NEWSನಮ್ಮಜಿಲ್ಲೆ

ಹನೂರು: ಪಟ್ಟಣ ಪಂಚಾಯಿತಿ ವಿರುದ್ಧ ಜೆಡಿಎಸ್ ಸದಸ್ಯರ ಮೌನ ಪ್ರತಿಭಟನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಪಟ್ಟಣ ಪಂಚಾಯಿತಿ ಆಡಳಿತ ವಿಫಲವಾಗಿದೆ ಎಂದು 13ನೇ ವಾರ್ಡಿನ ಜೆಡಿಎಸ್ ಸದಸ್ಯ ಮಹೇಶ್ ಆರೋಪಿಸಿದ್ದಾರೆ.

ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲಿ ಮೌನ ಪ್ರತಿಭಟನೆ ಹಮ್ಮಿಕೊಂಡು ಮಾತನಾಡಿದ ಅವರು ಪಟ್ಟಣ ವ್ಯಾಪ್ತಿಯ 13 ವಾರ್ಡ್ ಗಳಿಗೆ ಸಮರ್ಪಕವಾಗಿ ಕಾವೇರಿ ಕುಡಿಯುವ ನೀರು, ಬೀದಿದೀಪ, ರಸ್ತೆ, ಚರಂಡಿ ಸ್ವಚ್ಛಗೊಳಿಸುವುದು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ದೊರಕಿಸಿಕೊಡುವಲ್ಲಿ ಆಡಳಿತ ವಿಫಲವಾಗಿದೆ.

ಈ ಬಗ್ಗೆ ಹಲವು ಬಾರಿ ಅಧ್ಯಕ್ಷರು,ಉಪಾಧ್ಯಕ್ಷರು ಮುಖ್ಯಾಧಿಕಾರಿಗಳ ಗಮನಕ್ಕೆ ತಂದರೂ ಸಹ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ ಇದರಿಂದ ವಾರ್ಡ್ ಗಳಲ್ಲಿ ನಮಗೆ ಮತ ನೀಡಿದವರಿಗೆ ಉತ್ತರಿಸಲು ಸಾಧ್ಯವಾಗದೆ ಅಸಹಾಯಕರಾಗಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

2019-20ರಿಂದ 24.10%,7.25% ‘ 5%ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡಿರುವುದಿಲ್ಲ. ಅಧ್ಯಕ್ಷರು ಸಾಮಾನ್ಯ ಸಭೆ ಹೊರತುಪಡಿಸಿ 1ದಿನವಾದರೂ ಕಚೇರಿಗೆ ಬರುತ್ತಿಲ್ಲ. ಉಪಾಧ್ಯಕ್ಷರು ಕಚೇರಿಗೆ ಬಂದರೂ ಸಹ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸುತ್ತಿಲ್ಲ. ಸಮಸ್ಯೆಗಳ ಬಗ್ಗೆ ಮುಖ್ಯಾಧಿಕಾರಿಗಳ ಗಮನಕ್ಕೆ ತಂದರೂ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದಾರೆ ಎಂದು ಜೆಡಿಎಸ್ ಪಟ್ಟಣ ಪಂಚಾಯಿತಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಅಭಿವೃದ್ಧಿ ಕುಂಠಿತ: ಪಟ್ಟಣ ಪಂಚಾಯಿತಿ ಆದಾಯ ಮೂಲಗಳಾದ ಉದ್ದಿಮೆ ಪರವಾನಿಗೆ , ನೀರಿನ ಕಂದಾಯ, ಕಟ್ಟಡಗಳ ತೆರಿಗೆ ಹಾಗೂ ಮಳಿಗೆಗಳಿಂದ ಸರಿಯಾದ ರೀತಿ ಬಾಡಿಗೆ ವಸೂಲಾತಿ ಮಾಡದ ಹಿನ್ನೆಲೆ ಪಟ್ಟಣದ ಅಭಿವೃದ್ಧಿ ಕುಂಠಿತವಾಗಿದೆ.

ಸಾಮಾನ್ಯ ಸಭೆಗಳಲ್ಲಿ ಹಲವು ಬಾರಿ ಅಧ್ಯಕ್ಷರ ಗಮನಕ್ಕೆ ತಂದರು ಸೌಜನ್ಯಕ್ಕೂ ಅಧಿಕಾರಿಗಳ ಜತೆ ಚರ್ಚಿಸಿಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಕಚೇರಿಯಲ್ಲಿ ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ.

ಜೆಡಿಎಸ್ ಸದಸ್ಯರಾದ ಮಹೇಶ್, ಮಹೇಶ್ ನಾಯ್ಕ, ಮುಮ್ತಾಜ್ ಬಾನು, ಆನಂದ್ ಕುಮಾರ್, ಪವಿತ್ರ,ಮಂಜುಳಾ ಬಿಜೆಪಿ ಸದಸ್ಯೆ ರೂಪಾ ಪಾಲ್ಗೊಂಡಿದ್ದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...