Please assign a menu to the primary menu location under menu

CrimeNEWSದೇಶ-ವಿದೇಶ

ಕಾರು ಚಲಾಯಿಸುತ್ತಿದ್ದ ಅಜ್ಜಿಗೆ ಆಕಸ್ಮಿಕವಾಗಿ ಗುಂಡು ಹಾರಿಸಿದ ಮೊಮ್ಮಗಳು – ಅಜ್ಜಿ ಸಾವು

ವಿಜಯಪಥ ಸಮಗ್ರ ಸುದ್ದಿ

ವಾಷಿಂಗ್ಟನ್: ಚಲಿಸುತ್ತಿದ್ದ ಕಾರಿನಲ್ಲಿ ಆರು ವರ್ಷದ ಬಾಲಕಿ ತನ್ನ ಅಜ್ಜಿಗೆ ಗುಂಡು ಹಾರಿಸಿದ ಪರಿಣಾಮ ಅಜ್ಜಿ ಮೃತಪಟ್ಟಿರುವ ಘಟನೆ ಅಮೆರಿಕದ ಫ್ಲೋರಿಡಾದಲ್ಲಿ ಸಂಭವಿಸಿದೆ.

6 ವರ್ಷದ ಮೊಮ್ಮಗಳು ಕಾರಿನ ಹಿಂಭಾಗದ ಸೀಟಿನಲ್ಲಿ ಬಂದೂಕು ಹಿಡಿದುಕೊಂಡು ಕೂತಿದ್ದಾಗ ಆಕಸ್ಮಿಕವಾಗಿ ಒಂದು ಗುಂಡು ಹಾರಿಸಿದ್ದಾಳೆ. ಈ ವೇಳೆ ತನ್ನ 57 ವರ್ಷದ ಅಜ್ಜಿಗೆ ಆ ಗುಂಡು ಬಿದ್ದಿದ್ದು ಅವರು ಅಸುನೀಗಿದ್ದಾರೆ ಎಂದು ಫ್ಲೋರಿಡಾ ಪೊಲೀಸರು ತಿಳಿಸಿದ್ದಾರೆ.

ಆಕಸ್ಮಿಕವಾಗಿ ಒಂದು ಗುಂಡು ಹಾರಿಸಿದ್ದರಿಂದ ಕಾರು ಓಡಿಸುತ್ತಿದ್ದ ತನ್ನ ಅಜ್ಜಿಯ ಬೆನ್ನಿಗೆ ಗುಂಡೇಟು ತಗುಲಿದೆ. ಆದರೂ ಅಜ್ಜಿ ಸುಧಾರಿಸಿಕೊಳ್ಳುತ್ತಲೇ ತುರ್ತು ಸಹಾಯವಾಣಿ ಸಂಖ್ಯೆ 911ಗೆ ಕರೆ ಮಾಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಸಹಾಯವಾಣಿ ಸಿಬ್ಬಂದಿ ಆಕೆಯನ್ನು ಆಸ್ಪತ್ರೆಗೆ ಸಾಗಿಸಿದ್ದರಾದರೂ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ ಎಂದು ಉತ್ತರ ಬಂದರು ಪೊಲೀಸರು ಹೇಳಿದ್ದಾರೆ.

ಬಾಲಕಿಯನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಮಕ್ಕಳ ರಕ್ಷಣಾ ಕೇಂದ್ರದ ಅಧಿಕಾರಿಗಳು ಮಗುವಿನ ವಿಚಾರಣೆ ನಡೆಸಿದ್ದು, ತನಿಖೆಯಲ್ಲಿ ಇದೊಂದು ಆಕಸ್ಮಿಕ ಘಟನೆ ಎಂಬುದು ತಿಳಿದುಬಂದಿದೆ.

ಈ ಘಟನೆಗೆ ಪೊಲೀಸ್ ಮುಖ್ಯಸ್ಥ ಟಾಡ್ ಗ್ಯಾರಿಸನ್ ವಿಷಾದ ವ್ಯಕ್ತಪಡಿಸಿದ್ದಾರೆ. ಇದು ಬಂದೂಕು ಸುರಕ್ಷತೆಯ ಪ್ರಾಮುಖ್ಯತೆ ವಹಿಸದಿರುವುದರಿಂದ ನಡೆದುವ ಘಟನೆಯಾಗಿದ್ದು ಇದೊಂದು ದುರದೃಷ್ಟಕರ ಸಂಗತಿಯಾಗಿದೆ. ಮಕ್ಕಳ ಕೈಗೆ ಬಂದೂಕು ಸಿಗದಂತೆ ಎಚ್ಚರ ವಹಿಸಬೇಕು ಘಟನೆಯನ್ನು ನಿದರ್ಶನವಾಗಿರಿಸಿಕೊಂಡು ಸಲಹೆ ನೀಡಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...