Please assign a menu to the primary menu location under menu

NEWSನಮ್ಮರಾಜ್ಯಸಂಸ್ಕೃತಿ

ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಹಾಸನದ ಹಾಸನಾಂಬೆ ದೇವಿ ಉತ್ಸವ ಭಾನುವಾರ (ನ.3) ಸಂಪನ್ನಗೊಂಡಿದೆ. 11 ದಿನಗಳ ಉತ್ಸವದಲ್ಲಿ 9 ದಿನಗಳ ಕಾಲ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಬರೋಬ್ಬರಿ 20.40 ಲಕ್ಷ ಭಕ್ತರು ಹಾಸನಾಂಬೆ ದೇವಿ ದರ್ಶನ ಪಡೆದುಕೊಂಡಿದ್ದಾರೆ.

ಕಳೆದ ವರ್ಷ 14 ಲಕ್ಷ ಭಕ್ತರು ದೇಗುಲಕ್ಕೆ ಭೇಟಿ ನೀಡಿದ್ದರು. ಈ ವರ್ಷ ಶಕ್ತಿ ಯೋಜನೆಯ ಎಫೆಕ್ಟ್​ನಿಂದಾಗಿ 20.40 ಲಕ್ಷ ಭಕ್ತರು ಜಗನ್ಮಾತೆಯ ದರ್ಶನ ಪಡೆಯುವ ಮೂಲಕ ದಾಖಲೆ ಬರೆದಿದ್ದಾರೆ.

ಈ ನಡುವೆ ಹುಂಡಿ ಹಣ ಬಿಟ್ಟು ಕೇವಲ ಟಿಕೆಟ್ ಹಾಗೂ ಲಡ್ಡು ಪ್ರಸಾದ ಮಾರಾಟದಿಂದ 9.69 ಕೋಟಿ ರೂ.ಗಳಷ್ಟು ಆದಾಯ ಸಂಗ್ರಹವಾಗಿದ್ದರೆ, ಹುಂಡಿ ಕಾಣಿಕೆಯನ್ನು ಸೇರಿಸಿದರೆ 12,63,83,808 ಆದಾಯ ಸಂಗ್ರಹವಾಗಿದೆ. ಇಷ್ಟೊಂದು ಪ್ರಮಾಣದ ಆದಾಯ ಹಾಸನಾಂಬೆ ದರ್ಶನದ ಇತಿಹಾಸದಲ್ಲೇ ದಾಖಲೆಯಾಗಿದೆ.

ಸೋಮವಾರವಾದ ಇಂದು (ನ.4) 500 ಜನರಿಂದ 7 ಗಂಟೆಗಳ ಕಾಲ ಹಾಸನಾಂಬೆ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಒಟ್ಟಾರೆ 9 ದಿನಗಳ ಕಾಲ ನಡೆದ ಹಾಸನಾಂಬೆ ದರ್ಶನ ವೇಳೆ 12,63,83,808 ರೂ. ಕಾಣಿಕೆ ಸಂಗ್ರವಾಗಿದೆ.

1000, 300 ಟಿಕೆಟ್, ಲಡ್ಡು ಪ್ರಸಾದ ಮಾರಾಟದಿಂದ 9,67,27,180 ರೂಪಾಯಿ ಹಾಗೂ ದೇವಸ್ಥಾನದ ಹುಂಡಿಯಲ್ಲಿ 2,55,97,567 ರೂ. ಸೇರಿದಂತೆ 2024ರ ಹಾಸನಾಂಬೆ ದರ್ಶನೋತ್ಸವವವೂ ಸೇರಿ ಒಟ್ಟು 12,63,83,808 ರೂಪಾಯಿ ಆದಾಯ ಬಂದಿದೆ. ಇದರ ಜೊತೆಗೆ 51 ಗ್ರಾಂ ಚಿನ್ನ ಹಾಗೂ 913 ಗ್ರಾಂ ಬೆಳ್ಳಿ ಕಾಣಿಕೆಯಾಗಿದೆ ಬಂದಿದೆ. ಹಾಸನಾಂಬೆ ದರ್ಶನದ ಇತಿಹಾಸದಲ್ಲೇ ಹರಿದುಬಂದ ದಾಖಲೆಯ ಆದಾಯ ಇದಾಗಿದೆ.

