NEWSನಮ್ಮರಾಜ್ಯಶಿಕ್ಷಣ-

NRIಗಳಿಗೆ ಸರ್ಕಾರಿ ವೈದ್ಯ ಕಾಲೇಜುಗಳಲ್ಲಿ ಸೀಟುಗಳ ಕಾಯ್ದಿರಿಸುವ ಸರ್ಕಾರದ ನಡೆ ಖಂಡನೀಯ: ಅತ್ತಹಳ್ಳಿ ದೇವರಾಜ್

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕರ್ನಾಟಕ ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್‌ಆರ್‌ಐ (NRI) ಗಳಿಗೆ ಸೀಟುಗಳನ್ನು ಕಾಯ್ದಿರಿಸುವುದಕ್ಕಾಗಿ ರಾಷ್ಟ್ರೀಯ ಮೆಡಿಕಲ್ ಕೌನ್ಸಿಲ್ (NMC) ಗೆ ರಾಜ್ಯ ಸರ್ಕಾರ ಪತ್ರ ಬರೆದಿರುವುದು ಖಂಡನೀಯ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಖಂಡಿಸಿದ್ದಾರೆ.

ಈ ಬಗ್ಗೆ ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸರ್ಕಾರದ ವೈದ್ಯಕೀಯ ಕಾಲೇಜುಗಳಲ್ಲಿ ಬಡ ಮಕ್ಕಳಿಗೆ ರೈತರ ಮಕ್ಕಳಿಗೆ, ಹಿಂದುಳಿದ – ದಲಿತ, ಕೂಲಿ ಕಾರ್ಮಿಕರ ಮಕ್ಕಳಿಗೆ ಸರ್ಕಾರ ನಿಗದಿ ಮಾಡಿದ ಶುಲ್ಕದಲ್ಲಿ ಹಾಗೂ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಸೀಟುಗಳು ಸಿಗುತ್ತಿವೆ.

ಇಂತಹ ವ್ಯವಸ್ಥೆಯನ್ನು ಬದಲಾಯಿಸಿ ಹೊರದೇಶದಲ್ಲಿ ವಾಸ ಮಾಡುವ ಮಕ್ಕಳಿಗೆ (NRI) ಸರ್ಕಾರದ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15 ರಷ್ಟು ಸೀಟುಗಳನ್ನು ಕಾಯ್ದಿರಿಸುವಂತೆ ರಾಜ್ಯ ಸರ್ಕಾರ “ರಾಷ್ಟ್ರೀಯ ಮೆಡಿಕಲ್ ಕೌನ್ಸಿಲ್ (NMC) ಗೆ ಒತ್ತಾಯ ಮಾಡಿರುವುದು ಖಂಡನೀಯ ಎಂದು ಹೇಳಿದ್ದಾರೆ.

ಅಲ್ಲದೆ ರಾಜ್ಯದ ಜನರ ಹಿತಾಸಕ್ತಿಯನ್ನು ಬಲಿಕೊಡುತ್ತಿರುವುದು ಸರ್ಕಾರಕ್ಕೆ ಗೌರವ ತರುವುದಿಲ್ಲ. ಕೂಡಲೇ ಈ ನಿರ್ಧಾರವನ್ನು ಕೈಬಿಡಬೇಕು ಇಲ್ಲದಿದ್ದರೆ ರಾಜ್ಯಾದ್ಯಂತ ರೈತ ಪರ ಸಂಘಟನೆಗಳ ಸಹಕಾರ ದೊಂದಿಗೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಆತ್ತಹಳ್ಳಿ ದೇವರಾಜ್ ಎಚ್ಚರಿಸಿದ್ದಾರೆ.

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