NEWSನಮ್ಮಜಿಲ್ಲೆ

ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳನ್ನು ಸೇರಿಸಿ ಅಂತಿಮಗೊಳಿಸಲಾಗುವುದೆಂದು ಕರ್ನಾಟಕ ವಿಧಾನ ಮಂಡಲ ಜಂಟಿ ಪರಿಶೀಲನಾ ಸಮಿತಿಯ ಅಧ್ಯಕ್ಷ ರಿಜ್ವಾನ್ ಹರ್ಷದ್ ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯ ಯಲಹಂಕದ ಹಾಗೂ ದಾಸರಹಳ್ಳಿ ವಲಯ ಸೇರಿದಂತೆ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಇಂದು ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕುರಿತು ಸಾರ್ವಜನಿಕರಿಂದ ಸಲಹೆ ಮತ್ತು ಅಭಿಪ್ರಾಯ ಸ್ವೀಕರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದರು.

ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕದಲ್ಲಿರುವ ಅಂಶಗಳು ಅಂತಿಮವಾದುದಲ್ಲ, ಕರಡು ಮಾತ್ರವಾಗಿದೆ. ಅದಕ್ಕಾಗಿ ಸಾಕಷ್ಟು ಸಭೆಗಳನ್ನು ನಡೆಸಿ ಅಲವಾರು ಅಂಶಗಳನ್ನು ಕೂಲಂಕುಶವಾಗಿ ಚರ್ಚಿಸಲಾಗಿದೆ. ಅದಲ್ಲದೆ ನಾಗರೀಕರಿಂದಲೂ ಸಲಹೆ/ಅಭಿಪ್ರಾಯಗಳನ್ನು ಸಂಗ್ರಹಿಸಿ ಕಾನೂನಿನಡಿ ಬರುವ ಎಲ್ಲಾ ಅಂಶಗಳನ್ನು ವಿಧೇಯಕದಲ್ಲಿ ಅಳವಡಿಸಿಕೊಂಡು ಬಿಲ್ ಪಾಸ್ ಮಾಡಲಾಗುವುದೆಂದು ತಿಳಿಸಿದರು.

ಪ್ರಸ್ತುತ ಬೆಂಗಳೂರಿನ ಆಡಳಿತ ಯಾವ ರೀತಿ ನಡೆಯುತ್ತಿದೆ, ಈ ಆಡಳಿತದ ವಿನ್ಯಾಸ ಯಾವ ರೀತಿಯಿದೆ. ನಗರದ ನಿವಾಸಿಗಳಿಗೆ ಇರುವ ಆಡಳಿತದಿಂದ ಎಷ್ಟರ ಮಟ್ಟನಲ್ಲಿ ಸಹಾಯ ಆಗುತ್ತಿದೆ ಎಂಬುದರ ಬಗ್ಗೆ ನಾವೆಲ್ಲರೂ ಅವಲೋಕಿಸಬೇಕಿದೆ ಎಂದು ಹೇಳಿದರು.

ಬೃಹದಾಕಾರವಾಗಿ ಬೆಳೆಯುತ್ತಿರುವ ನಗರಕ್ಕೆ ಒಬ್ಬರೇ ಮಹಾಪೌರರು ಹಾಗೂ ಒಬ್ಬರೇ ಆಯುಕ್ತರಿಂದ ಕೆಲಸ ಮಾಡಲು ಸಾಧ್ಯವಿಲ್ಲ. ಸ್ಥಳೀತವಾಗಿಯೇ ನಗರ ಪಾಲಿಕೆಗಳನ್ನು ನಿರ್ಮಾಣ ಮಾಡಿದಲ್ಲಿ, ಸ್ಥಳೀಯವಾಗಿರುವ ಸಮಸ್ಯೆಗಳನ್ನು ಸ್ಥಳೀಯವಾಗಿಯೇ ಚರ್ಚಿಸಿ, ಕೂಡಲೆ ಇತ್ಯರ್ಥ ಪಡಿಸಿಕೊಳ್ಳಬಹುದಾಗಿರುತ್ತದೆ ಎಂದು ತಿಳಿಸಿದರು.

