CrimeNEWSನಮ್ಮಜಿಲ್ಲೆ

KSRTC ಗುಂಡ್ಲುಪೇಟೆ: ಚಲಿಸುತ್ತಿದ್ದಾಗಲೇ ಕಳಚಿಬಿದ್ದ ಬಸ್‌ ಮುಂದಿನ ಚಕ್ರ: ಅಧಿಕಾರಿಗಳ ವಿರುದ್ಧ ಪ್ರಯಾಣಿಕರ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಬಸ್‌ ಚಲಿಸುತ್ತಿದ್ದಾಗಲೇ ಮುಂಬದಿ ಚಕ್ರ ಕಳಚಿದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೋಡಹಳ್ಳಿ ಸಮೀಪ ನಡೆದಿದೆ.

ಇಂದು ಬಾಚಹಳ್ಳಿ-ಗುಂಡ್ಲುಪೇಟೆ ಮಾರ್ಗದಲ್ಲಿ ಸಂಚರಿಸುವ ಗುಂಡ್ಲುಪೇಟೆ ಘಟಕಕ್ಕೆ ಸೇರಿದ ಬಸ್ ಇದಾಗಿದ್ದು, ಕೋಡಹಳ್ಳಿ ಸಮೀಪ ಬಸ್‌ನ ಮುಂಬದಿ ಚಕ್ರದ ರಾಡ್ ಕಟ್ಟಾಗಿ ಅವಘಡ ಸಂಭವಿಸಿದೆ. ಈ ವೇಳೆ ಬಸ್‌ನಲ್ಲಿ ವಿದ್ಯಾರ್ಥಿಗಳು ಸೇರಿದಂತೆ, ಪ್ರಯಾಣಿಕರು ಸೇರಿ 55ಕ್ಕೂ ಅಧಿಕ ಮಂದಿ ಇದ್ದರು. ಸದ್ಯ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಸ್‌ಗಳನ್ನು ನಿರ್ವಹಣೆ ಮಾಡುವಲ್ಲಿ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ. ಹಳೇ ಡಕೋಟಾ ಬಸ್‌ಗಳನ್ನು ಗ್ರಾಮಾಂತರ ಪ್ರದೇಶಕ್ಕೆ ನಿಯೋಜನೆ ಮಾಡಿದ್ದಾರೆ ಎಂದು ಪ್ರಯಾಣಿಕರು ಸ್ಥಳೀಯರು ಸಾರಿಗೆ ಸಂಸ್ಥೆ ವಿರುದ್ಧ ಆಕ್ರೋಶ ಹೊರಹಾಕಿದರು.

ಶಕ್ತಿ ಯೋಜನೆ ದೂರಿದ ಜನ: ಹೆಣ್ಣುಮಕ್ಕಳಿಗೆ ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಸೌಲಭ್ಯ ನೀಡುವ ಶಕ್ತಿ ಯೋಜನೆಯಿಂದಾಗಿ ಸಾರಿಗೆ ಬಸ್‌ಗಳು ಇಂತಹ ದುಸ್ಥಿತಿ ತಲುಪಿವೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಕ್ತಿ ಯೋಜನೆಯಿಂದಾಗಿ ಬಸ್‌ಗಳಲ್ಲಿ ಹೆಚ್ಚಿನ ಜನ ಪ್ರಯಾಣಿಸುತ್ತಿದ್ದಾರೆ. ಇದರಿಂದಾಗಿ ಬಸ್‌ಗಳು ಹಾಳಾಗುತ್ತಿವೆ. ಬಸ್‌ಗಳ ಸರಿಯಾದ ನಿರ್ವಹಣೆಯೂ ಇಂತಹ ಪರಿಸ್ಥಿತಿ ಎದುರಾಗಲು ಕಾರಣವಾಗಿದೆ. ಮಾರ್ಗ ಮಧ್ಯದಲ್ಲೇ ಹೆಚ್ಚಿನ ಬಸ್‌ಗಳು ಕೆಟ್ಟುನಿಲ್ಲುತ್ತಿವೆ ಎಂದು ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವು ಕಾರಣ ಎಂದು ಕಿಡಿಕಾರಿದ್ದಾರೆ.

error: Content is protected !!
LATEST
KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ ನಾಗಮಂಗಲ ಕೋಮುಗಲಭೆ ಪ್ರಕರಣ: ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅಮಾನತು KSRTC ಸಿಬ್ಬಂದಿಯಿಂದಲೇ ಡಿಸಿಗೆ ಇರಿಯಲು ಯತ್ನ- ಕೈ ಅಡ್ಡಹಾಕಿ ಪ್ರಾಣಾಪಾಯದಿಂದ ಪಾರಾದ ಜಗದೀಶ್ ಕುಮಾರ್‌ "ARM" ಸಿನಿಮಾ ಇಂದು ಪ್ರಪಂಚದಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆ ಸೆ.14ರಂದು ಸಾರಿಗೆ ಸಿಬ್ಬಂದಿಗಳಿಗೆ ಔಷಧೀಯ ಸಸ್ಯಗಳ  ಉಚಿತ ವಿತರಣೆ: ಅಧಿಕಾರಿಗಳು ಭಾಗಿ ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್! ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಬಂಧನ ಅವಧಿ ಮತ್ತೆ ಒಂದು ದಿನ ವಿಸ್ತರಣೆ KSRTC ಚಿಕ್ಕಮಗಳೂರು: ಘಟಕದ ಗೇಟ್‌ ಬಳಿ ತ್ಯಾಜ್ಯಗಳ ನಡುವೆ ಚಾಲಕನ ಪಾರ್ಥಿವ ಶರೀರವಿಟ್ಟು ಅಂತಿಮ ದರ್ಶನಕ್ಕೆ ವ್ಯವಸ್ಥೆ-... ವಾಲ್ಮೀಕಿ ಹಗರಣ: ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ - ಛಲವಾದಿ ನಾರಾಯಣಸ್ವಾಮಿ