ಬೆಂಗಳೂರು: ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್. ಶ್ರೀನಿವಾಸ್ ಜೆಡಿಎಸದ್‌ನಿಂದ ಗೆದ್ದಿದ್ದ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನಿಡಿದ ಎದರಡೇ ದಿನದಲ್ಲೇ ಅಂದರೆ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು.
ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಯಾದರು.
ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಮಾತನಾಡಿದ ಶ್ರೀನಿವಾಸ್, ನನ್ನನ್ನು ಕತ್ತು ಹಿಡಿದು ಪಕ್ಷದಿಂದ ಹೊರಹಾಕಿದರು. ಸ್ವಾಭಿಮಾನಕ್ಕೆ ಧಕ್ಕೆ ಬಂತು ಎಂದು ನಾನು ಜೆಡಿಎಸ್ ತೊರೆದೆ ಎಂದು ಹೇಳಿದರು.
ನಾನು ಮೂಲತಃ ಕಾಂಗ್ರೆಸ್ ಸದಸ್ಯನೇ. ಕಾಂಗ್ರೆಸ್ ಪಕ್ಷದಿಂದ ನಾನು ಜಿಲ್ಲಾ ಪಂಚಾಯಿತಿ ಸದಸ್ಯನಾಗಿದ್ದೆ. ನಮ್ಮ ತಂದೆ ಕೂಡ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದರು.
2002ರಲ್ಲಿ ನಾನು ಜೆಡಿಎಸ್ ಸೇರಿದ್ದೆ 2004ರಲ್ಲಿ ಟಿಕೆಟ್ ಕೊಡಲಿಲ್ಲ. ಆಗ ಗುಬ್ಬಿಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೆ. ನನಗೆ ನಾಟಕ ಗಿಮಿಕ್ ಮಾಡಲು ಬರಲ್ಲ ಎಂದರು.