ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳಲ್ಲಿ ಜುಲೈ 1ರಿಂದ ಜಾರಿಯಾಗಲಿರುವ ಸರ್ಕಾರದ ಎರಡನೇ ಗ್ಯಾರಂಟಿ ಗೃಹಜ್ಯೋತಿ ಯೋಜನೆಗೆ ಜೂನ್ 18ರಿಂದ ಅರ್ಜಿ ಸಲ್ಲಿಕೆ ಆರಂಭಗೊಂಡಿದೆ. ಸೇವಾ ಸಿಂಧು ಪೋರ್ಟಲ್‌ನಲ್ಲಿ ಕೆಲ ಬದಲಾವಣೆಯಿಂದಾಗಿ ಅರ್ಜಿ ಸಲ್ಲಿಕೆಗೆ ವಿಳಂಬವಾಗಿತ್ತು. ಸದ್ಯ ಎಲ್ಲವೂ ಸರಿಯಾಗಿದ್ದು ಭಾನುವಾರದಿಂದ ಅರ್ಜಿ ಸಲ್ಲಿಸಲಾಗುತ್ತಿದೆ.
ಹೀಗಾಗಿ ಮೊದಲ ದಿನ 55 ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ. ಯೋಜನೆ 2023ರ ಆಗಸ್ಟ್ 1 (ಜುಲೈ ಮಾಹೆಯ ವಿದ್ಯುಚ್ಛಕ್ತಿ ಬಳಕೆ) ರಿಂದ ಜಾರಿಗೆ ಬರಲಿದ್ದು ಅರ್ಹತೆಯ ಮಿತಿಯಲ್ಲಿದ್ದ ಫಲಾನುಭವಿಗಳು ಆಗಸ್ಟ್ 1 ರಿಂದ ಶೂನ್ಯ ಬಿಲ್ ಪಡೆಯಲಿದ್ದಾರೆ. ಆದರೆ ಯೋಜನೆಗೆ ಫಲಾನುಭವಿಯಾಗಲು ನೋಂದಣಿ ಮಾಡುವುದು ಕಡ್ಡಾಯವಾಗಿದೆ.
ಹೌದು! ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗೆ ಉಚಿತವಾಗಿ ವಿದ್ಯುತ್ ನೀಡುವುದು ‘ಗೃಹಜ್ಯೋತಿ’ ಯೋಜನೆ. ಹೀಗಾಗಿ ಜನರು ಸೇವಾಸಿಂಧು ಪೋರ್ಟಲ್, ಬೆಂಗಳೂರು ಒನ್, ಗ್ರಾಮ್ ಒನ್ ಮತ್ತು ಕರ್ನಾಟಕ ಒನ್ ಕೇಂದ್ರ ಅಥವಾ ಯಾವುದೇ ವಿದ್ಯುತ್ ಕಚೇರಿಗಳಲ್ಲಿಯೂ ಸಹ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶವಿದೆ.
‘ಗೃಹಜ್ಯೋತಿ’ ಯೋಜನೆ ಫಲಾನುಭವಿಯಾಗಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಿದೆ. https://sevasindhugs.karnataka.gov.in/ ಲಿಂಕ್ ಕ್ಲಿಕ್ ಮಾಡಿದರೆ ಅದರಲ್ಲಿ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳ ವಿವರ ತೆರದುಕೊಳ್ಳಲಿದೆ. ಈ ವೇಳೆ ‘ಗೃಹಜ್ಯೋತಿ’ಗೆ ಕ್ಲಿಕ್ ಮಾಡಿದರೆ ಮುಂದಿನ ಪುಟ ತೆರೆದುಕೊಳ್ಳಲಿದೆ.
