NEWSನಮ್ಮರಾಜ್ಯರಾಜಕೀಯ

ಎಚ್.ವೈ.ಮೇಟಿ ದೀರ್ಘಕಾಲ ಜನಪರ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕ: ಸಿಎಂ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಮಾಜಿ ಸಚಿವರು, ಹಾಲಿ ಶಾಸಕರಾಗಿದ್ದ ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರಾದ ಎಚ್.ವೈ.ಮೇಟಿ ಅವರು ದೀರ್ಘ ಕಾಲ ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕ. ನನ್ನ ಅನುಯಾಯಿಗಳಲ್ಲಿ ಮೇಟಿ ಅಗ್ರಗಣ್ಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇತ್ತೀಚೆಗೆ ಅಗಲಿದ ಎಚ್.ವೈ.ಮೇಟಿ ಅವರಿಗೆ ಇಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಆದರಂಭವಾದ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಂತಾಪ ಸೂಚಿಸಿದರು.

ವೃತ್ತಿಯಲ್ಲಿ ಕೃಷಿಕರಾಗಿದ್ದ ಮೇಟಿಯವರು ಬಿಲ್‌ಕೆರೂರು ಮಂಡಳ ಪಂಚಾಯಿತಿ ಅಧ್ಯಕ್ಷರಾಗುವ ಮೂಲಕ ರಾಜಕೀಯ ಪ್ರವೇಶಿಸಿದ್ದರು. ಬಾಗಲಕೋಟೆ ತಾಲೂಕು ಕೃಷಿ ಹುಟ್ಟುವಳಿ ಮಾರಾಟ ಸಮಿತಿ, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ, ಮತ್ತು ಎಂ.ಎಸ್.ಐ.ಎಲ್.ನ ಅಧ್ಯಕ್ಷರಾಗಿ ಡಿ.ಸಿ.ಸಿ ಬ್ಯಾಂಕ್ ಹಾಗೂ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

ಇನ್ನು 1983 ರಿಂದಲೂ ಎಚ್.ವೈ. ಮೇಟಿಯವರೊಂದಿಗೆ ಒಡನಾಡವಿತ್ತು. ನಾನು ಜನತಾ ಪಕ್ಷ, ಜನತಾ ದಳ ಹಾಗೂ ಕಾಂಗ್ರೆಸ್ ಪಕ್ಷದಲ್ಲಿದ್ದರೂ ನಾನು ಕೈಗೊಳ್ಳುವ ತೀರ್ಮಾನಗಳಿಗೆ ಬದ್ಧರಾಗಿದ್ದರು. ಅಹಿಂದ ಸಂಘಟನೆಯಲ್ಲಿ ನನ್ನೊಂದಿಗೆ ಹೆಗಲು ಕೊಟ್ಟು ದುಡಿದವರು ಎಂದು ನೆನಪಿಸಿಕೊಂಡರು.

ಶಾಸಕರಾಗಿ, ಸಂಸದರಾಗಿ, ಸಚಿವರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಮೇಟಿಯವರು, ಸಜ್ಜನ ರಾಜಕಾರಣಿ. ರಾಜಕೀಯ ತತ್ವಗಳನ್ನು ತಪ್ಪದೇ ಪಾಲಿಸುತ್ತಿದ್ದ ಅವರು ಜನರೊಂದಿಗೆ ಬೆರೆಯುವ ಗುಣವಿದ್ದು, ಜಾತ್ಯತೀತ ತತ್ವದ ಪಾಲಕರಾಗಿದ್ದರು. ಅವರು ಎಲ್ಲ ಜಾತಿ-ಧರ್ಮಗಳನ್ನು ಪ್ರೀತಿಯಿಂದ ಕಾಣುವ ಸ್ವಭಾವದವರಾಗಿದ್ದರು ಎಂದು ಸಂತಾಪ ಸೂಚಿಸಿದರು.

Megha
the authorMegha

Leave a Reply

error: Content is protected !!