NEWSVideosಬೆಂಗಳೂರುರಾಜಕೀಯ

ಗ್ರೇಟರ್ ಬೆಂಗಳೂರು ಪ್ರಾಧಿಕಾರ: ಶೀಘ್ರದಲೇ ಮೂರು ಪಾಲಿಕೆ ರಚನೆ – ಡಿಸಿಎಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೃಹತ್ ಬೆಂಗಳೂರು ಪ್ರಾಧಿಕಾರ – Greater Bangalore Authority (GBA) ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಮೇ 15ರಿಂದ ಅಂದರೆ ಗುರುವಾರರಿಂದ ಕಾಯ್ದೆ ಜಾರಿಯಾಗೆ ಬಂದಿದೆ.

ಹೀಗಾಗಿ ಇನ್ನು ಮುಂದೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಬದಲಿಗೆ– ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎಂಬ ಹೆಸರಿನಿಂದ ಬಿಬಿಎಂಪಿ ಕರೆಯಲ್ಪಡಲಿದೆ.

ಈ ಗ್ರೇಟರ್ ಬೆಂಗಳೂರು ಅಥಾರಿಟಿ ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಜಿಬಿಎ ಅಸ್ತಿತ್ವಕ್ಕೆ ಬಂದಿದೆ. ಇನ್ನು ಮೂರು ಪಾಲಿಕೆ ರಚನೆ ಮಾಡುವುದಕ್ಕೆ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಜನಪ್ರತಿನಿಧಿಗಳ ಸಭೆ ಕರೆದು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಇನ್ನು ಜಿಬಿಎಯ ಚುನಾವಣೆಗೆ ಸಂಬಂಧಪಟ್ಟಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಈ ವರ್ಷ ಕೊನೆಯಲ್ಲಿ ಚುನಾವಣೆ ಆಗಲೇ ಬೇಕು ಅದನ್ನು ಪಾಲಿಕೆಗಳ ರಚನೆ  ಮಾಡಿದ ಕೂಡಲೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

Megha
the authorMegha

Leave a Reply

error: Content is protected !!
Latest news
ಕರೆಂಟ್‌ ಬಿಲ್‌: ವಿದ್ಯುತ್ ವಿತರಣಾ ಕಂಪನಿಗಳ ಅನ್ಯಾಯದ ಬಿಲ್ಲಿಂಗ್ ಪದ್ಧತಿಗೆ ಬ್ರೇಕ್‌- KERC ಆದೇಶ ಪಾಲನೆಗೆ ಗ್ರಾಹಕರ... ಗೃಹಲಕ್ಷ್ಮಿಯೋಜನೆಗೆ ಮತ್ತೆ ಹೊಸದಾಗಿ ಅರ್ಜಿ ಸ್ವೀಕರಿಸುವ ಚಿಂತನೆಯಲ್ಲಿ ಸರ್ಕಾರ! ಮೂರು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಿಸಲು ಸರ್ಕಾರ ನಿರ್ಧಾರ: ಸಾರಿಗೆ ಸಚಿವ ಬೈರತಿ ... ಹಣ ದುರುಪಯೋಗ, ಕರ್ತವ್ಯ ಲೋಪ ಎಸಗಿದ ಆರೋಪ ಸಾಬೀತು: ಮಹೇಶ್ ಜೋಶಿ ಕಸಾಪ ಆಜೀವ ಸದಸ್ಯತ್ವ ರದ್ದು ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತು 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ KSRTC ಎಂಡಿ ಅಕ್ರಮ್‌ಪಾಷ ವರ್ಗಾವಣೆ ಪ್ರಭಾರ ಎಂಡಿಯಾಗಿ ಡಾ.ಆರ್‌. ಸೆಲ್ವಮಣಿ ನೇಮಕ ಮಾಡಿ ಸರ್ಕಾರದ ಆದೇಶ 4.30 ಲಕ್ಷ ಮೃತಪಟ್ಟ, ಅನರ್ಹರ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಟ್ಟ ಸರ್ಕಾರ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗೋಕುಲದ ಅಧ್ಯಕ್ಷ ಲಯನ್ ಅರವಿಂದ ಕೆ.ಆರ್.ಮಾರುಕಟ್ಟೇಲಿ ಅಗ್ನಿ ಅವಘಡ ತಡೆಗೆ ಫೈರ್ ಆಡಿಟ್: ಮುಖ್ಯ ಆಯುಕ್ತ ಮಹೇಶ್ವರ್ ರಾವ್ KSRTC ಫ್ರೀ ಬಸ್‌ಪಾಸ್‌ ಈ ತಿಂಗಳು ಸಿಗುವುದು ಡೌಟ್‌- ನಿತ್ಯ ಹಣಕೊಟ್ಟು ಓಡಾಡುತ್ತಿರುವ ವಿದ್ಯಾರ್ಥಿಗಳ ಗೋಳು ಕೇಳುವವರು...