ಬೆಸ್ಕಾಂ ಕಚೇರಿಯಲ್ಲಿ ಅರ್ಜಿ ಸಲ್ಲಿಕೆ ಹೇಗೆ? ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿದೆ. ಈ ವೆಬ್‌ಸೈಟ್ ಮೊಬೈಲ್, ಡೆಸ್ಕ್‌ಟಾಪ್, ಲ್ಯಾಪ್ ಟಾಪ್‌ಗಳಲ್ಲಿಯೂ ಕಾರ್ಯ ನಿರ್ವಹಣೆ ಮಾಡಲಿದೆ. ‘ಗೃಹಜ್ಯೋತಿ’ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ಹಾಗೂ ಅಲ್ಪಕಾಲಾವಧಿಯಲ್ಲಿಯೇ ಬಹುತೇಕ ಅರ್ಜಿಗಳು ಸಲ್ಲಕೆಯಾಗುವ ಕಾರಣ ವಿದ್ಯುತ್ ಶಕ್ತಿ ಕಚೇರಿಗಳಲ್ಲಿಯೇ ‘ಗೃಹಜ್ಯೋತಿ’ ಯೋಜನೆಗೆ ವಿಶೇಷ ಕೌಂಟರ್ ತೆರೆಯಲಾಗಿದೆ. ಅಲ್ಲಿಗೆ ಭೇಟಿ ನೀಡಿ, ಸಹ ಅರ್ಜಿ ಸಲ್ಲಿಸಬಹುದು.
‘ಗೃಹ ಜ್ಯೋತಿ’ ಯೋಜನೆಯಡಿ ಉಚಿತ ವಿದ್ಯುತ್ ಪಡೆಯಲು ಫಲಾನುಭವಿಗಳು ಆಧಾರ್ ಕಾರ್ಡ್, ಗ್ರಾಹಕರ ID ಗಳ ಮಾಹಿತಿಗಳನ್ನು (ವಿದ್ಯುಚ್ಛಕ್ತಿ ಬಿಲ್‌ನಲ್ಲಿ ಇರುವಂತೆ) ನೋಂದಣಿ ಸಮಯದಲ್ಲಿ ನೀಡಬೇಕಾಗುತ್ತದೆ. ಒಂದು ವೇಳೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರೆ ಕರಾರು ಪತ್ರವನ್ನು ಸಹ ನೀಡಬೇಕು.
ಯಾವ-ಯಾವ ವಿವರಗಳು: ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸುವಾಗ ಕೇಳುವ ವಿವರಗಳು
* ಎಸ್ಕಾಂ ಹೆಸರು ಖಾತೆ ಸಂಖ್ಯೆ ಖಾತೆದಾರರ ಹೆಸರು ಎಸ್ಕಾಂ ನಲ್ಲಿರುವಂತೆ ಖಾತೆದಾರರ ವಿಳಾಸ ಎಸ್ಕಾಂ ನಲ್ಲಿರುವಂತೆ * ಎಸ್ಕಾಂ ಹೆಸರು1 * ಬಳಕೆದಾರರ ವಿಧ (ಇಲ್ಲಿ ಎರಡು ಆಯ್ಕೆಗಳಿದ್ದು ಬಾಡಿಗೆದಾರರು/ ಮಾಲೀಕರು) ಎಂದಿದೆ ಆಧಾರ್ ಸಂಖ್ಯೆ ಅರ್ಜಿದಾರರ ಹೆಸರು ಸಂವಹನಕ್ಕಾಗಿ ದೂರವಾಣಿ ಸಂಖ್ಯೆ
ಈ ಎಲ್ಲ ವಿವರವನ್ನು ಭರ್ತಿ ಮಾಡಿದ ಮೇಲೆ ಈ ಮೇಲಿನ ಖಾತೆ ಸಂಖ್ಯೆಯನ್ನು ಗೃಹ ಬಳಕೆಗೆ ಮಾತ್ರ ಬಳಸಲಾಗುತ್ತದೆ. ಒಂದು ವೇಳೆ ಗೃಹ ಬಳಕೆ ಹೊರತುಪಡಿಸಿ ಬೇರೆ ಯಾವುದೇ ಉದ್ದೇಶಕ್ಕೆ ಬಳಸಿದ್ದಲ್ಲಿ ಪ್ರಯೋಜನಗಳನ್ನು ಸ್ವಯಂಚಾಲಿತವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ನನಗೆ ತಿಳಿದಿದೆ ಮತ್ತು ನಾನು ಈಗಾಗಲೇ ಪಡೆದಿರುವ ಪ್ರಯೋಜನಗಳನ್ನು ಬಡ್ಡಿಯೊಂದಿಗೆ ಮರುಪಾವತಿಸಲು ಸಿದ್ಧನಿದ್ದೇನೆ. ನಾನು ಮೇಲೆ ಒದಗಿಸಿರುವ ಎಲ್ಲಾ ವಿವರಗಳು ನನಗೆ ತಿಳಿದಿರುವಂತೆ ಸರಿಯಾಗಿದೆ ಎಂದು ಈ ಮೂಲಕ ಧೃಢೀಕರಿಸುತ್ತೇನೆ. ಹೀಗೆ ಅದಕ್ಕೆ ಒಪ್ಪಿಗೆ ನೀಡಬೇಕು. ಬಳಿಕ ಮುಂದಿನ ಹಂತ ತೆರೆದುಕೊಳ್ಳಲಿದೆ.
