ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ಹಿಂದುಳಿದವರಗೆ, ಎಲ್ಲ ವರ್ಗದ ವರೆಗೂ ಅನುಕೂಲವಾಗಿದೆ. ಆದರೆ ವಿಪಕ್ಷದವರು ಸುಖಾಸುಮ್ಮನೆ ಪ್ರತಿಭಟನೆ ಮಾಡ್ತಿದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಭಾನುವಾರ ದೇವನಹಳ್ಳಿ ತಾಲೂಕು ಭೈರದೇನಹಳ್ಳಿಯಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾಪಂಯಿತಿ ವತಿಯಿಂದ ನಡೆದ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ಕುಟುಂಬದ ಯಶಸ್ಸು, ಜೀವನದ ಯಶಸ್ಸಿಗೆ ನಾವು ಗ್ಯಾರಂಟಿಗಳನ್ನು ನೀಡಿದ್ದೇವೆ. ಎತ್ತಿನಹೊಳೆ ನೀರನ್ನು ಬಯಲು ಸೀಮೆ ಪ್ರದೇಶಗಳಿಗೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆದಷ್ಟು ಶೀಘ್ರ ಹರಿಸಲಾಗುವುದು ಎಂದರು.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್. ಮುನಿಯಪ್ಪ ಮಾತನಾಡಿ, ಸರ್ಕಾರದ ಎರಡು ವರ್ಷದ ಸಾಧನೆಯನ್ನು ಮೊದಲ ಜಿಲ್ಲೆಯಾಗಿ ಬೆಂಗಳೂರು ಗ್ರಾಮಾಂತರದಲ್ಲಿ ಇಂದು ಕಾರ್ಯಕ್ರಮ ಮಾಡ್ತಿದ್ದೇವೆ. ಸಿಎಂ ಸಿದ್ದರಾಮಯ್ಯನವರು ನುಡಿದಂತೆ ನಡೆದಿದ್ದಾರೆ ಎಂದರು.
ಇನ್ನು ತಡವಾದರೂ ಹತ್ತು ಕೆಜಿ ಅಕ್ಕಿಯನ್ನ ವಿತರಿಸಿದ್ದಾರೆ. ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಶಸ್ವಿಯಾಗಿ ಜಾರಿಗೆ ಮಾಡಿದ್ದಾರೆ. ಎತ್ತಿನಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಕೊಟ್ಟ ಮೇಲೆ ಕೆರೆಗಳ ತುಂಬಿಸುವ ಮಾತನ್ನು ನೀವು ಹೇಳಿದ್ರಿ. ಆದಷ್ಟು ಬೇಗನೇ ಟೆಂಡರ್ ಕರೆದು ಕಾಮಗಾರಿ ಆರಂಭಿಸಬೇಕು. ಜಿಲ್ಲೆಯ ಕಟ್ಟ ಕಡೆಯ ಗ್ರಾಮಕ್ಕೂ ನೀರು ಸಿಗುವಂತಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಲ್ಲಿ ಮನವಿ ಮಾಡಿದರು.
ಜಿಲ್ಲೆಯಲ್ಲಿ ಸಿಎಸ್ಆರ್ ಫಂಡ್ ಮೂಲಕ 150 ಕೋಟಿ ರೂ. ವೆಚ್ಚದಲ್ಲಿ ಶಾಲೆಗಳು ಅಭಿವೃದ್ಧಿ ಮಾಡ್ತಿದ್ದೇವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ 2.50 ಲಕ್ಷ ಕುಟುಂಬಗಳಿಗೆ ಕುಟುಂಬ ಸದಸ್ಯರೊಬ್ಬರಿಗೆ ಉದ್ಯೋಗ ಕೊಡಿಸುವ ಮಹತ್ತರ ಉದ್ದೇಶ ಹೊಂದಿದ್ದು, ಮೊದಲ ಹಂತದಲ್ಲಿ 5 ಸಾವಿರ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ಮೇಳದ ಮೂಲಕ ಕೆಲಸವನ್ನು ಕೊಡಿಸಿದ್ದೇವೆ ಎಂದು ಸಚಿವರು ಹೇಳಿದರು.
ಸರ್ಕಾರದ ಎರಡು ವರ್ಷಗಳ ಸಾಧನೆಯ ಸಾಧನೆ ಸಂಚಿಕೆ ಪುಸ್ತಕ ಬಿಡುಗಡೆಗೊಳಿಸಿ ವಿವಿಧ ಇಲಾಖೆಗಳ ಯೋಜನೆಯಡಿ ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಯಿತು.
ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್, ಸಣ್ಣ ನೀರಾವರಿ ಇಲಾಖೆ ಸಚಿವ ಬೋಸುರಾಜು, ಹೊಸಕೋಟೆ ಶಾಸಕ ಶರತ್ ಕುಮಾರ್ ಬಚ್ಚೇಗೌಡ, ನೆಲಮಂಗಲ ಶಾಸಕ ಶ್ರೀನಿವಾಸ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ರೇವಣ್ಣ, ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಸಿಇಒ ಅನುರಾಧ, ಎಸ್ಪಿ ಸಿ.ಕೆ.ಬಾಬಾ ಸೇರಿದಂತೆ ಚುನಾಯಿತ ಪ್ರತಿನಿಧಿಗಳು, ನಾಮನಿರ್ದೇಶಿತ ಸದಸ್ಯರು, ಜನಪ್ರತಿನಿಧಿಗಳು, ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.
Related

You Might Also Like
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...