ಕಳೆದ ವರ್ಷಕ್ಕಿಂತ ಈ ವರ್ಷ ಅಧಿಕ ಭಕ್ತರು ಆಗಮಿಸಿದ್ದರಿಂದ ದರ್ಶನ ವ್ಯವಸ್ಥೆಯಲ್ಲಿ ಕೊಂಚ ಅಸ್ತವ್ಯಸ್ತವಾಗಿದೆ. ಸರಿಯಾದ ವ್ಯವಸ್ಥೆ ಇಲ್ಲದೇ ದೇವಿ ದರ್ಶನಕ್ಕೆ ಬಂದಿದ್ದ ಭಕ್ತರು ಪರದಾಡಿದರು. ಜಿಲ್ಲಾಡಳಿತ ವಿರುದ್ಧ ಆರೋಪಗಳು ಕೇಳಿಬರುತ್ತಲ್ಲೇ ವಿವಿಐಪಿ ಪಾಸ್​ಗಳನ್ನು ರದ್ದುಗೊಳಿಸಿ ಸುಗಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಆಗ ಕೊಂಚ ಪರಿಸ್ಥಿತಿ ಸುಧಾರಣೆಯಾಯ್ತು.

ಈ ವರ್ಷದ ಹಾಸನಾಂಬೆಯ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿದೆ. ಮುಂದಿನ ವರ್ಷ ಅಕ್ಟೋಬರ್ 9ರಿಂದ 23ರವರೆಗೆ ಅಂದ್ರೆ 15 ದಿನಗಳ ಕಾಲ ಹಾಸನಾಂಬೆ ಉತ್ಸವಕ್ಕೆ ಮುಹೂರ್ತ ನಿಗದಿಯಾಗಿದೆ.

Leave a Reply

error: Content is protected !!
LATEST
ಪತ್ನಿ ಅಕ್ರಮ ಸಂಬಂಧದಿಂದ ಪತಿ ಆತ್ಮಹತ್ಯೆ ಪ್ರಕರಣ: ಹೆಂಡತಿಗೆ ಶಿಕ್ಷಿಸಲಾಗದು - ಹೈ ಕೋರ್ಟ್ ತೀರ್ಪು ತುಮಕೂರು: ಗೋವಾಗೆ ಹೋಗುತ್ತಿದ್ದ ಬಸ್ ಪಲ್ಟಿ: ಮೂವರು ಮಹಿಳೆಯರು ಮೃತ ಮೈಸೂರು-ಮಂಡ್ಯ: ಮಳೆ ಹೆಚ್ಚಾಗಿರುವ ಹಿನ್ನೆಲೆ ಶಾಲೆಗಳಿಗೆ ರಜೆ- ಡಿಸಿಗಳ ಆದೇಶ ದೆಹಲಿ: ರೈತರು ಉಪವಾಸ ಸತ್ಯಾಗ್ರಹ ಬೆಂಬಲಿಸಿ ಡಿ.6ರಿಂದ ಬೆಂಗಳೂರಿನಲ್ಲೂ ಸತ್ಯಾಗ್ರಹ: ಕುರುಬೂರು ಶಾಂತಕುಮಾರ್ ರಾಜ್ಯದಲ್ಲಿ ವರುಣನ ಅಬ್ಬರ: ಹಲವು ಜಿಲ್ಲೆಗಳ ಶಾಲಾ- ಕಾಲೇಜುಗಳಿಗೆ ನಾಳೆ ರಜೆ ಕನ್ನಡ ಕಿರುತೆರೆಯ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಶಿವಣ್ಣ ಆತ್ಮಹತ್ಯೆ KSRTC: 1308 ನೌಕರರ ವರ್ಗಾವಣೆ- ಆಕ್ಷೇಪಣೆ ಸಲ್ಲಿಸಲು ಡಿ.4ರವರೆಗೂ ಅವಕಾಶ ಸಾರಿಗೆ ನೌಕರರ ಬೇಡಿಕೆ ಅರ್ಥ ಮಾಡಿಕೊಳ್ಳಿ: ಜಂಟಿ ಕ್ರಿಯಾ ಸಮಿತಿಗೆ ನೌಕರನ ಒತ್ತಾಯ ಬಿಬಿಎಂಪಿ: 13 ಕೆರೆಗಳ ಒತ್ತುವರಿ ತೆರವು- ₹242.5 ಕೋಟಿ ಮೌಲ್ಯದ 7 ಎಕರೆ ಪ್ರದೇಶ ವಶ -ಪ್ರೀತಿ ಗೆಹ್ಲೋಟ್ ಫೆಂಗಲ್ ಚಂಡಮಾರುತದ ಪರಿಣಾಮ ಎಲ್ಲಾ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ: ತುಷಾರ್ ಗಿರಿನಾಥ್