NEWSನಮ್ಮರಾಜ್ಯ

ರಾಜ್ಯಮಟ್ಟದ ಪತ್ರಕರ್ತರ ಬೃಹತ್ ಸಮ್ಮೇಳನ: ಪತ್ರಕರ್ತರ ಮಿತ್ರರಿಗೆಲ್ಲ ದಾವಣಗೆರೆ ಬೆಣ್ಣೆ ದೋಸೆ ಆತಿಥ್ಯ

ವಿಜಯಪಥ ಸಮಗ್ರ ಸುದ್ದಿ

ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಇದೆ ಪ್ರಥಮ ಬಾರಿಗೆ 31 ವರ್ಷಗಳ ನಂತರ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವ ಹಾಗೂ ದಾವಣಗೆರೆ ಜಿಲ್ಲಾ ಕಾನಿಪ ಸಂಘದ ಆತಿಥ್ಯ ಮತ್ತು ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಸಹಯೋಗದಲ್ಲಿ ನಗರದಲ್ಲಿ 38ನೇ ರಾಜ್ಯಮಟ್ಟದ ಪತ್ರಕರ್ತರ ಬೃಹತ್ ಸಮ್ಮೇಳನದ ಕ್ಷಣ ಗಣನೆ ಆರಂಭವಾಗಿದೆ ಎಂದು ದಾವಣಗೆರೆ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಇ. ಎಂ. ಮಂಜುನಾಥ್ ತಿಳಿಸಿದರು.

ದಾವಣಗೆರೆ ನಗರದ ಕಾರ್ಯಕ್ರಮ ನಡೆಯುವ ಸ್ಥಳವಾದ ಶಾಮನೂರ್ ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ಸ್ಥಳ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಇ.ಎಂ. ಮಂಜುನಾಥ್, ಹಿಂದೆ ಚಿತ್ರದುರ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ದಾವಣಗೆರೆಯು ತಾಲೂಕು ಆಗಿದ್ದಾಗ 1992ರಲ್ಲಿ ನಡೆದಿತ್ತು. ಇದೀಗ ದಾವಣಗೆರೆ ಜಿಲ್ಲೆಯಾದ ಮೇಲೆ ಪ್ರಥಮ ಬಾರಿಗೆ ರಾಜ್ಯಮಟ್ಟದ ಸಮ್ಮೇಳನದ ಮೂಲಕ ರಾಜ್ಯದ ಎಲ್ಲಾ ಪತ್ರಕರ್ತರ ಮಿತ್ರರ ಸಮ್ಮಿಲನವಾಗುವಂತಹ ಕಾರ್ಯಕ್ರಮ ಇದಾಗಿದೆ.

ಫೆಬ್ರವರಿ 3 ಮತ್ತು 4ರಂದು ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಏರ್ಪಾಡಾಗಿರುವ ಈ ಸಮ್ಮೇಳನದಲ್ಲಿ ರಾಜ್ಯದ 31 ಜಿಲ್ಲೆಗಳಿಂದ ಸುಮಾರು ನಾಲ್ಕೂವರೆ ಸಾವಿರಕ್ಕೂ ಹೆಚ್ಚು ಮಾಧ್ಯಮ ಮಿತ್ರರು ಭಾಗವಹಿಸಲಿದ್ದು, ಈಗಾಗಲೇ ನೋಂದಣಿ ಕಾರ್ಯ ಆರಂಭವಾಗಿದೆ. ಸಮ್ಮೇಳನದಲ್ಲಿ ಭಾಗವಹಿಸಲು ರಾಜ್ಯದಿಂದ ಪತ್ರಕರ್ತರು ಈಗಾಗಲೇ ದಾವಣಗೆರೆಗೆ ಆಗಮಿಸಿದ್ದಾರೆ. ರಾಜ್ಯದಿಂದ ಬರುವ ಪತ್ರಕರ್ತರ ಮಿತ್ರರಿಗೆಲ್ಲ ಆತಿಥ್ಯ ನೀಡಲು ಸಜ್ಜುಗೊಂಡಿದ್ದೇವೆ.

ಫೆಬ್ರವರಿ 3ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಅದಕ್ಕೂ ಮುನ್ನ ಬೆಳಗ್ಗೆ 9 ಗಂಟೆಗೆ ಪತ್ರಕರ್ತರ ಬೃಹತ್ ಮೆರವಣಿಗೆ ನಡೆಯಲಿದೆ. ಪತ್ರಕರ್ತರಿಗೆ ಸಂಬಂಧಿಸಿದಂತೆ ನಾನಾ ವಿಶೇಷ ಗೋಸ್ಟಿಗಳು ಹಿರಿಯ ಪತ್ರಕರ್ತರಿಂದ ನಡೆಯಲಿವೆ ಎಂದು ಸಮ್ಮೇಳನ ಕಾರ್ಯಕ್ರಮದ ಕುರಿತಾಗಿ ವಿವರಣೆ ನೀಡಿದರು.

