ಗ್ರೇಟರ್ ಬೆಂಗಳೂರು ಪ್ರಾಧಿಕಾರ: ಶೀಘ್ರದಲೇ ಮೂರು ಪಾಲಿಕೆ ರಚನೆ – ಡಿಸಿಎಂ
ಬೆಂಗಳೂರು: ಬೃಹತ್ ಬೆಂಗಳೂರು ಪ್ರಾಧಿಕಾರ – Greater Bangalore Authority (GBA) ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಮೇ 15ರಿಂದ ಅಂದರೆ ಗುರುವಾರರಿಂದ ಕಾಯ್ದೆ ಜಾರಿಯಾಗೆ ಬಂದಿದೆ.
ಹೀಗಾಗಿ ಇನ್ನು ಮುಂದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬದಲಿಗೆ– ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎಂಬ ಹೆಸರಿನಿಂದ ಬಿಬಿಎಂಪಿ ಕರೆಯಲ್ಪಡಲಿದೆ.
ಈ ಗ್ರೇಟರ್ ಬೆಂಗಳೂರು ಅಥಾರಿಟಿ ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಜಿಬಿಎ ಅಸ್ತಿತ್ವಕ್ಕೆ ಬಂದಿದೆ. ಇನ್ನು ಮೂರು ಪಾಲಿಕೆ ರಚನೆ ಮಾಡುವುದಕ್ಕೆ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಜನಪ್ರತಿನಿಧಿಗಳ ಸಭೆ ಕರೆದು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಇನ್ನು ಜಿಬಿಎಯ ಚುನಾವಣೆಗೆ ಸಂಬಂಧಪಟ್ಟಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಈ ವರ್ಷ ಕೊನೆಯಲ್ಲಿ ಚುನಾವಣೆ ಆಗಲೇ ಬೇಕು ಅದನ್ನು ಪಾಲಿಕೆಗಳ ರಚನೆ ಮಾಡಿದ ಕೂಡಲೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
Related