ಜಿಬಿಎ ಕುರಿತು ಪ್ರಾತ್ಯಕ್ಷಿಕೆ: ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕುರಿತು ಜಿಬಿಎ ಪ್ರದೇಶ, ಉದ್ದೇಶ, ರಚನೆ, ಆಡಳಿತಾತ್ಮಕ ಕಾರ್ಯಗಳು, ಯೋಜನಾ ಕಾರ್ಯಗಳು, ಜವಾಬ್ದಾರಿಗಳು ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಪ್ರಾತ್ಯಕ್ಷಿಕೆ ಮೂಲಕ ಮುಖ್ಯಾಂಶಗಳನ್ನು ವಿವರಿಸಿದರು.

ಇ-ಮೇಲ್ ಮೂಲಕ ಸಲಹೆಗಳನ್ನು ನೀಡಿ: ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕುರಿತು ಸಾರ್ವಜನಿಕರು/ಸಂಘ ಸಂಸ್ಥೆಗಳು ತಮ್ಮ ಸಲಹೆ ಮತ್ತು ಅಭಿಪ್ರಾಯಗಳನ್ನು ಇ-ಮೇಲ್ ಆದ [email protected] ಮೂಲಕವೂ ಕಳುಹಿಸಬಹುದಾಗಿರುತ್ತದೆ.

ಸಮಾರೋಪ ಸಮಾರಂಭ: ಕಳೆದ 3 ದಿನಗಳಿಂದ 8 ವಲಯಗಳಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕುರಿತು ಸಾರ್ವಜನಿಕರಿಂದ ಪಡೆದ ಸಲಹೆ/ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿದ್ದು, ಅರ್ಹ ಅಂಶಗಳನ್ನು ಪರಿಶೀಲಿಸಿ ವಿಧೇಯಕದಲ್ಲಿ ಅಳವಡಿಸಿಕೊಳ್ಳಲಾಗುವುದು.

ಸಾರ್ವಜನಿಕರಿಂದ ಬಂದಂತಹ ಪ್ರಮುಖ ಸಲಹೆಗಳು/ಅಭಿಪ್ರಾಯಗಳು: 1. ಆಡಳಿತ ದೃಷ್ಟಿಯಿಂದ ಜಿಬಿಎ ಅಸ್ತಿತ್ವಕ್ಕೆ ತರವುದು ಒಳಿತು. 2. ಜಿಬಿಎ ಬರುವುದರಿಂದ ಬೆಂಗಳೂರಿನ ಅಸ್ತಿತ್ವಕ್ಕೆ ಯಾವುದೇ ಧಕ್ಕೆಯಾಗುವುದಿಲ್ಲ. 3. ಆಡಳಿತ ವರ್ಗ ಹೆಚ್ಚಿಸುವುದರಿಂದ ಸ್ಥಳಿಯ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಿಕೊಳ್ಳಬಹುದು. 4. ಜಿಬಿಎ ಮಾಡುತ್ತಿರುವುದು ಅವೈಜ್ಞಾನಿಕವಾಗಿದ್ದು, ಅದನ್ನು ಕೂಡಲೆ ನಿಲ್ಲಿಸಿ ತ್ವರಿತವಾಗಿ ಚುನಾವಣೆ ಮಾಡಿ.

  1. ನಗರ ಪಾಲಿಕೆಗಳನ್ನು ಮಾಡುವ ಬದಲು ವಲಯಗಳನ್ನೇ ಹೆಚ್ಚಳ ಮಾಡಿ. 6. ಬೆಂಗಳೂರನ್ನು ಯಾವುದೇ ಕಾರಣಕ್ಕೂ ವಿಭಾಗ ಮಾಡಬಾರದು. 7. ಜಿಬಿಎ ಅಡಿ ವಿಪತ್ತು ನಿರ್ವಹಣೆಯಲ್ಲಿ ಕಲವು ಅಂಶಗಳನ್ನು ಸೇರ್ಪಡೆ ಮಾಡಲು ಮನವಿ ಮಾಡಿದರು. 8. ಜಿಬಿಎ ಬರುತ್ತಿರುವುದು ಉತ್ತಮ ಸಂಗತಿಯಾಗಿದ್ದು, ಅದನ್ನು ಸರಿಯಾಗಿ ಜಾರಿಗೆ ತರಲು ಮನವಿ.

ಈ ವೇಳೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರರಾದ ಶ್ರೀ ಎಸ್.ಆರ್ ಉಮಾಶಂಕರ್, ವಲಯ ಆಯುಕ್ತರಾದ ಸತೀಶ್, ಕರೀಗೌಡ, ಜಂಟಿ ಆಯುಕ್ತರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