ಸಹಾಯವಾಣಿ : ‘ಗೃಹಜ್ಯೋತಿ’ ಯೋಜನೆಗೆ ಜನರು ಅರ್ಜಿಗಳನ್ನು ಸಲ್ಲಿಕೆ ಮಾಡುವಾಗ ತಾಂತ್ರಿಕ ಸಮಸ್ಯೆಗಳು ಎದುರಾದರೆ ಹೆಚ್ಚಿನ ಮಾಹಿತಿಗಾಗಿ ವಿದ್ಯುಚ್ಛಕ್ತಿ ಕಚೇರಿ ಅಥವಾ 24×7 ಸಹಾಯವಾಣಿ 1912ಗೆ ಕರೆಮಾಡಬಹುದು. ಇದು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ. ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ (ಆರ್ಥಿಕ ವರ್ಷ 2022-23ರ ಬಳಕೆಯ ಆಧಾರದನ್ವಯ) ಯೂನಿಟ್‌ಗಳ ಮೇಲೆ ಶೇ.10 ರಷ್ಟು ಹೆಚ್ಚಿನ ಬಳಕೆಯ ಮಿತಿಗೆ ಗ್ರಾಹಕರು ಅರ್ಹರು.
ಯೋಜನೆಯಿಂದ ರಾಜ್ಯದ 2 ಕೋಟಿ ಗೃಹ ಬಳಕೆ ಗ್ರಾಹಕರಿಗೆ ಅನುಕೂಲವಾಗುತ್ತದೆ. ಈ ಯೋಜನೆಯು 2023ರ ಆಗಸ್ಟ್ 1 (ಜುಲೈ ಮಾಹೆಯ ವಿದ್ಯುಚ್ಛಕ್ತಿ ಬಳಕೆ) ರಿಂದ ಜಾರಿಗೆ ಬರಲಿದ್ದು ಅರ್ಹತೆಯ ಮಿತಿಯಲ್ಲಿದ್ದ ಫಲಾನುಭವಿಗಳು ಆಗಸ್ಟ್ 1 ರಿಂದ ಶೂನ್ಯ ಬಿಲ್ ಪಡೆಯಲಿದ್ದಾರೆ. ‘ಗೃಹಜ್ಯೋತಿ’ ಯೋಜನೆ ಫಲಾನುವಿಯಾಗಲು ಹಿಂದಿನ ಎಲ್ಲ ಬಾಕಿ ಬಿಲ್ ಪಾವತಿ ಮಾಡಬೇಕು. ಬಾಕಿ ಪಾವತಿ ಮಾಡಲು ಸೆಪ್ಟೆಂಬರ್ ತನಕ ಇಂಧನ ಇಲಾಖೆ ಅವಕಾಶ ನೀಡಿದೆ.
ಗೃಹ ಜ್ಯೋತಿ ಯೋಜನೆಗೆ ಗ್ರಾಹಕರು ಈ ಕೆಳಗಿನ ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. https://t.co/iO1tMY4vbZ@NammaBESCOM @BescomHelpline @CMofKarnataka @thekjgeorge pic.twitter.com/US8VnbcbzV
— Managing Director, BESCOM (@mdbescom) June 18, 2023