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಕೆ.ಏಕಾಂತಪ್ಪ ಮಾತನಾಡಿ, ಬರುವ ಫೆಬ್ರವರಿ 3 ಮತ್ತು 4ರಂದು ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಏರ್ಪಾಡಾಗಿರುವ ಈ ಸಮ್ಮೇಳನದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸುಮಾರು ನಾಲ್ಕೂವರೆ ಸಾವಿರಕ್ಕೂ ಹೆಚ್ಚು ಮಾಧ್ಯಮ ಮಿತ್ರರು ಭಾಗವಹಿಸಲಿದ್ದು, ಒಟ್ಟಿನಲ್ಲಿ ಈ ಸಮ್ಮೇಳನವು ಪತ್ರಕರ್ತರ ಹಬ್ಬ – ಜಾತ್ರೆ ಎಂತಾಗಲಿದೆ ಎಂದು ಬಣ್ಣಿಸಿದರು.

ಸಮ್ಮೇಳನವು 31 ವರ್ಷಗಳ ಹಿಂದೆ ಚಿತ್ರದುರ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ತಾಲ್ಲೂಕು ಆಗಿದ್ದ ದಾವಣಗೆರೆಯಲ್ಲಿ 1992ರಲ್ಲಿ ರಾಜನಹಳ್ಳಿ ಹನುಮಂತಪ್ಪ ಧರ್ಮಶಾಲೆಯಲ್ಲಿ ನಡೆದಿತ್ತು. ಈಗ ದಾವಣಗೆರೆ ರಚನೆಯಾದ ನಂತರ ಇದೇ ಪ್ರಪ್ರಥಮ ಬಾರಿಗೆ ಸಮ್ಮೇಳನ ನಡೆಯುತ್ತಿರುವುದು ದಾವಣಗೆರೆ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದರು.

ರಾಜ್ಯದಿಂದ ಆಗಮಿಸಿರುವ ಪತ್ರಕರ್ತರಿಗೆ ಮುಂಜಾನೆ ಉಪಾಹಾರಕ್ಕೆ ದಾವಣಗೆರೆಯ ಬೆಣ್ಣೆ ದೋಸೆ ಬಡಿಸುವ ಮೂಲಕ ಸ್ವಾಗತಿಸಲಾಯಿತು.

Leave a Reply

error: Content is protected !!
LATEST
ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು? KSRTC ‘ಅಶ್ವಮೇಧ’ಗಳಿಂದ ಸಂಸ್ಥೆಗೆ ಶೇ.10ಕ್ಕೂ ಹೆಚ್ಚು ಲಾಭ : ಸಚಿವ ರಾಮಲಿಂಗಾರೆಡ್ಡಿ ಅತೀ ಶೀಘ್ರದಲ್ಲೇ NWKRTC ಒಡಲು ಸೇರಲಿವೆ 350 ಹೊಸ ಎಲೆಕ್ಟ್ರಿಕ್​ ಬಸ್‌ಗಳು 15 ದಿನದ ಹಸುಳೆಗೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ - ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ ವೈದ್ಯರ ಸಾಧನೆ ಬಾಲ ಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಸ್ತ್ರ: ಅಪರ ಸಿವಿಲ್ ನ್ಯಾಯಾಧೀಶೆ ಶಕುಂತಲಾ ಯೋಗ ಮಾಡಿ ಸಮೃದ್ಧ ಆರೋಗ್ಯವಂತ ಜೀವನ ನಡೆಸಿ: ಡಾ. ದಿವ್ಯಾ ಸಲಹೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸಿ ಜನರ ಜೇಬಿಗೆ ಕತ್ತರಿ ಹಾಕಿದ ಸರ್ಕಾರ: ಎಎಪಿ ಆಕ್ರೋಶ KSRTC ಬಸ್‌ನಲ್ಲಿ ಪ್ರಯಾಣಿಸುವಾಗ ಟಿಕೆಟ್‌ ಕಳೆದುಕೊಂಡ ಮಹಿಳೆ: ತನಿಖಾಧಿಕಾರಿಗಳಿಗೆ ಹೆದರಿ ಬಸ್‌ನಿಂದ ಕೆಳಗಿಳಿಸಿದ ಕಂಡ... ಜುಲೈ 7ರಂದು KSRTC ನೌಕರರ ಕ್ರೆಡಿಟ್‌ ಸಹಕಾರ ಸಂಘದ ಚುನಾವಣೆ- ಜೂ.27ರಿಂದ ನಾಮಪತ್ರ ಸಲ್ಲಿಕೆ