LatestNEWSನಮ್ಮರಾಜ್ಯ

ಗ್ಯಾರಂಟಿ ಯೋಜನೆಗಳಿಂದ ಎಲ್ಲ ವರ್ಗದ ವರೆಗೂ ಅನುಕೂಲ: ಡಿಸಿಎಂ ಡಿಕೆಶಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ಹಿಂದುಳಿದವರಗೆ, ಎಲ್ಲ ವರ್ಗದ ವರೆಗೂ ಅನುಕೂಲವಾಗಿದೆ. ಆದರೆ ವಿಪಕ್ಷದವರು ಸುಖಾಸುಮ್ಮನೆ ಪ್ರತಿಭಟನೆ ಮಾಡ್ತಿದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಭಾನುವಾರ ದೇವನಹಳ್ಳಿ ತಾಲೂಕು ಭೈರದೇನಹಳ್ಳಿಯಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾಪಂಯಿತಿ ವತಿಯಿಂದ ನಡೆದ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ಕುಟುಂಬದ ಯಶಸ್ಸು, ಜೀವನದ ಯಶಸ್ಸಿಗೆ ನಾವು ಗ್ಯಾರಂಟಿಗಳನ್ನು ನೀಡಿದ್ದೇವೆ. ಎತ್ತಿನಹೊಳೆ ನೀರನ್ನು ಬಯಲು ಸೀಮೆ ಪ್ರದೇಶಗಳಿಗೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆದಷ್ಟು ಶೀಘ್ರ ಹರಿಸಲಾಗುವುದು ಎಂದರು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ‌.ಎಚ್. ಮುನಿಯಪ್ಪ‌ ಮಾತನಾಡಿ, ಸರ್ಕಾರದ ಎರಡು ವರ್ಷದ ಸಾಧನೆಯನ್ನು ಮೊದಲ ಜಿಲ್ಲೆಯಾಗಿ ಬೆಂಗಳೂರು ಗ್ರಾಮಾಂತರದಲ್ಲಿ ಇಂದು ಕಾರ್ಯಕ್ರಮ ಮಾಡ್ತಿದ್ದೇವೆ. ಸಿಎಂ ಸಿದ್ದರಾಮಯ್ಯನವರು ನುಡಿದಂತೆ ನಡೆದಿದ್ದಾರೆ ಎಂದರು.

ಇನ್ನು ತಡವಾದರೂ ಹತ್ತು ಕೆಜಿ ಅಕ್ಕಿಯನ್ನ ವಿತರಿಸಿದ್ದಾರೆ. ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಶಸ್ವಿಯಾಗಿ ಜಾರಿಗೆ ಮಾಡಿದ್ದಾರೆ. ಎತ್ತಿನಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಕೊಟ್ಟ ಮೇಲೆ ಕೆರೆಗಳ ತುಂಬಿಸುವ ಮಾತನ್ನು ನೀವು ಹೇಳಿದ್ರಿ. ಆದಷ್ಟು ಬೇಗನೇ ಟೆಂಡರ್ ಕರೆದು ಕಾಮಗಾರಿ ಆರಂಭಿಸಬೇಕು. ಜಿಲ್ಲೆಯ ಕಟ್ಟ ಕಡೆಯ ಗ್ರಾಮಕ್ಕೂ ನೀರು ಸಿಗುವಂತಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಲ್ಲಿ ಮನವಿ ಮಾಡಿದರು.

ಜಿಲ್ಲೆಯಲ್ಲಿ ಸಿಎಸ್‌ಆರ್ ಫಂಡ್ ಮೂಲಕ 150 ಕೋಟಿ ರೂ. ವೆಚ್ಚದಲ್ಲಿ ಶಾಲೆಗಳು ಅಭಿವೃದ್ಧಿ ಮಾಡ್ತಿದ್ದೇವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ 2.50 ಲಕ್ಷ ಕುಟುಂಬಗಳಿಗೆ ಕುಟುಂಬ ಸದಸ್ಯರೊಬ್ಬರಿಗೆ ಉದ್ಯೋಗ ಕೊಡಿಸುವ ಮಹತ್ತರ ಉದ್ದೇಶ ಹೊಂದಿದ್ದು, ಮೊದಲ ಹಂತದಲ್ಲಿ 5 ಸಾವಿರ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ಮೇಳದ ಮೂಲಕ ಕೆಲಸವನ್ನು ಕೊಡಿಸಿದ್ದೇವೆ ಎಂದು ಸಚಿವರು ಹೇಳಿದರು.

ಸರ್ಕಾರದ ಎರಡು ವರ್ಷಗಳ ಸಾಧನೆಯ ಸಾಧನೆ ಸಂಚಿಕೆ ಪುಸ್ತಕ ಬಿಡುಗಡೆಗೊಳಿಸಿ ವಿವಿಧ ಇಲಾಖೆಗಳ ಯೋಜನೆಯಡಿ ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಯಿತು.

ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್, ಸಣ್ಣ ನೀರಾವರಿ ಇಲಾಖೆ ಸಚಿವ ಬೋಸುರಾಜು, ಹೊಸಕೋಟೆ ಶಾಸಕ ಶರತ್ ಕುಮಾರ್ ಬಚ್ಚೇಗೌಡ, ನೆಲಮಂಗಲ ಶಾಸಕ ಶ್ರೀನಿವಾಸ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ರೇವಣ್ಣ, ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಸಿಇಒ ಅನುರಾಧ, ಎಸ್ಪಿ ಸಿ.ಕೆ.ಬಾಬಾ ಸೇರಿದಂತೆ ಚುನಾಯಿತ ಪ್ರತಿನಿಧಿಗಳು, ನಾಮನಿರ್ದೇಶಿತ ಸದಸ್ಯರು, ಜನಪ್ರತಿನಿಧಿಗಳು, ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

Deva
the authorDeva

Leave a Reply

error: Content is protected !!
Latest news
ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೊಂದೇ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