹಣೆ ಮಾಡದ ಹಿನ್ನೆಲೆಯಲ್ಲಿ ಇಂಜಿನ್‌, ಬ್ಯಾಟರಿ, ಬಿಡಿಭಾಗ ಕಾರ್ಯಕ್ಷಮತೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಇದನ್ನು ಸರಿಪಡಿಸಲು ಸರ್ಕಾರ ಬಿಎಂಟಿಸಿಗೆ ಕಾಲಕಾಲಕ್ಕೆ ಆರ್ಥಿಕ ಬೆಂಬಲ ನೀಡಬೇಕು ಎಂದು ಸಿಎಜಿ ವರದಿ ತಿಳಿಸಿದೆ.

Leave a Reply

error: Content is protected !!
LATEST
KSRTC: ಡಿ.31ರಿಂದ ಕರೆ ಕೊಟ್ಟಿರುವ ಮುಷ್ಕರ ಬೆಂಬಲಿಸದ ನೌಕರರು- ವಿಲವಿಲ ಒದ್ದಾಡುತ್ತಿರುವ ಜಂಟಿ ಸಮಿತಿ ಮುಖಂಡರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.27ರಂದು BMTC & KSRTC ನಿವೃತ್ತ ನೌಕರರ ಪ್ರತಿಭಟನೆ ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