ಚಿಕ್ಕಮಗಳೂರು: ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಡೆಡ್ಲೈನ್ ಇಲ್ಲ. ಗೃಹಜ್ಯೋತಿ ಯೋಜನೆಗೆ 86.5 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ ಎಂದು ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ ತಿಂಗಳ ವಿದ್ಯುತ್ ಬಿಲ್ ಜುಲೈ ತಿಂಗಳಿಗೆ ಬರುತ್ತದೆ. ಇನ್ನು ಜುಲೈ ತಿಂಗಳಿನಿಂದ ಎಲ್ಲ ಫಲಾನುಭವಿಗಳಿಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ತಿಳಿಸಿದರು.
ಗೃಹಜ್ಯೋತಿಗೆ ಅರ್ಜಿ ಹಾಕದಿದ್ದರೆ ಮುಂದಿನ ತಿಂಗಳು ಬಿಲ್ ಬರುತ್ತೆ. ‘ಗೃಹಜ್ಯೋತಿ’ ಲಾಭ ಪಡೆಯಲು ಎಲ್ಲರೂ ಅರ್ಜಿ ಹಾಕಲೇಬೇಕು. ಆದಷ್ಟು ಬೇಗ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದ್ದರೆ ಒಳ್ಳೇದು ಎಂದರು.
ಈ ನಡುವೆ ಅಂದರೆ ಜುಲೈ 25ರೊಳಗೆ ಅರ್ಜಿ ಸಲ್ಲಿಸಿದ್ದರೆ ಆ ಎಲ್ಲರಿಗೂ ಉಚಿತವಾಗಿ ವಿದ್ಯುತ್ ನೀಡಲಾಗುವುದು. ಒಂದು ವೇಳೆ ಅರ್ಜಿ ಸಲ್ಲಿಸದಿದ್ದರೆ ಮುಂದಿನ ತಿಂಗಳು ಅವರಿಗೆ ವಿದ್ಯುತ್ ಬಿಲ್ ಬರಲಿದೆ ಎಂದು ಹೇಳಲಾಗುತ್ತಿದೆ.
ಹೀಗಾಗಿ ಈ ಬಗ್ಗೆ ಮುಂದಿನ ದಿನಗಳಲ್ಲಿ ಸರ್ಕಾರ ಏನು ಕ್ರಮ ತೆಗೆದುಕೊಳ್ಳುತ್ತದೆ ಎಂಬುದನ್ನು ಇನ್ನಷ್ಟೆ ಕಾದು ನೋಡಬೇಕಿದೆ.