ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ (ವಾಸು) ನಿಗಮದ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ವಾಸು ಅವರು ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿದ್ದು, ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಆದರೆ ನಿಗಮ ಸ್ಥಾನದ ಅಧ್ಯಕ್ಷಗಿರಿ ದೊರೆತ ಹಿನ್ನೆಲೆಯಲ್ಲಿ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿದ್ದು, ಪಕ್ಷ ಹೇಳಿದಂತೆ ನಾನು ಕೆಲಸ ಮಾಡಲು ಸಿದ್ಧ ಎಂದು ಈ ಹಿಂದೆಯೇ ತಿಳಿಸಿದ್ದರು.
ನಾನು KSRTC ಸಂಸ್ಥೆಯ ಅಧ್ಯಕ್ಷನಾಗುತ್ತೇನೆ ಎಂಬ ನಿರೀಕ್ಷೆಯನ್ನು ಮಾಡಿರಲಿಲ್ಲ. ಆದರೆ ನನಗೆ ಗೊತ್ತಿಲ್ಲಂತೆ ಈ ಅಧಿಕಾರ ಸಿಕ್ಕಿದ್ದು, ಇದನ್ನು ನಿಗಮದ ಏಳಿಗಾಗಿ ಉಪಯೋಜಿಸಿಕೊಳ್ಳುತ್ತೇನೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ವೇಳೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೂಗುಚ್ಛಕೊಡುವ ಮೂಲಕ ಸ್ವಾಗತಿಸಿ ಸಂಸ್ಥೆಯನ್ನು ದೇಶದಲ್ಲೇ ಮಾದರೆ ಮಾಡುವತ್ತ ಮತ್ತು ನೌಕರರಿಗೆ ಆಗುತ್ತಿರುವ ಸಮಸ್ಯೆಗಳನ್ನು ಆಲಿಸುವ ಮೂಲಕ ಶ್ರಮಿಸಬೇಕು ಎಂದು ಕಿವಿಮಾತು ಹೇಳಿದರು.
ಸಹಕಾರ ಸಚಿವ ಕೆ.ಎನ್.ರಾಜಣ್ಣ, ನಿಗಮದ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಸೇರಿದಂತೆ ಹಲವರು ಇದ್ದರು.